ಮಡಿಕೇರಿ ಮಾ.4 NEWS DESK : ನಾಪೋಕ್ಲುವಿನ ಚೆರಿಯಪಂಬುವಿನಲ್ಲಿ ನಿರಾಶ್ರಿತರು ನಿರ್ಮಿಸಿಕೊಂಡಿದ್ದ ಗುಡಿಸಲುಗಳನ್ನು ಕಂದಾಯ ಇಲಾಖೆ ತೆರವು ಮಾಡುವ ಮೂಲಕ ಬಡವರಿಗೆ ಅನ್ಯಾಯ ಮಾಡಿದೆ ಎಂದು ಆರೋಪಿಸಿ ಸಿಐಟಿಯು ನೇತೃತ್ವದಲ್ಲಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಿತು.
ನಗರದ ತಹಶೀಲ್ದಾರರ ಕಚೇರಿ ಎದುರು ಸಿಐಟಿಯು ಪ್ರಮುಖರು ಹಾಗೂ ನಿರಾಶ್ರಿತರು ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ತಕ್ಷಣ ನಿರಾಶ್ರಿತರಿಗೆ ನಿವೇಶನ ನೀಡಬೇಕು ಮತ್ತು ಬಡವರ ಗುಡಿಸಲು ನಾಶ ಮಾಡಿ ನಷ್ಟ ಉಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಸಿಐಟಿಯು ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಮಾತನಾಡಿ, ನಾಪೋಕ್ಲುವಿನ ಚೆರಿಯಪರಂಬುವಿನಲ್ಲಿ ಕಳೆದ ಕೆಲವು ವರ್ಷಗಳಿಂದ ಸುಮಾರು 15 ಕುಟುಂಬಗಳು ಗುಡಿಸಲು ಕಟ್ಟಿಕೊಂಡು ಜೀವನ ಸಾಗಿಸುತ್ತಿದ್ದರು. ನಿವಾಸಿಗಳಿಗೆ ಯಾವುದೇ ಮುನ್ನೆಚ್ಚರಿಕೆ ಅಥವಾ ನೋಟಿಸ್ ನೀಡದೆ ನಾಪೋಕ್ಲುವಿನ ಕಂದಾಯ ಅಧಿಕಾರಿಗಳು ಏಕಾಏಕಿ ಗುಡಿಸಲನ್ನು ಕಿತ್ತು ಹಾಕಿದ್ದಾರೆ. ಇದರಿಂದ ಮನೆಯಲ್ಲಿದ್ದ ಸಾಮಾಗ್ರಿಗಳಿಗೂ ಹಾನಿಯಾಗಿದೆ ಎಂದು ಆರೋಪಿಸಿದರು.
ಕೊಡಗಿನಲ್ಲೇ ಹುಟ್ಟಿ ಬೆಳೆದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರು ಸೇರಿದಂತೆ ಇನ್ನಿತರ ಕಡು ಬಡತನದಲ್ಲಿರುವ ನಿರಾಶ್ರಿತರು ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ದೇಶಕ್ಕೆ ಸ್ವಾತಂತ್ರö್ಯ ಬಂದು 76 ವರ್ಷಗಳೇ ಕಳೆದರು ಸರ್ಕಾರದಿಂದ ಕಡು ಬಡವರಿಗೆ ಮನೆಗಳನ್ನು ನಿರ್ಮಿಸಿಕೊಡಲು ಸಾಧ್ಯವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ನಿರಾಶ್ರಿತರಿಗೆ ಬದಲೀ ವ್ಯವಸ್ಥೆ ಕಲ್ಪಿಸಿಕೊಡಬೇಕಾದ ಅಧಿಕಾರಿಗಳು, ಮಾನವೀಯತೆ ಮರೆತು ಗುಡಿಸಲುಗಳನ್ನು ನಾಶಪಡಿಸಿ ನಷ್ಟ ಉಂಟು ಮಾಡಿದ್ದಾರೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು, ಗುಡಿಸಲಿಗೆ ಆಗಿರುವ ನಷ್ಟ ಪರಿಹಾರವನ್ನು ಒದಗಿಸಬೇಕು ಮತ್ತು ನಿರಾಶ್ರಿತರಿಗೆ ತಕ್ಷಣ ನಿವೇಶ ಮಂಜೂರು ಮಾಡಿ ಮನೆ ನಿರ್ಮಿಸಿ ಕೊಡಬೇಕೆಂದು ಒತ್ತಾಯಿಸಿದ ಭರತ್, ತಪ್ಪಿದ್ದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅಹೋರಾತ್ರಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಚೆರಿಯಪರಂಬು ನಿವಾಸಿ ಶಾಂತರಾಜ್ ಮಾತನಾಡಿ, ದಿನನಿತ್ಯ ತೋಟ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದೇವೆ. ನಾವಿರುವ ಜಾಗಕ್ಕೆ ಪಂಚಾಯಿತಿ ಕಸವನ್ನು ತಂದು ರಾಶಿ ಹಾಕಲಾಗುತ್ತಿದೆ. ಕಸದ ದುರ್ವಾಸನೆ ತಡೆಯಲು ಸಾಧ್ಯವಾಗದೇ ಸ್ವಲ್ಪ ಮುಂದೆ ಶೆಡ್ ಹಾಕಿಕೊಳ್ಳಲಾಗಿದೆ. ಇದನ್ನೇ ಹೊಸ ಶೆಡ್ ಎಂದು ಭಾವಿಸಿ ಗುಡಿಸಲನ್ನು ನೆಲಸಮ ಮಾಡಿದ್ದಾರೆ. ಅಲ್ಲಿರುವವರೆಲ್ಲರೂ ಬಹಳ ಹಿಂದಿನಿAದಲೂ ಗುಡಿಸಲು ನಿರ್ಮಿಸಿ ವಾಸ ಮಾಡುತ್ತಿರುವವರಾಗಿದ್ದಾರೆ ಹೊರತು ಯಾರೂ ಹೊಸಬರಲ್ಲ. ಅಗತ್ಯವಿದ್ದರೆ ದಾಖಲಾತಿಗಳನ್ನು ಪರಿಶೀಲನೆ ಮಾಡಲಿ ಎಂದ ಅವರು, ನಮಗೆ ಪಂಚಾಯಿತಿಯವರು ಮಾತನಾಡಲು ಕೂಡ ಅವಕಾಶ ನೀಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ನಮ್ಮಿಂದ ಕಾವೇರಿ ನದಿ ಮಲೀನಗೊಳ್ಳುತ್ತಿಲ್ಲ, ಇಡೀ ನಾಪೋಕ್ಲು ವ್ಯಾಪ್ತಿಯ ಕಸವನ್ನು ನಾವಿರುವ ಸ್ಥಳದಲ್ಲಿ ತಂದು ಸುರಿಯಲಾಗುತ್ತಿದೆ. ಇದÀರಿಂದ ನದಿ ಕಲುಷಿತಗೊಳ್ಳುತ್ತಿದೆಯೇ ಹೊರತು ನಮ್ಮಿಂದಲ್ಲ ಎಂದು ಹೇಳಿದರು.
ಮತ್ತೊಬ್ಬ ನಿವಾಸಿ ಸುನಿತಾ ಮಾತನಾಡಿ, ಈ ಹಿಂದೆ ಇದ್ದ ನಮ್ಮ ಶೆಡ್‌ನ ಕಂಬಗಳು ಹಾಳಾದ ಪರಿಣಾಮ ಸಿಮೆಂಟ್ ಕಂಬಗಳನ್ನು ಹಾಕಿದ್ದೇವೆ. ಅದನ್ನು ಈಗ ನೂತನ ಶೆಡ್ ನಿರ್ಮಾಣ ಮಾಡುತ್ತಿದ್ದೇವೆ ಎಂದು 18 ಶೆಡ್‌ಗಳನ್ನು ಬಿಚ್ಚಿದ್ದಾರೆ. ಕೆಲವು ಸಿಮೆಂಟ್ ಕಂಬಗಳನ್ನು ಮುರಿದು ಹಾಕಿದ್ದಾರೆ. ಹಳೆ ಶೆಡ್‌ಗಳು ಮುರಿದು ನಮ್ಮ ತಲೆ ಮೇಲೆ ಬಿದ್ದರೂ ಕೂಡ ದುರಸ್ತಿ ಮಾಡಬಾರದು ಎಂದು ಹೇಳುತ್ತಾರೆ. ಅಲ್ಲದೇ, ಉಳಿದ ಶೆಡ್ ಗಳನ್ನು ಕೂಡ ತೆರವು ಮಾಡುವ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿದರು.
ನಿವಾಸಿಗಳಾದ ಡಿಲಿಶ್, ವೈ.ಎನ್.ಸುರೇಶ್, ಪಾರ್ವತಿ, ರವಿ ಸೇರಿದಂತೆ ನಿರಾಶ್ರಿತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*