ಮಡಿಕೇರಿ ಮಾ.3 NEWS DESK : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪೊನ್ನಂಪೇಟೆ ತಾಲ್ಲೂಕು ನಿಟ್ಟೂರು ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ನಿಟ್ಟೂರು ಕಾರ್ಮಾಡು ಅರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಅಭಿಯಾನ ನಡೆಯಿತು. ಕಾರ್ಯಕ್ರಮಕ್ಕೆ ನಿಟ್ಟೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಅಮ್ಮಣಿ ದೀಪ ಚಾಲನೆ ನೀಡಿದರು. ಉಪಾಧ್ಯಕ್ಷ ಚಕ್ಕೇರ ಸೂರ್ಯ ಅಯ್ಯಪ್ಪ ಮಾತನಾಡಿ ಪೋಲಿಯೋ ಹನಿ ಹಾಕುವ ಮೂಲಕ ಐದು ವರ್ಷದೊಳಗಿನ ಮಗುವಿನ ಸಂಪೂರ್ಣ ರಕ್ಷಣೆಯನ್ನು ಖಚಿತ ಪಡಿಸಿಕೊಳ್ಳುವಂತೆ ಕರೆ ನೀಡಿದರು. ಗ್ರಾ.ಪಂ ಸದಸ್ಯ ಕಾಟಿಮಾಡ ಶರೀನ್ ಮುತ್ತಣ್ಣ ಮಾತನಾಡಿ ಭಾರತವು ಪೋಲಿಯೊ ಮುಕ್ತ ದೇಶವಾಗಿದೆ. ಕೆಲವು ದೇಶಗಳಲ್ಲಿ ಇನ್ನೂ ಪೋಲಿಯೋ ರೋಗದ ಭೀತಿ ಇದ್ದು, ಪೋಲಿಯೊ ಹನಿ ಹಾಕುವ ಅಭಿಯಾನದಲ್ಲಿ ಕೈ ಜೋಡಿಸಿ ರಾಷ್ಟ್ರದ ಅರೋಗ್ಯ ಸುರಕ್ಷಾ ಕಾರ್ಯದಲ್ಲಿ ಪಾಲ್ಗೊಳ್ಳುವಂತೆ ತಿಳಿಸಿದರು. ಪಂಚಾಯಿತಿ ಸದಸ್ಯರಾದ ಪಡಿಞರಂಡ ಕವಿತಾ ಪ್ರಭು ಹಾಗೂ ಬಾಳೆಲೆ ಸಮುದಾಯ ಆರೋಗ್ಯ ಅಧಿಕಾರಿ ನಿಯಾಜ್ ಮಗುವಿಗೆ ಪೋಲಿಯೋ ಹನಿ ಹಾಕಿದರು. ನಿಟ್ಟೂರು ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ರೇಷ್ಮ, ಅಂಗನವಾಡಿ ಕಾರ್ಯಕರ್ತೆ ಮಾಲಿನಿ ಸತೀಶ್, ಅಶಾ ಕಾರ್ಯಕರ್ತೆ ಲಲಿತಾ ಗಣೇಶ್ ಮತ್ತಿತರರು ಉಪಸ್ಥಿತರಿದ್ದರು.










