ಮಡಿಕೇರಿ ಫೆ.29 NEWS DESK : ತೋಟಗಾರಿಕೆ ಇಲಾಖೆ ಅಧೀನದ ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ ರೈತ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಯು ಮೇ 2 ರಿಂದ ಆರಂಭವಾಗಲಿದೆ. ತೋಟಗಾರಿಕೆ ತರಬೇತಿ ಕೇಂದ್ರ, ಸೋಮನಹಳ್ಳಿ ಕಾವಲ್, ಹಾಸನ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗುತ್ತದೆ. ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಈ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಏ.1 ರ ಸಂಜೆ 5 ಗಂಟೆ ಯೊಳಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಈ ಕಚೇರಿ ಬೆಳಗ್ಗೆ 10 ರಿಂದ ಸಂಜೆ 5.30 ರೊಳಗೆ ಸಂಪರ್ಕಿಸಬಹುದಾಗಿದೆ ಅಥವಾ ಅಂತರ್ಜಾಲ https://horticulturedir.karnataka.gov.in ಇಲ್ಲಿ ಅರ್ಜಿ ಪಡೆಯಬಹುದಾಗಿದೆ.
ಮೂಲ ಅಗತ್ಯ ದಾಖಲಾತಿಗಳೊಡನೆ (ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಛಾಪಾಕಾಗದ, ತಂದೆ/ತಾಯಿ/ಪೋಷಕರ ಹೆಸರಿನಲ್ಲಿರುವ ಜಮೀನಿನ ಆರ್‍ಟಿಸಿ, ಜಾತಿ ಪ್ರಮಾಣ ಪತ್ರ, ಫೋಟೋ, ತಂದೆ/ ತಾಯಿಯವರ ಒಪ್ಪಿಗೆ ಪತ್ರ) ಅರ್ಹ ಅಭ್ಯರ್ಥಿಗಳು ನಿಗಧಿತ ಸಮಯದೊಳಗೆ ಅರ್ಜಿಯನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ (ರಾಜ್ಯ ವಲಯ), ಮಡಿಕೇರಿಗೆ ಖುದ್ದು ಸಲ್ಲಿಸತಕ್ಕದ್ದು ಎಂದು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
Breaking News
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*