ಮಡಿಕೇರಿ ಮಾ.1 NEWS DESK : ಸಕಾಲದಲ್ಲಿ ವೇತನ ಪಾವತಿಸುವಂತೆ ಒತ್ತಾಯಿಸಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದರು.
ತರಗತಿ ಬಹಿಷ್ಕರಿಸಿ ಕಾಲೇಜ್ ನ ಎದುರು ಮೌನ ಪ್ರತಿಭಟನೆ ನಡೆಸಿದ ಉಪನ್ಯಾಸಕರು, ವೇತನ ಪಾವತಿಸುವವರೆಗೆ ತರಗತಿಗೆ ತೆರಳುವುದಿಲ್ಲ ಎಂದು ಪಟ್ಟು ಹಿಡಿದರು.
ಅತಿಥಿ ಉಪನ್ಯಾಸಕ ಡಾ.ಸೋಮಣ್ಣ ಮಾತನಾಡಿ, ಮಂಗಳೂರು ವಿಶ್ವವಿದ್ಯಾನಿಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಯಪ್ಪ ಕಾಲೇಜ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ 43 ಉಪನ್ಯಾಸಕರಿಗೆ ಕಳೆದ 5 ತಿಂಗಳಿನಿಂದ ವೇತನ ಪಾವತಿಯಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಕೋವಿಡ್ ಸಂದರ್ಭದಲ್ಲಿ ಮೂರು ತಿಂಗಳ ವೇತನ ಖಡಿತಗೊಳಿಸಲಾಗಿದೆ. ಆ ವೇತನ ಸೇರಿ ಒಟ್ಟು ಎಂಟು ತಿಂಗಳ ವೇತನವನ್ನು ತಕ್ಷಣ ನೀಡಬೇಕೆಂದು ಆಗ್ರಹಿಸಿದ ಅವರು, ಅಲ್ಲಿಯವರೆಗೆ ತರಗತಿ ಬಹಿಷ್ಕರಿಸಿ ಪ್ರತಿಭಟನೆ ಮುಂದುವರೆಸುವುದಾಗಿ ಎಚ್ಚರಿಕೆ ನೀಡಿದರು.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆಯನ್ನು ನಡೆಸಿ ಮೌಲ್ಯಮಾಪನ ಕೂಡ ಮಾಡಲಾಗಿದೆ. ಪರೀಕ್ಷಾ ಮೇಲ್ವಿಚರಣಾ ಕಾರ್ಯವನ್ನು ಸುಸೂತ್ರವಾಗಿ ನಡೆಸಲಾಗಿದೆ. ಪ್ರತಿ ತಿಂಗಳು ಸರಿಯಾದ ಸಮಯದಲ್ಲಿ ವೇತನ ಪಾವತಿ ಮಾಡುವಂತೆ ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಮನವಿ ಮಾಡಲಾಗಿದೆ.
ಆದರೆ ಇಲ್ಲಿಯವರೆಗೆ ಯಾವುದೇ ಸ್ಪಂದನೆ ದೊರೆತ್ತಿಲ್ಲ. ನಮಗೆ ಜೀವನ ಸಾಗಿಸಲು ಕಷ್ಟವಾಗಿದೆ ಎಂದು ಅಳಲು ತೋಡಿಕೊಂಡರು. ಕಾಲೇಜ್ ನ ಎಲ್ಲಾ ಅತಿಥಿ ಉಪನ್ಯಾಸಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Breaking News
- *ಬಿಜೆಪಿ, ಜೆಡಿಎಸ್ ಗೆ ಜನ ತಕ್ಕ ಪಾಠ ಕಲಿಸಿದ್ದಾರೆ : ಎಂ.ಎ.ಕಲೀಲ್ ಬಾಷ*
- *ಕೆವಿ ಎನ್ಸಿಸಿ ಕೆಡೆಟ್ ಗಳಿಂದ ಕಾಯ೯ಪ್ಪ ಪ್ರತಿಮೆ ಸ್ವಚ್ಛತೆ*
- *ಸೋಮವಾರಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ*
- *ಕರ್ನಾಟಕ ಉಪ ಚುನಾವಣೆ : ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ*
- *ಮಿಸ್ಟಿ ಹಿಲ್ಸ್ ನಿಂದ ಮಕ್ಕಳಿಗೆ ಸಾಹಸಕ್ರೀಡೆ*
- *ವಿಟಿಯು ರಾಜ್ಯಮಟ್ಟದ ಕಬಡ್ಡಿ : ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ*
- *ವೀರ ಸೇನಾನಿಗಳಿಗೆ ಅಗೌರವ : ಆಮ್ ಆದ್ಮಿ ಪಾರ್ಟಿ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ*
- *ವಿರಾಜಪೇಟೆ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯಿಂದ ಸ್ಥಳ ಪರಿಶೀಲನೆ*
- *ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಸಾಂಸ್ಕೃತಿಕ ಕಲರವ*