ಮಡಿಕೇರಿ ಮಾ.1 NEWS DESK : ಮಕ್ಕಳಿಗೆ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡುವುದು ಅಪರಾಧ. ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗಕೂಡದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನಟರಾಜ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಹಾಗೂ ಜಿಲ್ಲಾ ಮಹಿಳಾ ಸಹಾಯವಾಣಿಯ ಸಹಯೋಗದೊಂದಿಗೆ 2023-24ನೇ ಸಾಲಿನ ಮಿಶನ್ ಶಕ್ತಿ ಯೋಜನೆಯಯಡಿ “ಬೇಟಿ ಬಚವೊ-ಬೇಟಿ ಪಡಾವೊ” ಜಿಲ್ಲಾ ಮಟ್ಟದ ಕಾರ್ಯಕ್ರಮದ ಅಂಗವಾಗಿ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ನಡೆದ “ಸಮಗ್ರ ಲೈಂಗಿಕ ಶಿಕ್ಷಣದ ವಿಶೇಷ ಕಾರ್ಯಗಾರ” ಹಾಗೂ “ಮಹಿಳಾ ಸಾಧಕಿಯರ ಪ್ರೇರಾಣಾ ತುಣುಕು” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಗರ್ಭದಲ್ಲಿರುವ ಮಗುವಿಗೆ ಬದುಕುವ ಹಕ್ಕಿದೆ. ಮಕ್ಕಳ ರಕ್ಷಣೆ, ಬಾಲ್ಯವಿವಾಹ, ಹೆಣ್ಣು ಭ್ರೂಣ ಹತ್ಯೆ, ಗರ್ಭದಲ್ಲಿರುವ ಮಗುವಿಗೆ ಸಾಮಾಜಿಕ ಧೋರಣೆ, ಮಕ್ಕಳಿಗೆ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡುವುದು ಕಾನೂನಿನ ಪ್ರಕಾರ ಅಪರಾಧ ಈ ನಿಟ್ಟಿನಲ್ಲಿ ಮಕ್ಕಳಿಗೆ ಸಮಗ್ರ ಲೈಂಗಿಕ ಶಿಕ್ಷಣದ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಇದಾಗಿದ್ದು, ಸೂಕ್ತ ರೀತಿಯಲ್ಲಿ ಮಕ್ಕಳು ಮಾಹಿತಿಯನ್ನರಿತು ಸದುಪಯೋಗ ಪಡೆಸಿಕೊಳ್ಳಬೇಕು ಎಂದು ತಿಳಿಸಿದರು.
ಸಖಿ ಒನ್ ಸ್ಟಾಪ್ ಸೆಂಟರ್ನ ಆಡಳಿತಾಧಿಕಾರಿ ಪ್ರಭಾವತಿ ಮಾತನಾಡಿ, ಮಕ್ಕಳಿಗೆ ರಕ್ಷಣಾತ್ಮಕ ಕಾನೂನುಗಳಿದ್ದು, ಮಕ್ಕಳಿಗಾಗಿ ಮಕ್ಕಳ ಸಹಾಯವಾಣಿ ಕೇಂದ್ರ 1098 ಬಗ್ಗೆ ಮಾಹಿತಿ ನೀಡಿದರು. ಅಲ್ಲದೆ ಮಕ್ಕಳಿಗೆ ಕ್ರೀಯಾತ್ಮಕ ಚಟುವಟಿಕೆ ಮಾಡಿಸುವುದರೊಂದಿಗೆ “ಗುಡ್ ಟಚ್ ಮತ್ತು ಬ್ಯಾಡ್ ಟಚ್” ಕುರಿತು ತಿಳಿಸಿದರು.
ಇದೇ ಸಂದರ್ಭ ಕಾರ್ಯಕ್ರಮದಲ್ಲಿ ಮಹಿಳಾ ಸಾಧಕಿಯರ ಪ್ರೇರಣಾ ತುಣುಕುಗಳನ್ನು ತೋರಿಸಲಾಯಿತು.
ಮಡಿಕೇರಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಸುಶೀಲ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕದ ಸುಮತಿ ಹಾಗೂ ಜಿಲ್ಲಾ ಬಾಲಭವನ ಸಿಬ್ಬಂದಿಗಳು, ಪೋಷಣ್ ಅಭಿಯಾನ ಸಿಬ್ಬಂದಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು, ಮಕ್ಕಳ ಸಹಾಯವಾಣಿ ಸಿಬ್ಬಂದಿಗಳು, ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಸಿಬ್ಬಂದಿಗಳು ಹಾಜರಿದ್ದರು. ಎಸ್. ಆರ್. ಜೆಂಡರ್ ಸ್ಪೆಷಲಿಸ್ಟ್, ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಜೆಂಡರ್ ಸ್ಪೆಷಲಿಸ್ಟ್ ಎಸ್.ಆರ್. ಕೇಶಿನಿ ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.









