ಮಡಿಕೇರಿ ಮಾ.4 NEWS DESK : ಬಿಜೆಪಿ ಮಡಿಕೇರಿ ನಗರ ಮಂಡಲದ ವತಿಯಿಂದ ಬೂತ್ ಸಂಖ್ಯೆ 203 (ಮುಳಿಯ ಲೇ ಔಟ್ )ಮತ್ತು 204 ರಲ್ಲಿ ಗ್ರಾಮ ಚಲೋ ಕಾರ್ಯಕ್ರಮ ನಡೆಯಿತು. ಕಳೆದ 10 ವರ್ಷಗಳಲ್ಲಿ ದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಹಾಗೂ ಕೊಡಗು ಮೈಸೂರು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರು ಮಾಡಿರುವ ಅಭಿವೃದ್ಧಿ ಕಾರ್ಯಗಳ ಸಾಧನೆಯ ಕೈಪಿಡಿಯನ್ನು ಮತದಾರರ ಮನೆ ಮನೆಗೆ ತಲುಪಿಸಲಾಹಿತು. ಮಡಿಕೇರಿ ನಗರ ಮಂಡಲದ ಅಧ್ಯಕ್ಷ ಉಮೇಶ್ ಸುಬ್ರಮಣಿ ಅವರ ನೇತೃತ್ವದಲ್ಲಿ ಪ್ರಚಾರ ಅಭಿಯಾನ ನಡೆಯಿತು. ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ನಗರಸಭೆಯ ಬಿಜೆಪಿ ಸದಸ್ಯರುಗಳು ಹಾಜರಿದ್ದರು.










