ಮಡಿಕೇರಿ ಮಾ.1 NEWS DESK : ಸುಂಟಿಕೊಪ್ಪದ ಎಸ್‍ಎಂಎಸ್ ಶಿಕ್ಷಣ ಸಂಸ್ಥೆಯಲ್ಲಿ ಶರಫಿ ಪದವಿ ಪಡೆದು ಉನ್ನತ ವಿದ್ಯಾಭ್ಯಾಸಕ್ಕೆ ತೆರಳುತ್ತಿರುವ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.
ಸಯ್ಯದ್ ಮುಹಮ್ಮದ್ ಅಲಿ ಶಿಹಾಬ್ ತಂಗಳ್ ಶಿಕ್ಷಣ ಸಂಸ್ಥೆಯಲ್ಲಿ 6 ವರ್ಷಗಳ ಕಾಲ ಧಾರ್ಮಿಕ ಹಾಗೂ ಲೌಕಿಕ ಶಿಕ್ಷಣವನ್ನು ಪೂರ್ಣಗೊಳಿಸಿ ಶರಫಿ ಪದವಿಯನ್ನು ಪಡೆದು ಉನ್ನತ ಶಿಕ್ಷಣಕ್ಕಾಗಿ ದಕ್ಷಿಣ ಏಷ್ಯದ ಪ್ರಖ್ಯಾತ ಶಿಕ್ಷಣ ಸಂಸ್ಥೆಯಾದ ಜಾಮಿಯಾ ನುರಿಯ ಅರಬಿಕ್ ಕಾಲೇಜ್ ಗೆ ತೆರಳುತ್ತಿರುವ ವಿದ್ಯಾರ್ಥಿಗಳನ್ನು ಎಸ್‍ಎಂಎಸ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಪೋಷಕರು ಸಂಭ್ರಮದಿಂದ ಅದ್ದೂರಿಯಾಗಿ ಬೀಳ್ಕೊಟ್ಟರು.
ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಸಂಸ್ಥೆಯ ಕಾರ್ಯದರ್ಶಿ ಸಿ.ಎಂ.ಅಬ್ದುಲ್ ಹಮೀದ್ ಮೌಲವಿ ಕೊಡಗು ಜಿಲ್ಲೆಯ ಮುಸ್ಲಿಂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಮತ್ತು ಸುಧಾರಣೆಯನ್ನು ಗುರಿಯಾಗಿಸಿ 2016ರಲ್ಲಿ ಈ ಶಿಕ್ಷಣ ಸಂಸ್ಥೆಯನ್ನು ಆರಂಭಿಸಲಾಯಿತು. ಆರ್ಥಿಕ ಸಮಸ್ಯೆಯಿಂದ ಶಿಕ್ಷಣದಿಂದ ವಂಚಿತರಾಗುತ್ತಿರುವ ಬಡ ಮಕ್ಕಳಿಗೆ ಉತ್ತಮ ಹಾಗೂ ಉನ್ನತ ಶಿಕ್ಷಣವನ್ನು ಸಂಪೂರ್ಣವಾಗಿ ಉಚಿತವಾಗಿ ನೀಡುವ ಮೂಲಕ ಸಂಸ್ಥೆ ಶ್ರೇಷ್ಠವಾದ ಕೊಡುಗೆಯನ್ನು ನೀಡುತ್ತಿದೆ ಮತ್ತು ಸೇವೆಯನ್ನು ಮಾಡುತ್ತಿದೆ ಎಂದರು.
ಮನುಕುಲಕ್ಕೆ ಅನುಗ್ರಹವಾಗುವ ಮತ್ತು ಸಮಾಜಕ್ಕೆ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕವಾಗಿ ಸೇವೆ ಮಾಡಲು ಶಕ್ತರು ಹಾಗೂ ಸಮರ್ಥರಾದ ಬಹುಭಾಷಾ 14 ಯುವ ಪಂಡಿತರನ್ನು ಸಮರ್ಪಿಸಲು ಸಾಧ್ಯವಾಗಿರುವುದು ನಮ್ಮ ಸಂಸ್ಥೆಯ ದೊಡ್ಡ ಸಾಧನೆ ಎಂದು ಹರ್ಷ ವ್ಯಕ್ತಪಡಿಸಿದರು.
ಹತ್ತನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಧಾರ್ಮಿಕ ಮತ್ತು ಪದವಿ ಪೂರ್ವ ಹಾಗೂ ಪದವಿ ಶಿಕ್ಷಣ ನೀಡಲು ಈ ಸಂಸ್ಥೆ ಆಸರೆಯಾಗಿದೆ. ಯಾವುದೇ ಶುಲ್ಕವನ್ನು ಪಡೆಯದೆ ಶಿಕ್ಷಣ, ವಸತಿ ಮತ್ತು ಆಹಾರ ಎಲ್ಲವನ್ನು ಸಂಪೂರ್ಣವಾಗಿ ಉಚಿತವಾಗಿ ನೀಡಲಾಗುತ್ತಿದೆ. ವಿದ್ಯಾರ್ಥಿಗಳ ಉಜ್ವಲ ಭವಿಷ್ಯದ ಗುರಿಯನ್ನು ಮುಂದಿಟ್ಟುಕೊಂಡು ಶೈಕ್ಷಣಿಕವಾಗಿ ಹಲವಾರು ಹೊಸ ಯೋಜನೆಗಳನ್ನು ರೂಪಿಸಲಾಗಿದೆ ಎಂದು ವಿವರಿಸಿದರು.
2024-25ನೇ ಅವಧಿಗೆ 10ನೇ ತರಗತಿಯಿಂದ ಉತ್ತೀರ್ಣರಾದ 30 ವಿದ್ಯಾರ್ಥಿಗಳಿಗೆ ಹೊಸದಾಗಿ ಅವಕಾಶವನ್ನು ಕಲ್ಪಿಸಿಕೊಡಲಾಗುವುದು. ಆಸಕ್ತಿ ಇರುವ ಪೋಷಕರು ಅಥವಾ ವಿದ್ಯಾರ್ಥಿಗಳು ದಾಖಲಾತಿಗೆ ಸಂಸ್ಥೆಯನ್ನು ಸಂಪರ್ಕಿಸಬಹುದು ಎಂದು ಅಬ್ದುಲ್ ಹಮೀದ್ ಮೌಲವಿ ಹೇಳಿದರು.
ಇದೇ ಸಂದರ್ಭ ಖುರಾನ್ ಅನ್ನು ಪೂರ್ತಿಯಾಗಿ ಕಂಠಪಾಠ ಮಾಡಿದ ವಿದ್ಯಾರ್ಥಿಗಳನ್ನು ಸಮಾರಂಭದಲ್ಲಿ ಸನ್ಮಾನಿಸಿ ಹಾಫಿಝ್ ಪದವಿಯನ್ನು ನೀಡಲಾಯಿತು. ಮಾಜಿ ಶಾಸಕರು ಹಾಗೂ ಸಂಸ್ಥೆಯ ಮಹಾ ಮುಖ್ಯಸ್ಥರೂ ಆದ ಕೆ.ಎಂ.ಇಬ್ರಾಹಿಂ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಜಿಲ್ಲೆಯ ಉಪಕಾಝಿ ಹಾಗೂ ಸಂಸ್ಥೆಯ ಉಪಾಧ್ಯಕ್ಷ ಎಂ.ಎಂ.ಅಬ್ದುಲ್ಲ ಫೈಝಿ ಅವರು ಸಭೆಯನ್ನು ಉದ್ಘಾಟಿಸಿದರು. ಕಾಲೇಜು ಪ್ರಾಂಶುಪಾಲರಾದ ಜೈನುದ್ದೀನ್ ಫೈಝಿಯವರು ಮುಖ್ಯ ಪ್ರಭಾಷಣ ಮಾಡಿದರು.
ಸಂಸ್ಥೆಯ ಅಧ್ಯಕ್ಷ ವೈ.ಎಂ.ಉಮರ್ ಫೈಝಿ, ಕಾಲೇಜು ಮುದರಿಸುಗಳಾದ ಉಸ್ಮಾನ್ ಫೈಝಿ ಅಹಮದ್ ಕಬೀರ್ ಫೈಝಿ ಹಾಗೂ ಉಪನ್ಯಾಸಕ ಸುಬ್ರಹ್ಮಣ್ಯ ಆನಂದ ಸಭೆಯನ್ನುದ್ದೇಶಿಸಿ ಮಾತನಾಡಿದರು
ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಹುಸೈನ್ ಕುಶಾಲನಗರ, ಉಪಾಧ್ಯಕ್ಷರಾದ ಬಾಪು ಹಾಜಿ, ಕೊಡಗರಹಳ್ಳಿ ಸಿದ್ದೀಕ್ ಹಾಜಿ ಕೊಡ್ಲಿಪೇಟೆ, ನೆಲ್ಯಹುದಿಕೇರಿಯ ಹಸನ್ ಕುನ್ನಿ ಹಾಜಿ ಮೊಹಮ್ಮದ್ ಎಸ್ ಎಂ ಸುಂಟಿಕೊಪ್ಪ ಅಬ್ಬಾಸ್ ಅಝರಿ ಮುಂತಾದವರು ಉಪಸ್ಥಿತರಿದ್ದರು.
ಉನ್ನತ ಶಿಕ್ಷಣಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ನಗದು ನೆರವನ್ನು ಬಶೀರ್ ನೆಲ್ಯಹುದಿಕೇರಿ ಹಾಗೂ ಸುಂಟಿಕೊಪ್ಪದ ರಫೀಕ್ ಹಾಜಿ ಪುಸ್ತಕದ ನೆರವನ್ನು ನೀಡಿದರು.
Breaking News
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*
- *ದೇಶ ದ್ರೋಹದ ಪ್ರಕರಣ ದಾಖಲಿಸಲು ಕೆ.ಜಿ.ಬೋಪಯ್ಯ ಆಗ್ರಹ*
- *ಬಿಜೆಪಿ, ಜೆಡಿಎಸ್ ಗೆ ಜನ ತಕ್ಕ ಪಾಠ ಕಲಿಸಿದ್ದಾರೆ : ಎಂ.ಎ.ಕಲೀಲ್ ಬಾಷ*
- *ಕೆವಿ ಎನ್ಸಿಸಿ ಕೆಡೆಟ್ ಗಳಿಂದ ಕಾಯ೯ಪ್ಪ ಪ್ರತಿಮೆ ಸ್ವಚ್ಛತೆ*