ಮಡಿಕೇರಿ ಮಾ.1 NEWS DESK : ಕರ್ನಾಟಕದಲ್ಲಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರ ಎಲ್ಲಾ ರಂಗದಲ್ಲೂ ವಿಫಲವಾಗಿದ್ದು, ರೈತರು ಹಾಗೂ ಪರಿಶಿಷ್ಟರನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಭಾರತೀಯ ಜನತಾ ಪಾರ್ಟಿಯ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಬರಗಾಲ ಆವರಿಸಿದ್ದರೂ ಸರ್ಕಾರ ಬರಪರಿಹಾರ ಕಾರ್ಯವನ್ನು ಕೈಗೊಂಡಿಲ್ಲ. ಪರಿಶಿಷ್ಟ ಸಮುದಾಯದ ಬಗ್ಗೆ ಕೇವಲ ಮಾತಿನಲ್ಲಿ ಮಾತ್ರ ಕಾಳಜಿಯನ್ನು ತೋರಿ, ಎಲ್ಲಾ ಹಂತದಲ್ಲೂ ವಂಚಿಸುತ್ತಾ ಬಂದಿದೆ. ಪರಿಶಿಷ್ಟರಿಗಾಗಿ ಮೀಸಲಿಟ್ಟ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಲಾಗಿದೆ ಎಂದು ಆರೋಪಿಸಿದರು.
ಸಮಾಜ ಕಲ್ಯಾಣ ಸಚಿವರು ಕಾಂಗ್ರೆಸ್ ಪಕ್ಷದ ಹಿತವನ್ನು ಕಾಪಾಡಿಕೊಳ್ಳಲು ಮಾತ್ರ ದಲಿತ ಸಮುದಾಯವನ್ನು ಬಳಸಿಕೊಳ್ಳುತ್ತಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭಿವೃದ್ಧಿ ಇಲಾಖೆಗಳ ಅನುದಾನವನ್ನು ವಿದ್ಯಾರ್ಥಿಗಳಿಗೆ ಹಾಗೂ ಅರ್ಹ ಫಲಾನುಭವಿಗಳಿಗೆ ಬಳಸದೆ ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸುವ ಮೂಲಕ ಪರಿಶಿಷ್ಟರನ್ನು ಬಲಿಪಶು ಮಾಡಲಾಗುತ್ತಿದೆ ಎಂದು ಟೀಕಿಸಿದರು.
ನೂರಾರು ವರ್ಷಗಳಿಂದ ಕೊಡಗಿನ ದೇವಲಗಳು, ಐನ್ ಮನೆಗಳು ಹಾಗೂ ಮಠಗಳಲ್ಲಿ ಸಾಂಪ್ರದಾಯಿಕವಾಗಿ ವನ್ಯಜೀವಿಗಳ ಉತ್ಪನ್ನಗಳನ್ನು ಬಳಕೆ ಮಾಡಲಾಗುತ್ತಿದೆ. ಈ ಬಗ್ಗೆ ತಿಳಿದಿರುವ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಅವರು ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸುವ ಬದಲು, ಚುನಾವಣೆ ಹಿನ್ನೆಲೆ ತಡೆಯಾಜ್ಞೆ ತರುವ ಮೂಲಕ ಸ್ಥಳೀಯರನ್ನು ದಾರಿ ತಪ್ಪಿಸುವ ತಂತ್ರ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಕೊಡಗಿನಲ್ಲಿ ಜೀತ ಪದ್ಧತಿ ಜಾರಿಯಲ್ಲಿದೆ ಎಂದು ಆರೋಪಿಸಲಾಗುತ್ತಿದ್ದು, ಬೆಳೆಗಾರರನ್ನು ಮಾತ್ರ ಯಾಕೆ ಗುರಿಪಡಿಸಲಾಗುತ್ತಿದೆ ಎಂದು ಪ್ರಶ್ನಿಸಿದ ರವಿ ಕಾಳಪ್ಪ, ವಿವಿಧೆಡೆಗಳಿಂದ ಬಂದಿರುವ ಕಾರ್ಮಿಕರು ಎಲ್ಲಾ ಕ್ಷೇತ್ರಗಳಲ್ಲೂ ದುಡಿಯುತ್ತಿದ್ದಾರೆ, ಆದರೆ ಕೆಲವು ಎನ್‍ಜಿಒ ಗಳು ಬಿಜೆಪಿ ಪ್ರಮುಖರನ್ನು ಮಾತ್ರ ಗುರಿ ಮಾಡಿ ಪ್ರಕರಣ ದಾಖಲಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಲಾಭದಲ್ಲಿ ನಡೆಯುತ್ತಿದ್ದ ಹುದಿಕೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಯಾವುದೇ ಅವ್ಯವಹಾರ ನಡೆಯದಿದ್ದರೂ, ಕಾಂಗ್ರೆಸ್ ನವರು ಆಡಳಿತವನ್ನು ದುರುಪಯೋಗ ಪಡಿಸಿಕೊಂಡು ಚುನಾವಣೆಯನ್ನು ನಡೆಸದೆ ತಡೆ ಹಿಡಿದಿರುವುದು ಖಂಡನೀಯ ಎಂದರು.
ಪ್ರಜಾಪ್ರಭುತ್ವದ ದೇಗುಲ ಎಂದು ಬಿಂಬಿಸುವ ರಾಜ್ಯದ ವಿಧಾನಸೌಧದಲ್ಲಿ ಕಾಂಗ್ರೆಸ್ ನ ನಾಸಿರ್ ಹುಸೇನ್ ಅವರ ಬೆಂಬಲಿಗನೋರ್ವ ಪಾಕಿಸ್ತಾನದ ಪರ ಘೋಷಣೆ ಕೂಗಿ ದೇಶಕ್ಕೆ ಅಪಮಾನ ಮಾಡಿದ್ದು, ಇದು ದೇಶ ದ್ರೋಹದ ಕೆಲಸವಾಗಿದೆ. ಆದರೆ ಅಲ್ಪಸಂಖ್ಯಾತರನ್ನು ಓಲೈಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ದೇಶದ್ರೋಹಿಗಳಿಗೆ ಬೆಂಬಲ ನೀಡುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ ರವಿ ಕಾಳಪ್ಪ ಈ ಪ್ರಕರಣವನ್ನು ಮತದಾರರು ಸೂಕ್ಷ್ಮವಾಗಿ ಪರಿಗಣಿಸಿದ್ದು, ಲೋಕಸಭಾ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ತಿಳಿಸಿದರು.
ಜಿಲ್ಲಾ ವಕ್ತಾರ ತಳೂರು ಕಿಶೋರ್ ಕುಮಾರ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಹತ್ತು ತಿಂಗಳಲ್ಲಿ ಏನು ಅಭಿವೃದ್ಧಿ ಕಾರ್ಯ ಮಾಡಿದೆ, ಎಷ್ಟು ಅನುದಾನವನ್ನು ತರಲಾಗಿದೆ ಎನ್ನುವುದನ್ನು ಬಹಿರಂಗ ಪಡಿಸಲಿ ಎಂದರು.
ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ ಮಾತನಾಡಿ, ಸಂಸದ ಪ್ರತಾಪ್ ಸಿಂಹ ಅವರು ಸಂಸತ್ ವೀಕ್ಷಣೆಗೆ ಯುವಕರಿಗೆ ಪಾಸ್ ನೀಡಿದ್ದಾರೆ ಎಂಬ ವಿಚಾರವನ್ನು ಕಾಂಗ್ರೆಸ್ ದೇಶದ್ರೋಹ ಎಂದು ಬಿಂಬಿಸಿತ್ತು. ಆದರೆ ಇದೀಗ ಅವರದ್ದೇ ಪಕ್ಷದ ನಾಯಕರ ಬೆಂಬಲಿಗರು ಪಾಕಿಸ್ತಾನ ಪರ ಘೋಷಣೆಯನ್ನು ಕೂಗುವ ಮೂಲಕ ದೇಶ ದ್ರೋಹದ ಕೆಲಸವನ್ನು ಮಾಡಿದ್ದಾರೆ. ಕಾಂಗ್ರೆಸ್ ಯಾವ ಕ್ರಮ ಕೈಗೊಂಡಿದೆ ಎಂದು ಪ್ರಶ್ನಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ವಕ್ತಾರ ಅರುಣ್ ಕುಮಾರ್, ಪ್ರಧಾನ ಕಾರ್ಯದರ್ಶಿ ವಿ.ಕೆ.ಲೋಕೇಶ್ ಹಾಗೂ ಉಪಾಧ್ಯಕ್ಷ ಮನು ಮಂಜುನಾಥ್ ಉಪಸ್ಥಿತರಿದ್ದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*