ಮಡಿಕೇರಿ ಮಾ.4 NEWS DESK : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಬಾಳೆಲೆ ಮತ್ತು ಬಾಳೆಲೆ ಗ್ರಾಮ ಪಂಚಾಯಿತಿ ಸಯೋಗದಲ್ಲಿ ಬಾಳೆಲೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಐದು ವರ್ಷದ ಒಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ನೀಡುವ ಕಾರ್ಯಕ್ರಮ ನಡೆಯಿತು.
ಬಾಳೆಲೆ ಗ್ರಾ.ಪಂ ಅಧ್ಯಕ್ಷರಾದ ಮುಕ್ಕಾಟಿರ ಜಾನಕಿ ಕಾವೇರಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿ ಭಾರತವು ಪೋಲಿಯೋ ಮುಕ್ತ ದೇಶವಾಗಿದ್ದು, ಮತ್ತೆ ಪೋಲಿಯೊ ರೋಗ ದೇಶದಲ್ಲಿ ಮರಕಳಿಸದಂತೆ ಪೋಷಕರು ಹಾಗೂ ಆರೋಗ್ಯ ಇಲಾಖೆ ಎಚ್ಚೆತ್ತುಕೊಳ್ಳಬೇಕು ಎಂದರು.
ಬಾಳೆಲೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ಅಧಿಕಾರಿ ವಿಶ್ವನಾಥ್, ಮಗುವಿಗೆ ಪೋಲಿಯೋ ಹನಿ ಹಾಕಿ, ಮಾತನಾಡಿ ಐದು ವರ್ಷದ ಒಳಗಿನ ಎಲ್ಲಾ ಮಕ್ಕಳಿಗೂ ತಂದೆ ತಾಯಂದಿರು ಎರಡು ಹನಿ ಪೋಲಿಯೊ ಲಸಿಕೆ ಹಾಕಿಸಿಕೊಂಡು ಮಗುವಿನ ಸಂಪೂರ್ಣ ರಕ್ಷಣೆಯನ್ನು ಖಚಿತ ಪಡಿಸಿಕೊಳ್ಳ ಬಹುದೆಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಗ್ರಾ.ಪಂ ಸದಸ್ಯರಾದ ಫೊಡಮಾಡ ಸುಖೇಶ್ ಭೀಮಯ್ಯ, ಅಡ್ಡೇಂಗಡ ನವೀನ್, ಬಾಳೆಲೆ ಸಮುದಾಯ ಆರೋಗ್ಯಧಿಕಾರಿ ನಿಯಾಜ್, ಅಂಗನವಾಡಿ ಕಾರ್ಯಕರ್ತೆಯರು, ಅಶಾ ಕಾರ್ಯಕರ್ತೆರು, ಮಕ್ಕಳ ತಾಯಂದಿರು ಹಾಜರಿದ್ದರು.