ನಾಪೋಕ್ಲು ಮಾ.4 NEWS DESK : ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗ್ರಾಮ ಪಂಚಾಯಿತಿ ಅದ್ಯಕ್ಷೆ ವನಜಾಕ್ಷಿ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಮೂಲಕ ಉದ್ಘಾಟಿಸಿದರು.
0-5 ವರ್ಷದ ಪ್ರತಿಯೊಬ್ಬ ಮಗು ಪೋಲಿಯೋ ಲಸಿಕೆ ಹಾಕಿಸಿಕೊಳ್ಳುವಂತೆ ತಿಳಿಸಿದರು. ಆರೋಗ್ಯ ಇಲಾಖೆ ಮಧುಸೂಧನ್, ಆರೋಗ್ಯ, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.
ನಾಪೋಕ್ಲು ಪಂಚಾಯಿತಿ ಹಳೆ ತಾಲೂಕು ಅಂಗನವಾಡಿ ಕೇಂದ್ರ ದಲ್ಲಿ 0-5 ವರ್ಷದ ಮಕ್ಕಳಿಗೆ ಪಂಚಾಯಿತಿ ಸದಸ್ಯರ ಅರುಣ್ ಬೇಬ ಪೋಲಿಯೋ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು.
ನಂತರ ಪೋಲಿಯೋ ಲಸಿಕೆ ಬಗ್ಗೆ ಮಾಹಿತಿ, ಮಹತ್ವ ಬಗ್ಗೆ ತಿಳಿಸಿದರು . ಅಂಗನವಾಡಿ , ಆಶಾ ಕಾರ್ಯಕರ್ತೆಯರು , ಸ್ತ್ರೀ ಶಕ್ತಿ ಸದಸ್ಯರು , ಪೋಷಕರು ಮಕ್ಕಳೊಂದಿಗೆ ಹಾಜರಿದ್ದರು.
ನಾಪೋಕ್ಲು ವ್ಯಾಪ್ತಿಯ ಕಲ್ಲುಮೊಟ್ಟೆ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮದಲ್ಲಿ ಪಂಚಾಯಿತಿ ಸದಸ್ಯ ಪ್ರತೀಪ ಆಗಮಿಸಿ ಪೋಲಿಯೋ ಲಸಿಕೆ ಬಗ್ಗೆ ತಿಳಿಸಿದರು.
ಸ್ತ್ರೀ ಶಕ್ತಿ ಅಧ್ಯಕ್ಷೆ ಜಯಮ್ಮ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು. ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಸ್ತ್ರೀ ಶಕ್ತಿ, ಸ್ವಸಹಾಯ ಸದಸ್ಯರು,ಮಕ್ಕಳೊಂದಿಗೆ ಪೋಷಕರು ಹಾಜರಿದ್ದರು.
ನಾಪೋಕ್ಲು ಕೊಳಕೇರಿ 1 ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯ ಸಂದರ್ಷಕಿ ಛಾಯಾ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು.
ಅಂಗನವಾಡಿ, ಆಶಾ ಕಾರ್ಯಕರ್ತೆಯರು , ಸ್ತ್ರೀ ಶಕ್ತಿ, ಸ್ವಸಹಾಯ ಸಂಘಗಳ ಸದಸ್ಯರು, ಪೋಷಕರು ಮಕ್ಕಳೊಂದಿಗೆ ಹಾಜರಿದ್ದರು.
ಕಾರುಗುಂದ ಅಂಗನವಾಡಿ ಕೇಂದ್ರದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಬಲ್ಲಚಂಡ ತನು ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.
ಕಾರ್ಯಕ್ರಮದಲ್ಲಿ ಸಮುದಾಯ ಆರೋಗ್ಯ ಅಧಿಕಾರಿ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ, ಅಂಗನವಾಡಿ ಕಾರ್ಯಕರ್ತರು ಹಾಗೂ ಆಶಾ ಕಾರ್ಯಕರ್ತರು ಹಾಜರಿದ್ದರು.
ಕೊಣoಜಗೇರಿ ಗ್ರಾ.ಪಂ ವ್ಯಾಪ್ತಿಯ ಪಾರಾಣೆ ಉಪ ಕೇಂದ್ರದಲ್ಲಿ ಪಂಚಾಯತಿ ಅಧ್ಯಕ್ಷ ಕಟ್ಟಿ ಕುಶಾಲಪ್ಪ ದೀಪ ಬೆಳಗಿಸಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭ ಬೂತ್ ಅಧಿಕಾರಿ, ಅಂಗನವಾಡಿ ಕಾರ್ಯಕರ್ತೆ ರೋಹಿಣಿ, ಜಯಂತಿ ಕುಮಾರಿ, ಜಯ, ಆಶಾ ಕಾರ್ಯಕರ್ತೆ ,ಸ್ತ್ರೀ ಶಕ್ತಿ ಸದಸ್ಯರು ,ಪೋಷಕರು ಮಕ್ಕಳೊಂದಿಗೆ ಹಾಜರಿದ್ದರು.
ವರದಿ : ದುಗ್ಗಳ ಸದಾನಂದ








