ಮಡಿಕೇರಿ ಮಾ.2 NEWS DESK : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಭೋದಕ ಆಸ್ಪತ್ರೆ ಹಾಗೂ ಮೈಸೂರು ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ ಮಡಿಕೇರಿ ಬಾಹ್ಯ ಸೇವಾ ಕೇಂದ್ರ ಇವರ ಸಹಯೋಗದಲ್ಲಿ ರಾಷ್ಟ್ರೀಯ ಶ್ರವಣದೋಷ ನಿಯಂತ್ರಣ ಮತ್ತು ನಿವಾರಣಾ ಕಾರ್ಯಕ್ರಮದಡಿಯಲ್ಲಿ ಮಾ.4 ರಂದು ಬೆಳಗ್ಗೆ 10.30 ಗಂಟೆಗೆ ವಿಶ್ವ ಶ್ರವಣ ದಿನಾಚರಣೆ/ರಾಷ್ಟ್ರೀಯ ಶ್ರವಣ ಜಾಗೃತಿ ಅಭಿಯಾನದ ಸಭಾ ಕಾರ್ಯಕ್ರಮವು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಉಪನ್ಯಾಸ ಕೊಠಡಿಯಲ್ಲಿ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್ ತಿಳಿಸಿದ್ದಾರೆ.









