ಮಡಿಕೇರಿ ಮಾ.2 NEWS DESK : ಮಹಾಶಿವರಾತ್ರಿ ಪ್ರಯುಕ್ತ ಮಾ.8 ರಂದು ಶ್ರೀ ಭಾಗಮಂಡಲದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ವಿಶೇಷ ಪೂಜೆ ನಡೆಯಲಿದೆ.
ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಬೆಳಿಗ್ಗೆ 7 ಗಂಟೆಗೆ ಶತರುದ್ರಾಭಿಷೇಕ, ಬೆಳಿಗ್ಗೆ 9.30 ಗಂಟೆಗೆ ರುದ್ರಹೋಮ, ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ, ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ಜರುಗಲಿದೆ.
ಸಂಜೆ 6 ಗಂಟೆಗೆ ತಾಯಂಬಕ ಸೇವೆ, 6.30 ಗಂಟೆಗೆ ಲಕ್ಷದೀಪೋತ್ಸವ, ಏಕಾದಶ ರುದ್ರಾಭಿಷೇಕ, ಮಹಾಮಂಗಳಾರತಿ, ದೇವರ ನೃತ್ಯ ಉತ್ಸವ, ಸಂಜೆ 7.30 ಗಂಟೆಗೆ ಲಘು ಉಪಹಾರ ನಡೆಯಲಿದ್ದು, ರಾತ್ರಿ 11 ಗಂಟೆಗೆ ಯಕ್ಷಗಾನ ಬಯಲಾಟ ನಡೆಯಲಿದೆ.
ಶ್ರೀ ತಲಕಾವೇರಿ ದೇವಾಲಯದಲ್ಲಿ ಬೆಳಿಗ್ಗೆ 9.30 ಗಂಟೆಗೆ ಶತರುದ್ರಾಭಿಷೇಕ, ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ ಹಾಗೂ ಪ್ರಸಾದ ವಿತರಣೆ ನಡೆಯಲಿದೆ.
ಸಂಜೆ 7 ಗಂಟೆಗೆ ಏಕಾದಶರುದ್ರಾಭಿಷೇಕ, ಮಹಾಮಂಗಳಾರತಿ ಹಾಗೂ ಪ್ರಸಾದ ವಿತರಣೆ ನೆರವೇರಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಶ್ರಿ ಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯಗಳ ಕಾರ್ಯನಿರ್ವಾಹಣಾಧಿಕಾರಿ ಕೋರಿದ್ದಾರೆ.








