ಮಡಿಕೇರಿ ಮಾ.5 NEWS DESK : ಪೊನ್ನಂಪೇಟೆ ತಾಲ್ಲೂಕಿನ ತಾವಳಗೇರಿ ಗ್ರಾಮ ವ್ಯಾಪ್ತಿಯಲ್ಲಿ ಹುಲಿ ಉಪಟಳ ತೀವ್ರಗೊಂಡಿದ್ದು, ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ತಡಿಯಂಗಡ ಕಂಬ ಕರುಂಬಯ್ಯ ಎಂಬುವವರಿಗೆ ಸೇರಿದ ಗಬ್ಬದ ಹಸು ಹುಲಿ ದಾಳಿಗೆ ಬಲಿಯಾಗಿದೆ. ಮೇಯಲು ಬಿಟ್ಟಿದ್ದ ಹಸು ಸೋಮವಾರ ರಾತ್ರಿಯೂ ಮನೆಗೆ ಬಂದಿರಲಿಲ್ಲ. ಇಂದು ಬೆಳಗ್ಗೆ ಹಸುವಿನ ಮೃತದೇಹ ಪತ್ತೆಯಾಗಿದ್ದು, ಹುಲಿ ದಾಳಿಯಾಗಿರುವುದು ಖಚಿತವಾಗಿದೆ. ಪೊನ್ನಂಪೇಟೆ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಹುಲಿ ಉಪಟಳವನ್ನು ಅರಣ್ಯ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.










