ಮಡಿಕೇರಿ ಮಾ.2 NEWS DESK : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತಾ ಮತ್ತು ಜೀವನೋಪಾಯ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ (ಎನ್‍ಆರ್.ಎಲ್.ಎಂ) ಸಂಜೀವಿನಿ ಯೋಜನೆ, ಕೊಡಗು ಜಿ.ಪಂ ವತಿಯಿಂದ ಮಾ.5 ರಿಂದ ಮಾ.7ರ ವರೆಗೆ ಜಿಲ್ಲಾ ಮಟ್ಟದಲ್ಲಿ ಗ್ರಾಮೀಣ ಸ್ವ ಸಹಾಯ ಗುಂಪುಗಳ ಸದಸ್ಯರು ಉತ್ಪಾದಿಸಿರುವ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯಲಿದೆ.
ನಗರದ ಬಾಲಭವನದ ಆವರಣದಲ್ಲಿ ನಡೆಯಲಿರುವ ಮೇಳಕ್ಕೆ ಜಿಲ್ಲೆಯ ಎಲ್ಲಾ ಗ್ರಾ.ಪಂ ಮಟ್ಟದ ಒಕ್ಕೂಟಗಳಲ್ಲಿ ಇರುವ ಗ್ರಾಮೀಣ ಮಹಿಳೆಯರ ಸ್ವಾವಲಂಬನೆಗೆ ಪ್ರೋತ್ಸಾಹಿಸಲು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಿದೆ.








