ಮಡಿಕೇರಿ ಮಾ.1 NEWS DESK : ಭಾರತೀಯ ಜನತಾ ಪಾರ್ಟಿಯ ವಿರಾಜಪೇಟೆ ಮಂಡಲದ ವಕ್ತಾರರನ್ನಾಗಿ ಕಿರುಗೂರಿನ ಚೆಪ್ಪುಡಿರ ರಾಕೇಶ್ ದೇವಯ್ಯ ಅವರನ್ನು ಆಯ್ಕೆ ಮಾಡಿರುವುದಾಗಿ ಮಂಡಲದ ಅಧ್ಯಕ್ಷ ಮಾಚಿಮಂಡ ಸುವಿನ್ ಗಣಪತಿ ತಿಳಿಸಿದ್ದಾರೆ.
ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರ ಅನುಮೋದನೆಯೊಂದಿಗೆ ರಾಕೇಶ್ ದೇವಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ವಿರಾಜಪೇಟೆಯಲ್ಲಿ ಪಕ್ಷದ ಬಲವನ್ನು ಮತ್ತಷ್ಟು ಹೆಚ್ಚಿಸಲು ಸಂಘಟನಾತ್ಮಕ ಚಟುವಟಿಕೆಯನ್ನು ಮತ್ತಷ್ಟು ಚುರುಕುಗೊಳಿಸಲಾಗುವುದು ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.








