ಮಡಿಕೇರಿ ಮಾ.5 NEWS DESK : ದೇಶದಲ್ಲಿ ಅಕ್ಕಿ ಬೆಲೆಯಲ್ಲಿ ಶೇ.15ರಷ್ಟು ಹೆಚ್ಚಳವಾಗಿರುವ ಹಿನ್ನೆಲೆ ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸಲು ಕೇಂದ್ರ ಸರ್ಕಾರ ಸಬ್ಸಿಡಿ ದರದಲ್ಲಿ ನೀಡುತ್ತಿರುವ ಭಾರತ್ ಅಕ್ಕಿಯನ್ನು ಮೈಸೂರು- ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರು ಕುಶಾಲನಗರದಲ್ಲಿ ವಿತರಿಸಿದರು. ಅಕ್ಕಿಯ ಬೆಲೆ ಕೆ.ಜಿ ಗೆ 29 ರೂ. ಆಗಿದ್ದು, 5 ಕೆ.ಜಿ ಮತ್ತು 10 ಕೆ.ಜಿ ಬ್ಯಾಗ್ ಗಳಲ್ಲಿ ಲಭ್ಯವಿದೆ. ಸಾರ್ವಜನಿಕರಿಗೆ ಅಕ್ಕಿ ವಿತರಿಸಿ ಮಾತನಾಡಿದ ಸಂಸದರು ಜನಸಾಮಾನ್ಯರಿಗೆ ಸಹಕಾರಿ ಆಗಲಿ ಎಂದು ಕೇಂದ್ರ ಸರ್ಕಾರ ಕಡಿಮೆ ದರದಲ್ಲಿ ಭಾರತ್ ಅಕ್ಕಿಯನ್ನು ಮಾರುಕಟ್ಟೆಗೆ ಪರಿಚಯಿಸಿದ್ದು, ಜನರು ಇದರ ಲಾಭ ಪಡೆದುಕೊಳ್ಳಬೇಕೆಂದು ಕರೆ ನೀಡಿದರು. ಕುಶಾಲನಗರ ಬಿಜೆಪಿ ಪ್ರಮುಖರು ಹಾಗೂ ಜನಪ್ರತಿನಿಧಿಗಳು ಈ ಸಂದರ್ಭ ಉಪಸ್ಥಿತರಿದ್ದರು.












