ಮಡಿಕೇರಿ ಫೆ.29 NEWS DESK : ಕೊಡಗು ಜಿಲ್ಲಾ ಬಿಜೆಪಿಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾಗಿ ಪುಷ್ಪ ನಾಗೇಶ್ ಹಾಗೂ ಶಿಲ್ಪಾ ಅಪ್ಪಣ್ಣ ಆಯ್ಕೆಯಾಗಿದ್ದಾರೆ.
ಪಕ್ಷಕ್ಕಾಗಿ ಇವರಿಬ್ಬರು ಸಲ್ಲಿಸಿದ ಸೇವೆಯನ್ನು ಪರಿಗಣಿಸಿ, ಪಕ್ಷದ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರ ಅನುಮೋದನೆಯೊಂದಿಗೆ ಪ್ರಧಾನ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಿರುವುದಾಗಿ ಮೋರ್ಚಾದ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ ತಿಳಿಸಿದ್ದಾರೆ.
ಮಹಿಳಾ ಮೋರ್ಚಾವನ್ನು ಮತ್ತಷ್ಟು ಬಲಿಷ್ಠಗೊಳಿಸುವ ಉದ್ದೇಶದಿಂದ ಪಕ್ಷ ಸಂಘಟನೆಯನ್ನು ಚುರುಕುಗೊಳಿಸುವುದಾಗಿ ಅವರು ಹೇಳಿದ್ದಾರೆ.








