ಸುಂಟಿಕೊಪ್ಪ ಮಾ.4 NEWS DESK : ರಾಷ್ಟ್ರೀಯ ಪಲ್ಸ್‍ಪೋಲಿಯೋ ಕಾರ್ಯಕ್ರಮದ ಅಂಗವಾಗಿ ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಬಸ್ ನಿಲ್ದಾಣದ ಕೇಂದ್ರಗಳಲ್ಲಿ ಮಕ್ಕಳಿಗೆ ಪಲ್ಸ್‍ಪೋಲಿಯೋ ಹನಿಯನ್ನು ನೀಡಲಾಯಿತು.
ಗ್ರಾ.ಪಂ.ಅಧ್ಯಕ್ಷ ಪಿ.ಆರ್.ಸುನಿಲ್‍ಕುಮಾರ್ ಮಗುವಿಗೆ ನೀಡುವ ಮೂಲಕ ಚಾಲನೆ ನೀಡಿದರು.
ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗ್ರಾ.ಪಂ.ಅಧ್ಯಕ್ಷ ಪಿ.ಆರ್.ಸುನಿಲ್‍ಕುಮಾರ್ ಹಾಗೂ ವೈದ್ಯಾಧಿಕಾರಿ ಶಮ್ನ, ಆರೋಗ್ಯ ಶೂಶ್ರಷಕಿಯರು, ಆರೋಗ್ಯ ಸಹಾಯಕಿಯರು, ದಾದಿಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಗ್ರಾ.ಪಂ.ಸದಸ್ಯರುಗಳಾದ ಪಿ.ಎಫ್.ಸಬಾಸ್ಟೀನ್, ರಫೀಕ್‍ಖಾನ್, ಶಾಂತಿ ಹಾಗೂ ಮತ್ತಿತರರು ಇದ್ದರು.









