Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *45 ನೇ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲೆಯ ಕ್ರೀಡಾಪಟುಗಳ ಸಾಧನೆ*
  • *ಗ್ರಾಮೀಣ ಪ್ರತಿಭೆಗಳಿಗೆ ಕೆಇಎ ನೀಡಲಿದೆ ‘ನೀಟ್’ ಬಲ: ಸರ್ಕಾರಿ ಕಾಲೇಜುಗಳಲ್ಲೇ ಉಚಿತ ತರಬೇತಿ; ಸಚಿವರಿಂದ ಮಹತ್ವದ ಘೋಷಣೆ!*
  • *ಅಧಿವೇಶನದಲ್ಲಿ ಡಿಸಿಎಂ ಜೊತೆ ಶಾಸಕ ಎ.ಎಸ್.ಪೊನ್ನಣ್ಣ ಸಮಾಲೋಚನೆ*
  • *ರಾಜ್ಯದಲ್ಲಿ ಬದಲಾದ ಹವಾಮಾನ: ಹಲವೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ; ಬೀದರ್‌ನಲ್ಲಿ ಸಿಡಿಲಿಗೆ ರೈತ ಬಲಿ!*
  • *ಆದಿವಾಸಿಗಳ ಹಕ್ಕಿಗಾಗಿ ಆಗ್ರಹಿಸಿ ಪ್ರತಿಭಟನೆ : ಲೈನ್ ಮನೆಗಳಿಂದ ಮುಕ್ತಗೊಳಿಸಲು ಒತ್ತಾಯ*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆಗಳು*
  • *ಪಾಕ್-ಅಫ್ಘಾನ್ ಯುದ್ಧ ಭೀಕರ: ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನ ವಾಯುದಾಳಿ; 400 ಮಂದಿ ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ!*
  • *ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*
  • *ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*
  • *ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ವಿವಿ : ಸ್ನಾತಕ ಪದವಿ ವಿದ್ಯಾರ್ಥಿಗಳ ಪ್ರಥಮ ಸೆಮಿಸ್ಟರ್‌ ಫಲಿತಾಂಶ ಪ್ರಕಟ : ಪದವಿ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಿದ ರಾಜ್ಯದ ಮೊದಲ ವಿಶ್ವವಿದ್ಯಾಲಯ ಎಂಬ ಹೆಗ್ಗಳಿಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ವಿವಿ : ಸ್ನಾತಕ ಪದವಿ ವಿದ್ಯಾರ್ಥಿಗಳ ಪ್ರಥಮ ಸೆಮಿಸ್ಟರ್‌ ಫಲಿತಾಂಶ ಪ್ರಕಟ : ಪದವಿ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಿದ ರಾಜ್ಯದ ಮೊದಲ ವಿಶ್ವವಿದ್ಯಾಲಯ ಎಂಬ ಹೆಗ್ಗಳಿಕೆ*

ಮಾರ್ಚ್ 5, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.5 NEWS DESK :  ಕೊಡಗು ವಿಶ್ವವಿದ್ಯಾಲಯದ ಘಟಕ ಮತ್ತು ಸಂಯೋಜಿತ ಮಹಾವಿದ್ಯಾಲಯಗಳಲ್ಲಿ 2023-24ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಬಿಎ, ಬಿಕಾಂ, ಬಿಬಿಎ, ಬಿಸಿಎ ಮತ್ತು ಬಿಎಸ್ಸಿ ಪ್ರಥಮ ವರ್ಷದ ಸ್ನಾತಕ ವಿದ್ಯಾರ್ಥಿಗಳ ಪ್ರಥಮ ಸೆಮಿಸ್ಟರ್ ಪರೀಕ್ಷಾ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಗಿದಿದ್ದು, ಮೊದಲ ಹಂತದಲ್ಲಿ ಬಿಕಾಂ, ಬಿಬಿಎ, ಬಿಸಿಎ ಮತ್ತು ಬಿಎಸ್ಸಿ ಪದವಿಗಳ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಎರಡನೇ ಹಂತದಲ್ಲಿ ಬಿಎ ಪದವಿಯ ಫಲಿತಾಂಶವನ್ನು ಸಹ ಅತೀ ಶೀಘ್ರವಾಗಿ ಪ್ರಕಟಿಸಲಾಗುತ್ತದೆ.

ಕೊಡಗು ವಿಶ್ವವಿದ್ಯಾಲಯದ ಪ್ರಥಮ ವರ್ಷದ ಸ್ನಾತಕ ವಿದ್ಯಾರ್ಥಿಗಳ ಪ್ರಥಮ ಸೆಮಿಸ್ಟರ್ ಪರೀಕ್ಷೆಗಳು ಜ.25 ರಿಂದ ಆರಂಭಗೊಂಡು ಬಿಎ ಪದವಿಯ ಕೊನೆಯ ಪರೀಕ್ಷೆಯು ಮಾ.4  ರಂದು ಪೂರ್ಣಗೊಂಡಿದೆ. ಘಟಕ ಮಹಾವಿದ್ಯಾಲಯವಾಗಿರುವ ಮಡಿಕೇರಿಯ ಎಫ್‌ಎಂಕೆಎಂಸಿ ಕಾಲೇಜಿನಲ್ಲಿ ವ್ಯವಸ್ಥಿತವಾಗಿ ಮೌಲ್ಯಮಾಪನ ಕೇಂದ್ರವನ್ನು ಸಿದ್ಧಪಡಿಸಿಕೊಂಡು, ಜಿಲ್ಲೆಯ ವಿವಿಧ ಸ್ನಾತಕ ಪದವಿ ಕಾಲೇಜುಗಳ ವಿಷಯವಾರು ಮೌಲ್ಯಮಾಪಕರು ಬಹುಉತ್ಸಾಹದಿಂದ ಸಕ್ರಿಯವಾಗಿ ಭಾಗವಹಿಸಿ ಮೌಲ್ಯಮಾಪನ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ.

ಪ್ರಥಮ ವರ್ಷದ ಸ್ನಾತಕ ವಿದ್ಯಾರ್ಥಿಗಳ ಪ್ರಥಮ ಸೆಮಿಸ್ಟರ್ ಪರೀಕ್ಷೆಗಳಿಗೆ ಸಂಬಂಧಿಸಿದ ಎಲ್ಲಾ ಪ್ರಕ್ರಿಯೆಗಳನ್ನು ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ (UUCMS) ಮೂಲಕ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದ್ದು, ಸ್ನಾತಕ ಪದವಿ ವಿದ್ಯಾರ್ಥಿಗಳು ಪರೀಕ್ಷಾ ಫಲಿತಾಂಶವನ್ನು ಕೊಡಗು ವಿಶ್ವವಿದ್ಯಾಲಯದ ವೆಬ್‌ಸೈಟ್ kuk.karnataka.gov.in ಮುಖಾಂತರ ವಿದ್ಯಾರ್ಥಿಗಳ ನೋಂದಣಿ ಸಂಖ್ಯೆ ಮೂಲಕ ನೋಡಲು ಲಭ್ಯವಿದೆ. 2023-2024ನೇ ಶೈಕ್ಷಣಿಕ ಸಾಲಿನ ಪ್ರಥಮ ಸೆಮಿಸ್ಟರ್‌ನ ಪದವಿ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಿದ ರಾಜ್ಯದ ಮೊದಲ ವಿಶ್ವವಿದ್ಯಾಲಯ ಎಂಬ ಹೆಗ್ಗಳಿಕೆಗೆ ನಮ್ಮ ಕೊಡಗು ವಿಶ್ವವಿದ್ಯಾಲಯವು ಭಾಜನವಾಗಿದೆ.

ಇದೇ ಸಂದರ್ಭದಲ್ಲಿ ಸ್ನಾತಕ ಪದವಿ ಪರೀಕ್ಷಾ ಫಲಿತಾಂಶಗಳನ್ನು ಕುರಿತು ಮಾತನಾಡಿದ ಕೊಡಗು ವಿಶ್ವವಿದ್ಯಾಲಯ ಕುಲಪತಿಗಳಾದ ಪ್ರೊ. ಅಶೋಕ ಸಂ ಆಲೂರ, ಕರ್ನಾಟಕ ಸರ್ಕಾರವು 2022-23ನೇ ಸಾಲಿನಲ್ಲಿ ಕೊಡಗಿನಲ್ಲಿ ನೂತನವಾಗಿ ಕೊಡಗು ವಿಶ್ವವಿದ್ಯಾಲಯವನ್ನು ಸ್ಥಾಪನೆ ಮಾಡಿ ದಿನಾಂಕ:28.04.2023 ರಂದು ಅದನ್ನು ಅಧಿಕೃತವಾಗಿ ಉದ್ಘಾಟನೆ ಮಾಡಿತ್ತು. ಕರ್ನಾಟಕದ ರಾಜ್ಯಪಾಲರು ಮತ್ತು ಕೊಡಗು ವಿಶ್ವವಿದ್ಯಾಲಯದ ಕುಲಾಧಿಪತಿಗಳೂ ಆದ  ಥಾವರ್ ಚಂದ್ ಗೆಹ್ಲೋಟ್‌ ಅವರು ಕೊಡಗು ವಿಶ್ವವಿದ್ಯಾಲಯದ ವೆಬ್‌ಸೈಟ್ kuk.karnataka.gov.in ಅನ್ನು 2023 ಮೇ 05 ರಂದು ರಾಜಭವನದಲ್ಲಿ ಅನಾವರಣಗೊಳಿಸಿದ್ದರು.

ಕೊಡಗು ವಿಶ್ವವಿದ್ಯಾಲಯಕ್ಕೆ ವಿಶ್ವವಿದ್ಯಾಲಯ ಧನ ಸಹಾಯ ಆಯೋಗ (UGC) ತನ್ನ ಅಧಿನಿಯಮ 1956 ರ ಪ್ರಕರಣ 2 (ಎಫ್) ಅಡಿಯಲ್ಲಿ 2023 ರ ಜು.25 ರಂದು ಮಾನ್ಯತೆಯನ್ನು ನೀಡಿ ಪ್ರಕಟಣೆ ಹೊರಡಿಸಿತ್ತು. ಯುಜಿಸಿ ಮಾನ್ಯತೆ ಸಿಕ್ಕಿರುವುದರಿಂದ ಯುಜಿಸಿ ಅಡಿಯಲ್ಲಿ ಬರುವಂತಹ ವಿವಿಧ ಪದವಿಗಳನ್ನು ನೀಡಲು ಕೊಡಗು ವಿಶ್ವವಿದ್ಯಾಲಯವು ಅಧಿಕೃತ ಮಾನ್ಯತೆ ಪಡೆದಕೊಂಡಿದೆ. ಮುಂದುವರೆದು, ಕೊಡಗು ವಿಶ್ವವಿದ್ಯಾಲಯವು ಘಟಕ ಮತ್ತು ಸಂಯೋಜಿತ ಮಹಾವಿದ್ಯಾಲಯಗಳಲ್ಲಿ 2023-24ನೇ ಶೈಕ್ಷಣಿಕ ಸಾಲಿನಲ್ಲಿ ಬಿಎ, ಬಿಕಾಂ, ಬಿಬಿಎ, ಬಿಸಿಎ ಮತ್ತು ಬಿಎಸ್ಸಿ ಪ್ರವೇಶಾತಿಗೆ ಅವಕಾಶವನ್ನು ಕಲ್ಪಿಸಿಕೊಟ್ಟಿತ್ತು. ಪ್ರಥಮ ವರ್ಷದ ಸ್ನಾತಕ ವಿದ್ಯಾರ್ಥಿಗಳ ಪ್ರಥಮ ಸೆಮಿಸ್ಟರ್ ಪರೀಕ್ಷೆಗಳಲ್ಲಿ 1025 ಪುರುಷ ವಿದ್ಯಾರ್ಥಿಗಳು ಮತ್ತು 999 ಮಹಿಳಾ ವಿದ್ಯಾರ್ಥಿಗಳು ಸೇರಿ ಒಟ್ಟು 2024 ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಬರೆದಿದ್ದಾರೆ. ಈ ಚೊಚ್ಚಲ ಸ್ನಾತಕ ಪದವಿ ಪರೀಕ್ಷೆಗಳನ್ನು ಯಶಸ್ವಿಯಾಗಿ ನಿರ್ವಹಿಸಿರುವುದು ಶ್ಲಾಘನೀಯವಾಗಿದ್ದು, ನಮ್ಮ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕಾಗಿ ಹಾಗೂ ಸರ್ವತೋಮುಖ ಪ್ರಗತಿಗಾಗಿ ಇದು ಪೂರಕವಾಗಿದೆ ಎಂದು ತಿಳಿಸಿದರು.

ಕೊಡಗು ವಿಶ್ವವಿದ್ಯಾಲಯದ ಕುಲಸಚಿವರು (ಮೌಲ್ಯಮಾಪನ) ಆದ ಡಾ.ಸೀನಪ್ಪ ಮಾತನಾಡಿ, ನಮ್ಮ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡಿದಂತಹ ವಿದ್ಯಾರ್ಥಿಗಳು ಭವಿಷ್ಯದಲ್ಲಿ ತಮ್ಮ ಉನ್ನತ ವ್ಯಾಸಂಗ ಮತ್ತು ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ತೊಡಕುಗಳು ಆಗಬಾರದು ಎಂಬ ಸದುದ್ದೇಶದಿಂದ ಮೌಲ್ಯಮಾಪನ ಪ್ರಕ್ರಿಯೆಗೆ ತ್ವರಿತ ಚಾಲನೆ ನೀಡಲಾಗಿತ್ತು. ಪರೀಕ್ಷೆಗಳು ಮುಗಿದ 20 ದಿನಗಳೊಳಗೆ ಫಲಿತಾಂಶವನ್ನು ಪ್ರಕಟಿಸಬೇಕು ಎಂಬ ಯುಜಿಸಿಯ ನಿರ್ದೇಶವಿದ್ದು ಅದರಂತೆಯೇ ನಮ್ಮ ಕೊಡಗು ವಿಶ್ವವಿದ್ಯಾಲಯವು ಪರೀಕ್ಷೆಗಳು ನಡೆದ ಕೇವಲ ಒಂದು ದಿನದೊಳಗೆ ಮೊದಲ ಹಂತದ ಫಲಿತಾಂಶವನ್ನು ಪ್ರಕಟಿಸುವಲ್ಲಿ ಸಫಲವಾಗಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಕೊಡಗು ವಿಶ್ವವಿದ್ಯಾಲಯದ ಸ್ನಾತಕ ಪದವಿ ಪರೀಕ್ಷೆಗಳ ಸಂಯೋಜಕರಾದ ಪ್ರೊ. ರವಿಶಂಕರ್, ಪರೀಕ್ಷಾ ಮೇಲ್ವಿಚಾರಕರಾದ ಪ್ರೊ. ರಾಘವ್ ಹಾಗೂ ಉಪ ಮೇಲ್ವಿಚಾರಕರಾದ ಡಾ. ಶೈಲಶ್ರೀ ಹಾಗೂ ಕೊಡಗು ವಿಶ್ವವಿದ್ಯಾಲಯದ UUCMS ತಂಡ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*45 ನೇ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲೆಯ ಕ್ರೀಡಾಪಟುಗಳ ಸಾಧನೆ*

ಮಾರ್ಚ್ 17, 2026

*ಗ್ರಾಮೀಣ ಪ್ರತಿಭೆಗಳಿಗೆ ಕೆಇಎ ನೀಡಲಿದೆ ‘ನೀಟ್’ ಬಲ: ಸರ್ಕಾರಿ ಕಾಲೇಜುಗಳಲ್ಲೇ ಉಚಿತ ತರಬೇತಿ; ಸಚಿವರಿಂದ ಮಹತ್ವದ ಘೋಷಣೆ!*

ಮಾರ್ಚ್ 17, 2026

*ಅಧಿವೇಶನದಲ್ಲಿ ಡಿಸಿಎಂ ಜೊತೆ ಶಾಸಕ ಎ.ಎಸ್.ಪೊನ್ನಣ್ಣ ಸಮಾಲೋಚನೆ*

ಮಾರ್ಚ್ 17, 2026

*ಗ್ರಾಮೀಣ ಪ್ರತಿಭೆಗಳಿಗೆ ಕೆಇಎ ನೀಡಲಿದೆ ‘ನೀಟ್’ ಬಲ: ಸರ್ಕಾರಿ ಕಾಲೇಜುಗಳಲ್ಲೇ ಉಚಿತ ತರಬೇತಿ; ಸಚಿವರಿಂದ ಮಹತ್ವದ ಘೋಷಣೆ!*

ಮಾರ್ಚ್ 17, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 17, 2026: ನಗರ ಪ್ರದೇಶದ ಶ್ರೀಮಂತ ವಿದ್ಯಾರ್ಥಿಗಳಂತೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕೋಚಿಂಗ್ ಪಡೆಯಲು ಸಾಧ್ಯವಾಗದ…

*ಅಧಿವೇಶನದಲ್ಲಿ ಡಿಸಿಎಂ ಜೊತೆ ಶಾಸಕ ಎ.ಎಸ್.ಪೊನ್ನಣ್ಣ ಸಮಾಲೋಚನೆ*

ಮಾರ್ಚ್ 17, 2026

*ರಾಜ್ಯದಲ್ಲಿ ಬದಲಾದ ಹವಾಮಾನ: ಹಲವೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ; ಬೀದರ್‌ನಲ್ಲಿ ಸಿಡಿಲಿಗೆ ರೈತ ಬಲಿ!*

ಮಾರ್ಚ್ 17, 2026

*ಆದಿವಾಸಿಗಳ ಹಕ್ಕಿಗಾಗಿ ಆಗ್ರಹಿಸಿ ಪ್ರತಿಭಟನೆ : ಲೈನ್ ಮನೆಗಳಿಂದ ಮುಕ್ತಗೊಳಿಸಲು ಒತ್ತಾಯ*

ಮಾರ್ಚ್ 17, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆಗಳು*

ಮಾರ್ಚ್ 17, 2026

*ಪಾಕ್-ಅಫ್ಘಾನ್ ಯುದ್ಧ ಭೀಕರ: ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನ ವಾಯುದಾಳಿ; 400 ಮಂದಿ ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ!*

ಮಾರ್ಚ್ 17, 2026

*ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*

ಮಾರ್ಚ್ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.