Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *45 ನೇ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲೆಯ ಕ್ರೀಡಾಪಟುಗಳ ಸಾಧನೆ*
  • *ಗ್ರಾಮೀಣ ಪ್ರತಿಭೆಗಳಿಗೆ ಕೆಇಎ ನೀಡಲಿದೆ ‘ನೀಟ್’ ಬಲ: ಸರ್ಕಾರಿ ಕಾಲೇಜುಗಳಲ್ಲೇ ಉಚಿತ ತರಬೇತಿ; ಸಚಿವರಿಂದ ಮಹತ್ವದ ಘೋಷಣೆ!*
  • *ಅಧಿವೇಶನದಲ್ಲಿ ಡಿಸಿಎಂ ಜೊತೆ ಶಾಸಕ ಎ.ಎಸ್.ಪೊನ್ನಣ್ಣ ಸಮಾಲೋಚನೆ*
  • *ರಾಜ್ಯದಲ್ಲಿ ಬದಲಾದ ಹವಾಮಾನ: ಹಲವೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ; ಬೀದರ್‌ನಲ್ಲಿ ಸಿಡಿಲಿಗೆ ರೈತ ಬಲಿ!*
  • *ಆದಿವಾಸಿಗಳ ಹಕ್ಕಿಗಾಗಿ ಆಗ್ರಹಿಸಿ ಪ್ರತಿಭಟನೆ : ಲೈನ್ ಮನೆಗಳಿಂದ ಮುಕ್ತಗೊಳಿಸಲು ಒತ್ತಾಯ*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆಗಳು*
  • *ಪಾಕ್-ಅಫ್ಘಾನ್ ಯುದ್ಧ ಭೀಕರ: ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನ ವಾಯುದಾಳಿ; 400 ಮಂದಿ ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ!*
  • *ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*
  • *ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*
  • *ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರ : ಹೆಣ್ಣು ಮಕ್ಕಳ ಹಕ್ಕುಗಳ ಕುರಿತು ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಾಗಾರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರ : ಹೆಣ್ಣು ಮಕ್ಕಳ ಹಕ್ಕುಗಳ ಕುರಿತು ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಾಗಾರ*

ಮಾರ್ಚ್ 5, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.5 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದೊಂದಿಗೆ 2023-24ನೇ ಸಾಲಿನ ಮಿಶನ್ ಶಕ್ತಿ ಯೋಜನೆಯಯಡಿ “ಬೇಟಿ ಬಚಾವೊ-ಬೇಟಿ ಪಡಾವೊ” ಜಿಲ್ಲಾ ಮಟ್ಟದ ಕಾರ್ಯಕ್ರಮದ ಅಂಗವಾಗಿ ಕುಶಾಲನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ “ಹೆಣ್ಣುಮಕ್ಕಳ ಹಕ್ಕುಗಳ ಕುರಿತು ತರಬೇತಿ ಕಾರ್ಯಾಗಾರ” ನಡೆಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿದೇರ್ಶಕ ನಟರಾಜ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಪ್ರಸ್ತುತ ದಿನಗಳಲ್ಲಿ ಲೈಂಗಿಕ ದೌರ್ಜನ್ಯ ಹೆಚ್ಚಾಗುತ್ತಿದ್ದು, ಈ ಕುರಿತು ಮಕ್ಕಳಿಗೆ ಸುರಕ್ಷತೆಯ ಬಗ್ಗೆ ಅರಿವು ಮೂಡಿಸಬೇಕಾಗಿದೆ. ಆದ್ದರಿಂದ ಮಕ್ಕಳು ಹೆಚ್ಚು ಓದಿನ ಕಡೆ ಆಸಕ್ತಿ ವಹಿಸಬೇಕು ಮತ್ತು ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು.
ಒಂದು ಮಗುವು ತಾಯಿಯ ಗರ್ಭದಲ್ಲಿರುವಾಗಲೇ ಮಗು ಹಕ್ಕುಗಳನ್ನು ಪಡೆಯಲು ಅರ್ಹವಾಗಿರುತ್ತದೆ. ಲಿಂಗ ಪತ್ತೆ ಕಾನೂನು ಪ್ರಕಾರ ಅಪರಾಧ. ಮಗುವಿಗೆ ಹೃದಯ ಬಡಿತ ಶುರುವಾದ ಸಮಯದಿಂದಲೇ ಮಗುವಿಗೆ ಬದುಕುವ ಹಕ್ಕು ಹೊಂದುತ್ತದೆ. 2015 ರಲ್ಲಿ ಭಾರತ ಸರ್ಕಾರ “ಬೇಟಿ ಬಚಾವೊ ಬೇಟಿ ಪಡಾವೋ” ಕಾರ್ಯಕ್ರಮವನ್ನು ಪ್ರರಂಭಮಾಡಿದ್ದು. ಭಾರತ ದೇಶದಲ್ಲಿ ಹೆಣ್ಣು ಮಕ್ಕಳ ಲಿಂಗಾನುಪಾತ ಕಡೆಮೆಯಾಗುತ್ತಿರುವುದು ಆತಂಕಕಾರಿ ಬೆಳವಣಿಯಾಗಿದೆ ಎಂದರು.
ಜಿಲ್ಲೆಯಲ್ಲಿ 1000 ಪುರುಷರಿಗೆ 962 ಹೆಣ್ಣು ಮಕ್ಕಳು ಜನಿಸುತ್ತಿರುವುದು ಕಂಡು ಬರುತ್ತಿದೆ. ಹೆಣ್ಣು ಭ್ರೂಣ ಹತ್ಯೆ, ಹೆಣ್ಣು ಮಕ್ಕಳ ಕುರಿತು ತಾತ್ಸರ ಭಾವನೆ ಇದ್ದು ಇದನ್ನು ತೊಡೆದು ಹಾಕುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಆದರೆ ಪ್ರಸ್ತುತ ದಿನಗಳಲ್ಲಿ ಗಂಡು-ಹೆಣ್ಣು ಮಕ್ಕಳನ್ನು ಸಮಾಜದಲ್ಲಿ ಸಮಾನ ಮನೋಭಾವದಿಂದ ಕಾಣುತ್ತಿರುವುದು ಶ್ಲಾಘನೀಯ ವಿಷಯ ಎಂದರು.

ಹೆಣ್ಣು ಮಗುವು ಜನನವಾದಗ ಪೋಷಕರು ಮಗು ಬೇಡವೆಂದಾದ ಪಕ್ಷದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಡಿಲು ಕೇಂದ್ರದಲ್ಲಿ ಮಗುವನ್ನು ದತ್ತು ನೀಡಬಹುದು ಎಂದು ಸಲಹೆ ನೀಡಿದರು.
ಕುಶಾಲನಗರ ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಉಮಾ ಮಾತನಾಡಿ, ಗ್ರಾಮೀಣ ಪ್ರದೇಶದ ಪೋಷಕರು ಹೆಚ್ಚು ಕಾರ್ಮಿಕರಾಗಿ ದುಡಿಯುತ್ತಿದ್ದು, ಮಕ್ಕಳಿಗೆ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ನೀಡುತ್ತಿದ್ದಾರೆ. ಅದರಂತೆ ವಿದ್ಯಾರ್ಥಿಗಳು ಓದಿನಕಡೆ ಹೆಚ್ಚು ಆಸಕ್ತಿ ವಹಿಸಿ ಸಾಧನೆ ಮಾಡಬೇಕು ಎಂದು ಹೇಳಿದರು.
ಕೆಲವು ಮಕ್ಕಳು ಶಾಲೆಗೆ ಸೈಕಲ್ ಬಸ್ಸ್ ಅಲ್ಲದೆ ನಡೆದು ಬರುತ್ತಿದ್ದು. ಇಂತಹ ಸಮಯದಲ್ಲಿ ಯಾವುದೇ ತರನಾದ ಆಸೆ ಆಮಿಷಗಳಿಗೆ ಬಲಿಯಾದೆ ಜಾಗೃತರಾಗಿರಬೇಕು. ಒಂದು ವೇಳೆ ಸಮಸ್ಯೆ ಎದುರಾದ ಮಕ್ಕಳ ಸಹಾಯವಾಣಿ 1098 ಗೆ ಕರೆಮಾಡುವುದು ಸೂಕ್ತ ಎಂದು ತಿಳಿಸಿದರು. ಅಲ್ಲದೆ ಪೋಕ್ಸೋ ಪ್ರಕರಣಗಳಾಗದಂತೆ ಎಚ್ಚರ ವಹಿಸುವಂತೆ ತಿಳಿಸಿದರು.
ಕುಶಾಲನಗರದ ಮಕ್ಕಳ ವಿಶೇಷ ಪೊಲೀಸ್ ಘಟಕ ಗಾಯಿತ್ರಿ ಮಾತನಾಡಿ, ಮಕ್ಕಳು ಹೆಚ್ಚಿನ ವಿದ್ಯಾಭ್ಯಾಸ ಪಡೆದುಕೊಳ್ಳಲಿ ಎಂಬ ಉದ್ದೇಶದಿಂದ ಪೋಷಕರು ಶಾಲೆಗಳಿಗೆ ತಮ್ಮ ಮಕ್ಕಳನ್ನು ಕಳುಹಿಸುತ್ತಿದ್ದು, ವಿದ್ಯಾರ್ಥಿಗಳು ಕೇವಲ ಪಾಠಗಳಿಗೆ ಅಷ್ಟೇ ಸೀಮಿತವಾಗಿರದೆ ಇತರ ಕ್ರೀಡೆ, ನೃತ್ಯ ಸೇರಿದಂತೆ ಪಠ್ಯೇತರ ಚಟುವಟಿಕೆಗಳಿಗಳಲ್ಲಿಯೂ ತೊಡಗಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಆದರೆ ಇಂದು ಮಕ್ಕಳು ಮೊಬೈಲ್ ಬಳಕೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ತೋಡಗಿಕೊಂಡು ತಮ್ಮ ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿದರು.
ಮಕ್ಕಳು ಯಾವುದೇ ತರದ ಸಮಸ್ಯೆಗಳು ಸಂಭವಿಸಿದ್ದಲ್ಲಿ ಪೊಲೀಸ್ ಸಹಾಯವಾಣಿ 112ಕ್ಕೆ ತುರ್ತಾಗಿ ಕರೆ ಮಾಡಬಹುದು, ನಿಮ್ಮ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವುದಾಗಿ ತಿಳಿಸಿದರು.
ಶಾಲಾ ಹಿರಿಯ ಶಿಕ್ಷಕ ಎ.ಸಿ.ಮಂಜುನಾಥ್ ಮಾತನಾಡಿ, ಮಕ್ಕಳು ಮೊಬೈಲ್‍ಗಳಿಂದ ಹಾಗೂ ಜಾಲತಾಣಗಳಿಂದ ದೂರವಿದ್ದು ಓದಿನಕಡೆ ಆಸಕ್ತಿ ವಹಿಸಬೇಕು. ಮಕ್ಕಳಿಗೆ ಉತ್ತಮ ಕಡ್ಡಾಯ ಶಿಕ್ಷಣದ ಸೌಲಭ್ಯವಿದ್ದು ಒಳ್ಳೆಯ ಸಂಸ್ಕೃತಿ, ಉತ್ತಮ ಆಲೋಚನೆಗಳಿಂದ ಗುರಿ ಸಾಧಿಸಬೇಕು ಎಂದು ಕರೆ ನೀಡಿದರು.
ಮಕ್ಕಳ ಸಹಾಯವಾಣಿಯ ಮೇಲ್ವಿಚಾರಕಿ ಮಧು ಮಾತನಾಡಿ, ಮಕ್ಕಳ ಸಹಾಯವಾಣಿಯ ಕುರಿತಂತೆ ಮಾಹಿತಿ ನೀಡಿದರು. ಮಕ್ಕಳಿಗೆ ಮಾನಸಿಕ, ದೈಹಿಕ ಸಮಸ್ಯೆಗಳಾದಂತಹ ಪಕ್ಷದಲ್ಲಿ 1098 ಗೆ ಕರೆಮಾಡಿ ತಿಳಿಸತಕ್ಕದ್ದು ದೂರು ದಾಖಲಾದ ಪಕ್ಷದಲ್ಲಿ ನಿಮ್ಮ ದೂರನ್ನು ಗೌಪ್ಯವಾಗಿಟ್ಟು ಮನೆಭೇಟಿ ನೀಡುವುದರೊಂದಿಗೆ ಉಚಿತ ಆಪ್ತ ಸಮಾಲೋಚನೆಯನ್ನು ನೀಡಲಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಇಲಾಖೆಯ ಜೆಂಡರ್ ಸ್ಪೆಷಲಿಸ್ಟ್ ಎಸ್.ಆರ್.ಕೇಶಿನಿ ಸ್ವಾಗತಿಸಿದರು. ಶಾಲಾ ಶಿಕ್ಷಕಿ ಹೇಮಾವತಿ ನಿರೂಪಿಸಿ, ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*45 ನೇ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲೆಯ ಕ್ರೀಡಾಪಟುಗಳ ಸಾಧನೆ*

ಮಾರ್ಚ್ 17, 2026

*ಗ್ರಾಮೀಣ ಪ್ರತಿಭೆಗಳಿಗೆ ಕೆಇಎ ನೀಡಲಿದೆ ‘ನೀಟ್’ ಬಲ: ಸರ್ಕಾರಿ ಕಾಲೇಜುಗಳಲ್ಲೇ ಉಚಿತ ತರಬೇತಿ; ಸಚಿವರಿಂದ ಮಹತ್ವದ ಘೋಷಣೆ!*

ಮಾರ್ಚ್ 17, 2026

*ಅಧಿವೇಶನದಲ್ಲಿ ಡಿಸಿಎಂ ಜೊತೆ ಶಾಸಕ ಎ.ಎಸ್.ಪೊನ್ನಣ್ಣ ಸಮಾಲೋಚನೆ*

ಮಾರ್ಚ್ 17, 2026

*ಗ್ರಾಮೀಣ ಪ್ರತಿಭೆಗಳಿಗೆ ಕೆಇಎ ನೀಡಲಿದೆ ‘ನೀಟ್’ ಬಲ: ಸರ್ಕಾರಿ ಕಾಲೇಜುಗಳಲ್ಲೇ ಉಚಿತ ತರಬೇತಿ; ಸಚಿವರಿಂದ ಮಹತ್ವದ ಘೋಷಣೆ!*

ಮಾರ್ಚ್ 17, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 17, 2026: ನಗರ ಪ್ರದೇಶದ ಶ್ರೀಮಂತ ವಿದ್ಯಾರ್ಥಿಗಳಂತೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕೋಚಿಂಗ್ ಪಡೆಯಲು ಸಾಧ್ಯವಾಗದ…

*ಅಧಿವೇಶನದಲ್ಲಿ ಡಿಸಿಎಂ ಜೊತೆ ಶಾಸಕ ಎ.ಎಸ್.ಪೊನ್ನಣ್ಣ ಸಮಾಲೋಚನೆ*

ಮಾರ್ಚ್ 17, 2026

*ರಾಜ್ಯದಲ್ಲಿ ಬದಲಾದ ಹವಾಮಾನ: ಹಲವೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ; ಬೀದರ್‌ನಲ್ಲಿ ಸಿಡಿಲಿಗೆ ರೈತ ಬಲಿ!*

ಮಾರ್ಚ್ 17, 2026

*ಆದಿವಾಸಿಗಳ ಹಕ್ಕಿಗಾಗಿ ಆಗ್ರಹಿಸಿ ಪ್ರತಿಭಟನೆ : ಲೈನ್ ಮನೆಗಳಿಂದ ಮುಕ್ತಗೊಳಿಸಲು ಒತ್ತಾಯ*

ಮಾರ್ಚ್ 17, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆಗಳು*

ಮಾರ್ಚ್ 17, 2026

*ಪಾಕ್-ಅಫ್ಘಾನ್ ಯುದ್ಧ ಭೀಕರ: ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನ ವಾಯುದಾಳಿ; 400 ಮಂದಿ ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ!*

ಮಾರ್ಚ್ 17, 2026

*ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*

ಮಾರ್ಚ್ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.