ಸುಂಟಿಕೊಪ್ಪ ಫೆ.28 NEWS DESK : ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಸರಣಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬೈಕ್ ಸಹಿತ ಆರೋಪಿಯನ್ನು ಬಂಧಿಸಿದ್ದಾರೆ. ಮಂಗಳೂರಿನ ಪಡಿಲು ಸಮೀಪದ ಬಜಲು ಎಂಬಲ್ಲಿನ ನಿವಾಸಿ ಹಿಜಾಜ್ ಆಹ್ಮದ್ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಖಚಿತ ಸುಳಿವಿನ ಆಧಾರದಲ್ಲಿ ದಾಳಿ ನಡೆಸಿದ ಪೊಲೀಸರು ಕಳ್ಳತನವಾಗಿದ್ದ ಬೈಕ್ ಸಹಿತ ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಎಂ.ಸಿ.ಶ್ರೀಧರ್, ಮುಖ್ಯ ಸಿಬ್ಬಂದಿ ಸತೀಶ್, ಜಗದೀಶ್, ಉದಯ್, ಲೀಲಾವತಿ, ಪ್ರವೀಣ್, ಸತೀಶ್ ಬಿಳಿಕೆರೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.










