ಮಡಿಕೇರಿ ಫೆ.28 NEWS DESK : ವಲಯ ಅರಣ್ಯಾಧಿಕಾರಿ ಸೇರಿದಂತೆ ಉಳಿದ ಬೇಡಿಕೆಗಳಿಗೆ ತಜ್ಞರ ಸಮಿತಿಯನ್ನು ರಚಿಸಿ ಬೇರೆ ಬೇರೆ ರಾಜ್ಯಗಳಿಂದ ವರದಿಗಳನ್ನು ತರಿಸಿ. ತಜ್ಞರ ಸಮಿತಿ ವರದಿ ತಯಾರಿಸಿ ನಿಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸಲಾಗುವುದು. ಸರ್ಕಾರ ನಿಮ್ಮ ಪರವಾಗಿದೆ. ನಿಮ್ಮ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧವಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.
ಕರ್ನಾಟಕ ಅರಣ್ಯ ವಿದ್ಯಾರ್ಥಿಗಳು ಮತ್ತು ಪದವೀದರರ ಅಸೋಸಿಯೇಷನ್ ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿದರು.
ನಂತರ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ಅವರೊಂದಿಗೆ ನಿಮ್ಮ ಬೇಡಿಕೆಗಳ ಬಗ್ಗೆ ದೂರವಾಣಿ ಮುಖಾಂತರ ಮಾತನಾಡಿರುವುದಾಗಿ ತಿಳಿಸಿದರು.
ಪ್ರಕೃತಿ ಪರಿಸರ, ಅರಣ್ಯ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಅರಣ್ಯ ಸಂರಕ್ಷಣೆ, ವನ್ಯ ಜೀವಿ ಸಂರಕ್ಷಣೆ. ಎಲ್ಲಾ ಕಡೆ ಮಾಲಿನ್ಯ ಇದೆ. ನೀರಿನಲ್ಲಿ ಮಾಲಿನ್ಯ, ಗಾಳಿಯಲ್ಲೂ ಮಾಲಿನ್ಯ, ಹೀಗಾಗಿ ಜಾಗತಿಕ ತಾಪಮಾನ ಹೆಚ್ಚಾಗಿ ಅನೇಕ ರೋಗ ರುಜಿನಗಳು ಬರುತ್ತಿವೆ. ಇರುವಂತಹ ಒಂದೇ ಭೂಮಿಯಲ್ಲಿ ಪರಿಸರವನ್ನು ಸಂರಕ್ಷಣೆ ಮಾಡಿ ಆರೋಗ್ಯಕರವಾಗಿ ಮುಂದಿನ ಪೀಳಿಗೆಗೆ ಹಸ್ತಾಂತರಿಸಬೇಕಾಗಿದೆ. ಅಂತಹ ಒಂದು ಜವಾಬ್ದಾರಿ ನಿಮ್ಮ ಮೇಲಿದೆ ಎಂದರು.
ನಿಮ್ಮ ಬೇಡಿಕೆಗಳಾದ ಉಪವಲಯ ಅರಣ್ಯಾಧಿಕಾರಿಗಳಲ್ಲಿ ಶೇ.50 ಪ್ರತಿಶತ ಅರಣ್ಯ ಪದವೀಧರರಿಗೆ ಮೀಸಲು ಇರಿಸಲಾಗಿತ್ತು. ಆಡಳಿತ ಸಮಿತಿಯ ವರದಿಯಲ್ಲಿ ಶೇ.100 ಮುಂಬಡ್ತಿ ಮುಖಾಂತರ ತುಂಬಲು ಶಿಫಾರಸ್ಸು ಮಾಡಿರುತ್ತಾರೆ. ಅದೇ ರೀತಿ ಒಪ್ಪಿಕೊಂಡರೆ ಅರಣ್ಯ ಪದವೀಧರರಿಗೆ ನೌಕರಿ ಅವಕಾಶ ಇಲ್ಲದಂತಾಗುತ್ತದೆ. ಆದ್ದರಿಂದ ನಮ್ಮ ಸರ್ಕಾರ ಆಡಳಿತ ಸುಧಾರಣಾ ವರದಿಯನ್ನು ಜಾರಿಗೆ ತರುವುದಿಲ್ಲ. ಆದ್ದರಿಂದ ನಿಮ್ಮ ಮುಷ್ಕರ ಕೈಬಿಡಲು ಮನವಿ ಮಾಡಿದರು.
ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಮಾತನಾಡಿ, ಆಡಳಿತಾತ್ಮಕ ಸುಧಾರಣಾ ಸಮಿತಿಯು ನೀಡಿದ ವರದಿಯನ್ನು ಪರಿಶೀಲನೆ ಮಾಡಬೇಕಾಗಿದೆ. ಅದನ್ನು ಮಾಡಿಯೇ ಮಾಡುತ್ತೇನೆ. 2022 ರಲ್ಲಿ ಆಗಿರುವ ತಿದ್ದುಪಡಿ ಮತ್ತು ಕಡ್ಡಾಯ ಮೀಸಲಾತಿ ಯಾವತ್ತು ಇರಲಿಲ್ಲ. ಆದರೂ ನಿಮ್ಮ ಬೇಡಿಕೆ ತಾಂತ್ರಿಕವಾಗಿ ಸರಿ ಇದ್ದು ಪರಿಶೀಲನೆ ಮಾಡುವುದಾಗಿ ಹೇಳಿದರು.
ತಜ್ಞರು ಸಮಿತಿ ರಚನೆ ಮಾಡಬೇಕೆಂದು ಈಗಾಗಲೇ ಮನವಿ ಮಾಡಿದ್ದೇನೆ. ಸರ್ಕಾರ ನಿಮ್ಮ ಬಳಿ ಬಂದಿದೆ. ಇದು ನಿಮಗೆ ಸಂದ ಜಯವಾಗಿದೆ. ನಮ್ಮ ತಜ್ಞರ ವರದಿ ಆಧಾರದ ಮೇಲೆ ನಿಮ್ಮ ಬೇಡಿಕೆಗಳನ್ನು ಈಡೇರಿಸಲಾಗುವುದು. ಆದ್ದರಿಂದ ಮುಷ್ಕರವನ್ನು ಕೈಬಿಡುವಂತೆ ಮನವಿ ಮಾಡಿದರು.
ಈ ಸಂಧರ್ಭದಲ್ಲಿ ಶಾಸಕ ರಂಗನಾಥ, ರಾಜುಗೌಡ, ರವಿಶಂಕರ ಹಾಜರಿದ್ದರು.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*