ಗೋಣಿಕೊಪ್ಪ ಫೆ.29 NEWS DESK : ಬಹುಕಾಲದ ಬೇಡಿಕೆಯ ಗೋಣಿಕೊಪ್ಪ ಹೈಟೆಕ್ ಬಸ್ ನಿಲ್ದಾಣ ಕಾಮಗಾರಿಗೆ ಇಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಯಾವುದೇ ಕಾಮಗಾರಿಗೆ ಭೂಮಿ ಪೂಜೆ ನಡೆಸುವಾಗ ಕಾಮಗಾರಿಗೆ ಸಂಭಂದಿಸಿದಂತೆ ಅನುದಾನ ,ಅಂದಾಜು ಪಟ್ಟಿ, ಇಲಾಖಾ ಅನುಮೋದನೆ, ಕಾರ್ಯಾದೇಶ ಎಲ್ಲವನ್ನೂ ಇತ್ಯರ್ಥ ಪಡಿಸಿದ ನಂತರವೇ ಭೂಮಿ ಪೂಜೆ ಮಾಡುತ್ತಿರುವುದಾಗಿ ಸ್ಪಷ್ಟ ಪಡಿಸಿದ ಶಾಸಕರು ಕಾಮಗಾರಿಯ ಗುಣಮಟ್ಟದಲ್ಲಿ ಯಾವುದೇ ಲೋಪ ನಡೆಯದಂತೆ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಈ ಸಂದರ್ಭ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಗ್ರಾ.ಪಂ ಅಧ್ಯಕ್ಷ ಪ್ರಮೋದ್ ಗಣಪತಿ, ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಮಾಜಿ ಶಾಸಕ ಚೆಪ್ಪುಡಿರ ಅರುಣ್ ಮಾಚಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ, ಹಿಂದುಳಿದ ಘಟಕದ ಜಿಲ್ಲಾಧ್ಯಕ್ಷ ಬಾನಂಡ ಪ್ರಥ್ಯು,ವಕ್ತಾರ ಟಾಟು ಮೊಣ್ಣಪ್ಪ, ಪ್ರಮುಖರಾದ ಲಾಲ ಅಪ್ಪಣ್ಣ, ಥೆರೇಸಾ ವಿಕ್ಟರ್ ಸೇರಿದಂತೆ ಗ್ರಾ.ಪಂ ಸದಸ್ಯರುಗಳು, ಸಾರ್ವಜನಿಕರು, ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.