ಮಡಿಕೇರಿ ಮಾ.1 NEWS DESK : ದೇವರಕೊಲ್ಲಿ ಶ್ರೀ ಚಾಮುಂಡೇಶ್ವರಿ ದೇವಾಲಯ ಹಾಗೂ ಬಾಲ ಸಂಸ್ಕಾರ ಶಿಕ್ಷಣ ಸಮಿತಿಯ ಸಂಯುಕ್ತಾಶ್ರಯದಲ್ಲಿ ಬಾಲ ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭ ನಡೆಯಿತು.
ದೇವರಕೊಲ್ಲಿಯ ಶ್ರೀ ಚಾಮುಂಡೇಶ್ವರಿ ದೇವಾಲಯದ ಸಭಾಂಗಣದಲ್ಲಿ ನಿವೃತ್ತ ಅಧ್ಯಾಪಕ ಎಂ.ಎಸ್.ಶಿವರಾವ್ ಅವರ ನೇತೃತ್ವದಲ್ಲಿ ಕಳೆದ 12 ವಾರಗಳ ಕಾಲ ಪ್ರತಿ ಭಾನುವಾರ ಶಿಬಿರವನ್ನು ನಡೆಸಲಾಯಿತು. ದೇವರಕೊಲ್ಲಿ, ಮದೆ, 2ನೇ ಮೊಣ್ಣಂಗೇರಿ, ಜೋಡುಪಾಲ, ಕೊಯನಾಡು ಭಾಗದ 60 ಕ್ಕೂ ಹೆಚ್ಚು ಮಕ್ಕಳಿಗೆ ಹಿಂದೂ ಧರ್ಮದ ಸಂಸ್ಕಾರ, ಆಚಾರ ವಿಚಾರ, ಶ್ಲೋಕ, ಯೋಗ ಮತ್ತು ದೇಶಭಕ್ತಿ ಗೀತೆಯನ್ನು ಹೇಳಿ ಕೊಡಲಾಯಿತು. ಬುದ್ದಿಯನ್ನು ಚುರುಕುಗೊಳಿಸುವ ಆಟಗಳ ಬಗ್ಗೆ ಶಿಬಿರದ ಗುರುಗಳಾದ 2ನೇ ಮೊಣ್ಣಂಗೇರಿ ಗ್ರಾಮದ ಧನಂಜಯ ಅಗೋಳಿಕಜೆ, ಎ.ಎ.ವಿಠಲ ಹಾಗೂ ಕೆ.ವಿ.ಗೀತಾ ತರಬೇತಿ ನೀಡಿದರು.
ಶಿಬಿರದ ಸಮಾರೋಪ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಕೊಡಗು ಸೇವಾ ಭಾರತಿಯ ಪ್ರಮುಖ ಡಿ.ಹೆಚ್.ತಿಮ್ಮಪ್ಪ, ಶಾಲಾ ಶಿಕ್ಷಣದೊಂದಿಗೆ ಸಂಸ್ಕಾರ ಮೈಗೂಡಿಸಿಕೊಂಡರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಎಲ್ಲಾ ಗ್ರಾಮಗಳಲ್ಲಿಯೂ ಇಂತಹ ಶಿಬಿರಗಳು ನಡೆಯಬೇಕು ಎಂದು ಹೇಳಿದರು.
ಶ್ರೀಚಾಮುಂಡೇಶ್ವರಿ ದೇವಾಲಯದ ಅಧ್ಯಕ್ಷ ಬಿ.ಜೆ.ಯಶೋಧರ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮುಖರಾದ ಕಳಗಿ ರಮಾದೇವಿ ಸಂಪಾಜೆ ಹಾಗೂ ದೇವಾಲಯದ ಆಡಳಿತ ಮಂಡಳಿಯ ಪ್ರಮುಖರು ಉಪಸ್ಥಿತರಿದ್ದರು.
ಧನಂಜಯ ಅಗೋಳಿಕಜೆ ಸ್ವಾಗತಿಸಿ, ವಿಠಲ ರಾಮಕೊಲ್ಲಿ ನಿರೂಪಿಸಿ, ಕೆ.ವಿ.ಗೀತಾ ವಂದಿಸಿದರು.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*