ಮಡಿಕೇರಿ ಮಾ.3 NEWS DESK : ಕಾಂಗ್ರೆಸ್ ಪಕ್ಷ ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರನ್ನು ಎಂದಿಗೂ ಕಡೆಗಣಿಸಿಲ್ಲ, ಆರಂಭದ ಹಂತದಲ್ಲಿ ಶಾಸಕರುಗಳಿಗೆ ನಿಗಮ ಮಂಡಳಿಗಳಲ್ಲಿ ಸ್ಥಾನಮಾನ ದೊರೆತ್ತಿದ್ದು, ಮುಂದಿನ ದಿನಗಳಲ್ಲಿ ಕಾರ್ಯಕರ್ತರಿಗೂ ಸೂಕ್ತ ಸ್ಥಾನ ಸಿಗಲಿದೆ ಎಂದು ಕೆಪಿಸಿಸಿ ಸದಸ್ಯ ಕೆ.ಎ.ಯಾಕುಬ್ ಬಜೆಗುಂಡಿ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಬಹುಮತ ಹೊಂದಿರುವ ಕಾಂಗ್ರೆಸ್ ಸರ್ಕಾರ ಸರ್ವ ಕಾರ್ಯಕರ್ತರಿಗೂ ಸಮಾನ ಗೌರವ ಮತ್ತು ಸ್ಥಾನಮಾನ ನೀಡಲಿದೆ. ಇದರಲ್ಲಿ ಯಾವುದೇ ಗೊಂದಲ ಬೇಡ, ಯಾರೂ ಊಹಾಪೋಹಗಳಿಗೆ ಕಿವಿಗೊಡಬಾರದು. ಸಧ್ಯದಲ್ಲೇ ಲೋಕಸಭಾ ಚುನಾವಣೆ ಬರಲಿದ್ದು, ಪ್ರತಿಯೊಬ್ಬ ಕಾರ್ಯಕರ್ತ ಮೈಸೂರು- ಕೊಡಗು ಕ್ಷೇತ್ರವನ್ನು ಗೆಲ್ಲುವ ಪಣ ತೊಡಬೇಕು ಎಂದು ಕರೆ ನೀಡಿದ್ದಾರೆ.
ನಿಗಮ ಮಂಡಳಿಗಳು ಮತ್ತು ಸ್ಥಳೀಯ ಸಂಸ್ಥೆಗಳ ಎಲ್ಲಾ ಸ್ಥಾನಗಳಿಗೆ ಪದಾಧಿಕಾರಿಗಳ ನೇಮಕವಾಗಿಲ್ಲ. ಸುಮಾರು 70 ಸ್ಥಾನಗಳಿಗೆ ಮಾತ್ರ ಆಯ್ಕೆಯಾಗಿದ್ದು, ಇನ್ನೂ 40 ಸ್ಥಾನಗಳಿಗೆ ನೇಮಕವಾಗಬೇಕಾಗಿದೆ. ಮುಂದೆ ನಡೆಯುವ ಆಯ್ಕೆ ಪ್ರಕ್ರಿಯೆ ಸಂದರ್ಭ ಕೊಡಗಿಗೆ ಪ್ರಾತಿನಿಧ್ಯ ದೊರೆಯಲಿದೆ. ಅದರಲ್ಲೂ ಅಲ್ಪಸಂಖ್ಯಾತರಿಗೆ ಒಂದು ಸ್ಥಾನ ಸಿಗುವುದು ಖಚಿತವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಈಗಾಗಲೇ ಸರ್ಕಾರ ಸಚಿವ ಸ್ಥಾನಕ್ಕೆ ಸಮನಾದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರ ಹುದ್ದೆಯನ್ನು ನೀಡಿದೆ. ಚುನಾವಣೆ ಸಂದರ್ಭ ನೀಡಿದ್ದ ಭರವಸೆಯಂತೆ ಎಲ್ಲಾ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸುವ ಮೂಲಕ ಸರ್ಕಾರ ಜನಸಾಮಾನ್ಯರ ಹಾಗೂ ಬಡವರ ಪರವಾಗಿದೆ ಎನ್ನುವುದನ್ನು ಸಾಬೀತುಪಡಿಸಿದೆ. ಇತ್ತೀಚೆಗೆ ವಿದ್ಯುತ್ ದರವನ್ನು ಕೂಡ ಕಡಿಮೆ ಮಾಡಿದೆ. ತೈಲೋತ್ಪನ್ನಗಳು ಮತ್ತು ನಿತ್ಯ ಬಳಕೆಯ ವಸ್ತುಗಳು ದುಬಾರಿಯಾಗಿರುವ ಈ ದಿನಗಳಲ್ಲಿ ರಾಜ್ಯದ ಕಾಂಗ್ರೆಸ್ ನೇತೃತ್ವದ ಸರ್ಕಾರ ನೀಡುತ್ತಿರುವ ಭಾಗ್ಯಗಳಿಂದಾಗಿ ಬಡವರು, ಕಾರ್ಮಿಕರು, ಯುವಜನತೆ ಹಾಗೂ ರೈತರು ನೆಮ್ಮದಿಯಿಂದ ನಿಟ್ಟುಸಿರು ಬಿಡುವಂತ್ತಾಗಿದೆ. ಅಲ್ಪಸಂಖ್ಯಾತರು ಹಾಗೂ ಪರಿಶಿಷ್ಟರ ಕಲ್ಯಾಣಕ್ಕಾಗಿ ಸಾಕಷ್ಟು ಅನುದಾನವನ್ನು ಮೀಸಲಿಟ್ಟಿದೆ. ಕೊಡಗು ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಕೂಡ ಅನುದಾನ ಬಿಡುಗಡೆ ಮಾಡುತ್ತಿದೆ. ಶಾಸಕದ್ವಯರಾದ ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅವರುಗಳು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುತ್ತಿದ್ದಾರೆ.
ವಿರೋಧ ಪಕ್ಷಗಳು ವಿನಾಕಾರಣ ಟೀಕೆಗಳನ್ನು ಮಾಡುತ್ತಿದ್ದು, ಸರ್ಕಾರ ಅಸ್ಥಿರಗೊಳ್ಳುತ್ತದೆ ಎನ್ನುವ ಭ್ರಮೆಯಲ್ಲಿವೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೇವಲ 9 ತಿಂಗಳಲ್ಲಿ 77 ಸಾವಿರ ಕೋಟಿ ಹೂಡಿಕೆ ಬಂದಿರುವುದೇ ರಾಜ್ಯದ ಕಾನೂನು ಸುವ್ಯವಸ್ಥೆ ಸುಗಮವಾಗಿರುವುದಕ್ಕೆ ಸಾಕ್ಷಿಯಾಗಿದೆ. ಜನರ ಆಶೀರ್ವಾದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಸರ್ಕಾರದ ಮೇಲಿದ್ದು, ಕಾರ್ಯಕರ್ತರೇ ಕಾಂಗ್ರೆಸ್ ಪಕ್ಷದ ಶಕ್ತಿಯಾಗಿದ್ದಾರೆ.
ಕೊಡಗು- ಮೈಸೂರು ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಯಾರು ಸ್ಪರ್ಧಿಸಿದರೂ ಈ ಬಾರಿ ಗೆಲುವು ನಿಶ್ಚಿತವಾಗಿದೆ. ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಮತ್ತು ರಾಜ್ಯದ ಹಿತ ಕಾಯಲು ಕಟಿಬದ್ಧರಾಗಿದ್ದಾರೆ, ಸ್ಥಾನಮಾನದ ವಿಚಾರದಲ್ಲಿ ಯಾವುದೇ ಗೊಂದಲಗಳಿಲ್ಲ. ಶಾಸಕದ್ವಯರು ಕಾರ್ಯಕರ್ತರ ಹಿತ ಕಾಯುತ್ತಿದ್ದಾರೆ ಎಂದು ಯಾಕುಬ್ ಸ್ಪಷ್ಟಪಡಿಸಿದ್ದಾರೆ.
Breaking News
- *ಮಡಿಕೇರಿಯಲ್ಲಿ ಗೀತ ನಮನದ ಮೂಲಕ ಗಾಂಧೀಜಿ ಸ್ಮರಣೆ*
- *ಆತ್ಮಹತ್ಯೆ ಬೇಡ : ಸರ್ಕಾರ ನಿಮ್ಮ ಜೊತೆಗಿದೆ : ಕಂಪ್ಲೇಂಟ್ ಕೊಡಿ : ಸಿಎಂ ಸಿದ್ದರಾಮಯ್ಯ ಕರೆ*
- *ಸುತ್ತೂರು ಮಠದ ಮಹದೇಶ್ವರ ದೇವಾಲಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ*
- *ಸುಂಟಿಕೊಪ್ಪ : ಸ್ವರ್ಣಾಲಯದಲ್ಲಿ ಗಾಂಧಿ ಸ್ಮರಣೆ*
- *ಸ್ವಾಮಿ ವಿವೇಕಾನಂದ ಸದ್ಭಾವನಾ ಪ್ರಶಸ್ತಿಗೆ ಕೆ.ಎಸ್.ಮೂರ್ತಿ ಆಯ್ಕೆ*
- *ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್ ಗೆ ಸಿ.ಎಂ.ಚಿಣ್ಣಪ್ಪ ಆಯ್ಕೆ*
- *ತೀರ್ಪುಗಾರರಾಗಿ ಕೊಡಗಿನ ಹರ್ಷಿತ್ ಅಯ್ಯಪ್ಪ ನೇಮಕ*
- *ಭಾಗಮಂಡಲ ಮೇಲ್ಸೇತುವೆಗೆ ಕೆದಂಬಾಡಿ ರಾಮಯ್ಯ ಗೌಡರ ಹೆಸರಿಡಲು ಮನವಿ*
- *ಹಿಂದು ಯುವ ಸಮೂಹದ ಜಾಗೃತಿಗಾಗಿ ಮಡಿಕೇರಿಯಲ್ಲಿ ಜಾಗೃತಿ ಬೈಕ್ ಜಾಥಾ*
- *ಪೆರಾಜೆ ಶ್ರೀ ಶಾಸ್ತಾವು ದೇವಾಲಯದ ಪ್ರತಿಷ್ಠಾ ವಾರ್ಷಿಕೋತ್ಸವ : ನೂತನ ರಾಜಗೋಪುರ ಉದ್ಘಾಟನೆ*