ಮಡಿಕೇರಿ ಫೆ.28 NEWS DESK : ವಿದ್ಯುತ್ ವಿತರಣಾ ಕೇಂದ್ರ ಮತ್ತು ಮಾರ್ಗದಲ್ಲಿ ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯ ನಿರ್ವಹಿಸಬೇಕಿರುವುದರಿಂದ ಕ.ವಿ.ಪ್ರ.ನಿ.ನಿ. ಅವರ ಕೋರಿಕೆಯಂತೆ ಫೆಬ್ರವರಿ, 29 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯ ವರೆಗೆ 66/11 ಕೆವಿ ಸುಂಟಿಕೊಪ್ಪ, ಹಾಗೂ 66/11 ಕೆವಿ ಮಡಿಕೇರಿ ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಆದ್ದರಿಂದ ಸುಂಟಿಕೊಪ್ಪ, ಗದ್ದೆಹಳ್ಳ, ನಾರ್ಗಾಣ, ನಾಕೂರು, ಅಂದಗೋವೆ, ಕಲ್ಲೂರು, ಮಳ್ಳೂರು, ಹೇರೂರು, ಹೊಸಕೋಟೆ, ಕೊಡಗರಹಳ್ಳಿ, ಕಂಬಿಬಾಣೆ, ಕೆದಕಲ್, ಹಾಲೇರಿ, ಮಾದಾಪುರ ಕಾಂಡನಕೊಲ್ಲಿ, ಹಟ್ಟಿಹೊಳೆ, ಜಂಬೂರು, ಗರ್ವಾಲೆ, ಚೆಟ್ಟಳ್ಳಿ, ವಾಲ್ನೂರು ತ್ಯಾಗತೂರು, ಮತ್ತಿಕಾಡು, ಮಡಿಕೇರಿ ಪಟ್ಟಣ, ಬೋಯಿಕೇರಿ ಗಾಳಿಬೀಡು, ಕುಂಡಮೇಸ್ತ್ರಿ, ಮೇಕೇರಿ, ಕಡಗದಾಳು, ಸಂಪಾಜೆ, ಭಾಗಮಂಡಲ, ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ಕೋರಿದ್ದಾರೆ.








