ಮಡಿಕೇರಿ ಮಾ.4 NEWS DESK : ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಕಾಂಗ್ರೆಸ್ ಪಕ್ಷದ ಎಲ್ಲಾ ಘಟಕಗಳನ್ನು ಸಮಾನ ರೀತಿಯಲ್ಲಿ ಪರಿಗಣಿಸುತ್ತಿದ್ದು, ಪಕ್ಷಕ್ಕಾಗಿ ದುಡಿದವರಿಗೆ ಸೂಕ್ತ ಸ್ಥಾನಮಾನ ನೀಡಿದ್ದಾರೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಹಾಗೂ ಅಕ್ರಮ ಸಕ್ರಮ ಸಮಿತಿಯ ಸದಸ್ಯರಾದ ಜೆ.ಎಲ್.ಜನಾರ್ಧನ್ ಸ್ಪಷ್ಟಪಡಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ, ಕೆಲವರು ವೈಯುಕ್ತಿಕ ಕಾರಣಗಳಿಗಾಗಿ ಅಸಮಾಧಾನಿತರ ಸಭೆ ಎಂದು ಪ್ರತಿಬಿಂಬಿಸಿಕೊಂಡು ತಮ್ಮ ತಮ್ಮ ಅಭಿಪ್ರಾಯಗಳನ್ನು ಹಂಚಿಕೊAಡಿದ್ದಾರೆ ಹೊರತು ಮಡಿಕೇರಿ ಶಾಸಕರ ಬಗ್ಗೆ ಯಾರಿಗೂ ಅವಿಶ್ವಾಸವಿಲ್ಲ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಘಟಕದ ಪದಾಧಿಕಾರಿಗಳು ಸೇರಿದಂತೆ ಎಲ್ಲರಿಗೂ ಸೂಕ್ತ ಸ್ಥಾನಮಾನ ನೀಡಲಾಗಿದೆ. ಒಬ್ಬೊಬ್ಬರು ಎರಡೆರಡು ಸ್ಥಾನ ಹೊಂದಿರುವ ಉದಾಹರಣೆಯೂ ಇದೆ. ಉತ್ಸಾಹಿ ಶಾಸಕರಾಗಿರುವ ಡಾ.ಮಂತರ್ ಗೌಡ ಅವರು ಒಂದು ಜಾತಿ, ಜನಾಂಗಕ್ಕೆ ಸೀಮಿತವಾಗದೆ ಎಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರನ್ನು ಅತ್ಯಂತ ವಿಶ್ವಾಸದಿಂದ ನಡೆಸಿಕೊಳ್ಳುತ್ತಿದ್ದಾರೆ. ಅಲ್ಲದೆ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದಾರೆ. ಆಯ್ಕೆಯಾದ ಕೆಲವೇ ತಿಂಗಳುಗಳಲ್ಲಿ ಶಾಸಕರು ಗಳಿಸಿರುವ ಜನಪ್ರಿಯತೆಯೇ ಇದಕ್ಕೆ ಸಾಕ್ಷಿಯಾಗಿದೆ.
ಶಾಸಕ ಡಾ.ಮಂತರ್ ಗೌಡ ಅವರ ಅಭ್ಯುದಯವನ್ನು ಸಹಿಸದ ಕೆಲವರು ವಿನಾಕಾರಣ ಗೊಂದಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ ಹೊರತು ಪಕ್ಷದ ಒಗ್ಗಟ್ಟಿನಲ್ಲಿ ಯಾವುದೇ ನ್ಯೂನತೆಗಳಿಲ್ಲ ಎಂದು ತಿಳಿಸಿದ್ದಾರೆ.
ನಾಮನಿರ್ದೇಶನದ ಸಂದರ್ಭವೂ ಪಕ್ಷಕ್ಕಾಗಿ ಕೆಲಸ ಮಾಡಿದವರನ್ನು ಗುರುತಿಸಿ ಆಯ್ಕೆ ಮಾಡಿದ್ದಾರೆ. ಪರಿಶಿಷ್ಟ ಜಾತಿಗೆ ಯಾವುದೇ ರೀತಿಯಲ್ಲಿ ಅನ್ಯಾಯವಾಗಿಲ್ಲ ಎಂದು ಸ್ಪಷ್ಟಪಡಿಸಿರುವ ಜನಾರ್ಧನ್, ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಯಾವುದೇ ಅಪಪ್ರಚಾರ ಅಥವಾ ಊಹಾಪೋಹಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ.
ಸುಮಾರು 20 ವರ್ಷಗಳ ನಂತರ ಕೊಡಗು ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರುಗಳ ಆಯ್ಕೆಯಾಗಿದೆ. ಪಕ್ಷದ ವಿವಿಧ ಘಟಕಗಳ ಪ್ರಮುಖರು ಹಾಗೂ ಕಾರ್ಯಕರ್ತರು ಈ ಉತ್ಸಾಹವನ್ನು ಇಮ್ಮಡಿ ಪಡಿಸಿಕೊಂಡು ಪಕ್ಷ ಸಂಘಟನೆಗೆ ಆದ್ಯತೆ ನೀಡಬೇಕು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈಸೂರು- ಕೊಡಗು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗಾಗಿ ಶ್ರಮಿಸಬೇಕು. ಗೊಂದಲದ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಬೇಕು, ಸಮಸ್ಯೆಗಳಿದ್ದಲ್ಲಿ ಆಂತರಿಕವಾಗಿ ಶಾಸಕರೊಂದಿಗೆ ಚರ್ಚಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*