ಮಡಿಕೇರಿ ಮಾ.5 NEWS DESK : ಮಂಗಳೂರು ವಿಶ್ವವಿದ್ಯಾನಿಲಯ ತನ್ನ ಆರ್ಥಿಕ ಸ್ಥಿತಿಗತಿಯ ಬಗ್ಗೆ ಶ್ವೇತಪತ್ರವನ್ನು ಹೊರಡಿಸಬೇಕೆಂದು ಮಂಗಳೂರು ವಿವಿಯ ಮಾಜಿ ಸಿಂಡಿಕೇಟ್ ಸದಸ್ಯ ಡಾ.ಎಸ್.ಆರ್.ಹರೀಶ್ ಆಚಾರ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮಂಗಳೂರು ವಿಶ್ವವಿದ್ಯಾನಿಲಯದಿಂದ ನೇಮಕಾತಿಗೊಂಡು ಕೊಡಗು ವಿಶ್ವ ವಿದ್ಯಾನಿಲಯ ಚಿಕ್ಕಅಳುವಾರ ಹಾಗೂ ಅದರ ಘಟಕ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ಕಳೆದ ಐದು ತಿಂಗಳುಗಳಿಂದ ವೇತನವಾಗಿರುವುದಿಲ್ಲ. ಮಡಿಕೇರಿಯಲ್ಲಿ ಕಾಲೇಜು ಉಪನ್ಯಾಸಕರು ಕಳೆದ ಐದಾರು ದಿನಗಳಿಂದ ಪ್ರತಿಭಟನಾ ನಿರತರಾಗಿದ್ದು, ಸಾರ್ವಜನಿಕರೂ ವಿವಿಯ ಬಗ್ಗೆ ಹತಾಶರಾಗಿದ್ದಾರೆ ಎಂದು ಆರೋಪಿಸಿದ್ದಾರೆ. ವಿಶ್ವವಿದ್ಯಾನಿಲಯವು ತಕ್ಷಣವೇ ವಿವಿಯ ಆರ್ಥಿಕ ಶ್ವೇತಪತ್ರವನ್ನು ಸಾರ್ವಜನಿಕವಾಗಿ ಹೊರಡಿಸಬೇಕು. ವಿವಿಯ ಆರ್ಥಿಕ ಪುನರ್ಶ್ಚೇತನದ ದೃಷ್ಟಿಯಿಂದ ರಾಜ್ಯ ಸರಕಾರ ಮಧ್ಯ ಪ್ರವೇಶ ಮಾಡಬೇಕು ಎಂದು ಡಾ.ಎಸ್.ಆರ್.ಹರೀಶ್ ಆಚಾರ್ಯ ಒತ್ತಾಯಿಸಿದ್ದಾರೆ.
Breaking News
- *ಕರ್ನಾಟಕ ಉಪ ಚುನಾವಣೆ : ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ*
- *ಮಿಸ್ಟಿ ಹಿಲ್ಸ್ ನಿಂದ ಮಕ್ಕಳಿಗೆ ಸಾಹಸಕ್ರೀಡೆ*
- *ವಿಟಿಯು ರಾಜ್ಯಮಟ್ಟದ ಕಬಡ್ಡಿ : ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ*
- *ವೀರ ಸೇನಾನಿಗಳಿಗೆ ಅಗೌರವ : ಆಮ್ ಆದ್ಮಿ ಪಾರ್ಟಿ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ*
- *ವಿರಾಜಪೇಟೆ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯಿಂದ ಸ್ಥಳ ಪರಿಶೀಲನೆ*
- *ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಸಾಂಸ್ಕೃತಿಕ ಕಲರವ*
- *ಕಬ್ಬಚ್ಚಿರ ರಶ್ಮಿ ಕಾರ್ಯಪ್ಪಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ*
- *ಬೋಯಿಕೆರಿ ಅಂಗನವಾಡಿಯಲ್ಲಿ ನಿವೃತ್ತ ಕಾರ್ಯಕರ್ತೆಯರಿಗೆ ಬೀಳ್ಕೊಡುಗೆ : ಸಂಸ್ಕಾರವಂತ ಸಮಾಜ ನಿರ್ಮಾಣದ ರೂವಾರಿಗಳು ಅಂಗನವಾಡಿ ತಾಯಂದಿರು : ತೆನ್ನಿರ ಮೈನಾ ಶ್ಲಾಘನೆ*
- *ವ್ಯಾoಡಮ್ ಎಂಟರ್ಪ್ರೈಸಸ್ ನ ವಾರ್ಷಿಕೋತ್ಸವ : ನ.24 ರಂದು ಲಕ್ಕಿ ಡ್ರಾ ಸಮಾರಂಭ*