ಮಡಿಕೇರಿ ಫೆ.29 NEWS DESK : ಪ್ರವಾಸಿಗರಿಗೆ ದ್ವಿಚಕ್ರ ವಾಹನಗಳನ್ನು ಬಾಡಿಗೆಗೆ ನೀಡುವ ಕ್ರಮವನ್ನು ವಿರೋಧಿಸಿ ಮಡಿಕೇರಿ ಪ್ರವಾಸಿ ಕಾರು ಮಾಲೀಕರ ಮತ್ತು ಚಾಲಕರ ಸಂಘ ನಗರದಲ್ಲಿ ಪ್ರತಿಭಟನೆ ನಡೆಸಿತು.
ನಗರದ ಹಳೇ ಖಾಸಗಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದ ಕಾರು ಚಾಲಕರು ರೆಂಟಲ್ ಬೈಕ್ ಕೇಂದ್ರಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಸಂಘದ ಉಪಾಧ್ಯಕ್ಷ ಸತೀಶ್ ಕುಮಾರ್ ಮಾತನಾಡಿ, ಸ್ಥಳೀಯರು ಕೆಲವರು ಹಾಗೂ ಖಾಸಗಿ ಸಂಸ್ಥೆಗಳು ಕೊಡಗು ಜಿಲ್ಲೆಯ ವಿವಿಧೆಡೆ ಕಚೇರಿ ತೆರೆದು ದ್ವಿಚಕ್ರ ವಾಹನವನ್ನು ಪ್ರವಾಸಿಗರಿಗೆ ಬಾಡಿಗೆಗೆ ನೀಡುತ್ತಿದ್ದಾರೆ. ಇದರಿಂದ ವಾಹನ ಮಾಲೀಕರು ಹಾಗೂ ಚಾಲಕರು ಆರ್ಥಿಕವಾಗಿ ತೊಂದರೆಯನ್ನು ಅನುಭವಿಸುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಪ್ರಾಕೃತಿಕ ವಿಕೋಪ, ಕೋವಿಡ್ ಮತ್ತು ಬೆಲೆ ಏರಿಕೆ ಪರಿಣಾಮ ಬಾಡಿಗೆ ಇಲ್ಲದೆ ಟ್ಯಾಕ್ಸಿ ವಾಹನಗಳ ಮಾಲೀಕರು ಹಾಗೂ ಚಾಲಕರು ವಾಹನ ವಿಮೆ, ತೆರಿಗೆ, ಎಫ್.ಸಿ, ತಿಂಗಳ ಸಾಲದ ಕಂತು ಕಟ್ಟಲಾಗದೆ ತೊಂದರೆ ಅನುಭವಿಸುತ್ತಿದ್ದರು. ಇದೀಗ ಸ್ವಲ್ಪ ಚೇತರಿಕೆ ಕಾಣುತ್ತಿರುವ ಸಂದರ್ಭದಲ್ಲೇ ಸ್ವಯಂಚಾಲಿತ ಬೈಕ್‍ಗಳನ್ನು ಬಾಡಿಗೆಗೆ ನೀಡುತ್ತಿರುವುದರಿಂದ ಮತ್ತೆ ನಮಗೆ ಕಷ್ಟ, ನಷ್ಟದ ಪರಿಸ್ಥಿತಿ ಎದುರಾಗಿದೆ ಎಂದರು.
ರೆಂಟಲ್ ಬೈಕ್ ಕೇಂದ್ರಗಳು ಸರ್ಕಾರದ ನಿಯಮವನ್ನು ಪಾಲಿಸುತ್ತಿಲ್ಲ. ಮಿತಿಗಿಂತ ಹೆಚ್ಚಿನ ವಾಹನಗಳನ್ನು ಇಟ್ಟುಕೊಂಡು ಪ್ರವಾಸಿಗರಿಗೆ ನೀಡುತ್ತಿದ್ದಾರೆ. ದರದ ವಿಚಾರದಲ್ಲಿ ಕೂಡ ಟ್ಯಾಕ್ಸಿಗಿಂತ ಕಡಿಮೆ ಎಂದು ಪ್ರತಿಬಿಂಬಿಸುತ್ತಾರೆ. ಆದರೆ ವಾಸ್ತವದಲ್ಲಿ ಟ್ಯಾಕ್ಸಿಯಷ್ಟೇ ದರ ಬೈಕ್ ಗಳಿಗೂ ಇದ್ದು, ಕಾನೂನು ಉಲ್ಲಂಘನೆಯಾಗುತ್ತಿದೆ ಎಂದು ಸತೀಶ್ ಕುಮಾರ್ ಆರೋಪಿಸಿದರು.
ಹಳೆಯ ಖಾಸಗಿ ಬಸ್ಸು ನಿಲ್ದಾಣದ ಸಮೀಪವೇ ಕಾರು ನಿಲ್ದಾಣವಿದ್ದು, ಇಲ್ಲಿರುವ ರೆಂಟಲ್ ದ್ವಿಚಕ್ರ ವಾಹನದ ಕೇಂದ್ರವನ್ನು ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿದರು.
ಸದಸ್ಯ ವಿನೋದ್ ಮಾತನಾಡಿ, ಖಾಸಗಿ ಸಂಸ್ಥೆಗಳು ಯಾವುದೇ ಅನುಮತಿ ಪಡೆಯದೆ ಬಾಡಿಗೆಗೆ ಬೈಕ್‍ಗಳನ್ನು ನೀಡುತ್ತಿದ್ದು, ಇದರಿಂದ ಬಡ ಕಾರು ಮಾಲೀಕರು ಹಾಗೂ ಚಾಲಕರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಕೊಡಗಿನಂತಹ ಗುಡ್ಡಗಾಡು ಹಾಗೂ ಇಕ್ಕಟ್ಟು ಪ್ರದೇಶದಲ್ಲಿ ವಾಹನಗಳ ಸಂಖ್ಯೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು. ಟ್ಯಾಕ್ಸಿ ವಾಹನದ ಮಾಲೀಕರು ಹಾಗೂ ಚಾಲಕರನ್ನು ಪ್ರೋತ್ಸಾಹಿಸಬೇಕೆಂದು ಮನವಿ ಮಾಡಿದರು.
ಸಂಘದ ಅಧ್ಯಕ್ಷ ಸಂತು ಕಾರ್ಯಪ್ಪ, ಕಾರ್ಯದರ್ಶಿ ಅರಸು, ಕೋಶಾಧಿಕಾರಿ ವೀರು, ಸಹ ಕಾರ್ಯದರ್ಶಿ ನವೀನ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*