ಮಡಿಕೇರಿ ಮಾ.2 NEWS DESK : 2022-23ನೇ ಸಾಲಿನ 10ನೇ ತರಗತಿ ಕನ್ನಡ ಮಾಧ್ಯಮ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಗಳಿಸಿದ ಜಿಲ್ಲೆಯ ವಿದ್ಯಾರ್ಥಿನಿ ಹೆಚ್.ಆಶಿಫಾ ಗೆ ದಿವಂಗತ ಬಿ.ಎಸ್.ಬೀರಪ್ಪ ದತ್ತಿ ಪ್ರಶಸ್ತಿ ಪ್ರದಾನ, ಮಹಿಳೆ ಮತ್ತು ಶಿಕ್ಷಣ ಉಪನ್ಯಾಸ ಕಾರ್ಯಕ್ರಮ ಹಾಗೂ ದತ್ತಿ ದಾನಿ ಹೆಚ್.ಬಿ.ಜಯಮ್ಮರಿಗೆ ಸನ್ಮಾನ ಕಾರ್ಯಕ್ರಮ ಮಾ.5 ರಂದು ನಡೆಯಲಿದೆ.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸೋಮವಾರಪೇಟೆ ತಾಲ್ಲೂಕು ಕಸಾಪ, ಶನಿವಾರಸಂತೆ ಹೋಬಳಿ ಕಸಾಪ ಮತ್ತು ಶನಿವಾರಸಂತೆ ಶ್ರೀವಿಘ್ನೇಶ್ವರ ಬಾಲಕಿಯರ ಪ್ರೌಢಶಾಲೆಯ ಸಂಯುಕ್ತಾಶ್ರಯದಲ್ಲಿ ಶನಿವಾರಸಂತೆಯ ಶ್ರೀವಿಘ್ನೇಶ್ವರ ಕಲ್ಯಾಣ ಮಂಟಪದಲ್ಲಿ ಮಧ್ಯಾಹ್ನ 2 ಗಂಟೆಗೆ ಕಾರ್ಯಕ್ರಮ ನಡೆಯಲಿದೆ.
ಶನಿವಾರಸಂತೆ ವಿಘ್ನೇಶ್ವರ ಪ್ರೌಢಶಾಲೆಯ ಪ್ರಾಂಶುಪಾಲ ಟಿ.ಪಿ.ಶಿವಪ್ರಸಾದ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಉಪಾಧ್ಯಕ್ಷ ಕೆ.ಇ.ಕೃಷ್ಣರಾಜ್ ಅಧ್ಯಕ್ಷತೆ ವಹಿಸಲಿದ್ದಾರೆ.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ.ಕೇಶವಕಾಮತ್ ಗೌರವ ಉಪಸ್ಥಿತರಿರಲಿದ್ದಾರೆ. ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಪ್ರಾಸ್ತವಿಕ ನುಡಿಗಳನ್ನಾಡಲಿದ್ದು, ಶನಿವಾರಸಂತೆ ವಿಘ್ನೇಶ್ವರ ಪ್ರೌಢಶಾಲೆಯ ಅಧ್ಯಾಪಕ ಕೆ.ಪಿ.ಜಯಕುಮಾರ್ ಮುಖ್ಯ ಭಾಷಣ ಮಾಡಲಿದ್ದಾರೆ.
ಕಸಾಪ ಗೌರವ ಕಾರ್ಯದರ್ಶಿಗಳಾದ ಎಸ್.ಐ.ಮುನೀರ್ ಅಹ್ಮದ್, ರೇವತಿ ರಮೇಶ್, ಕೋಶಾಧಿಕಾರಿ ಎಸ್.ಎಸ್.ಸಂಪತ್ ಕುಮಾರ್, ಸೋಮವಾರಪೇಟೆ ತಾಲ್ಲೂಕು ಕಸಾಪ ಅಧ್ಯಕ್ಷ ಎಸ್.ಡಿ.ವಿಜೇತ್, ಶನಿವಾರಸಂತೆ ಹೋಬಳಿ ಅಧ್ಯಕ್ಷ ಬಿ.ಬಿ.ನಾಗರಾಜು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಕಸಾಪ ಪ್ರಕಟಣೆ ತಿಳಿಸಿದೆ.









