ನಾಪೋಕ್ಲು ಮಾ.5 NEWS DESK : ಈಸ್ಟ್ ಕೊಳಕೇರಿ ಗ್ರಾಮದ ಬಿದ್ದಾಟoಡ ವಾಡೆ ಸಮೀಪದಲ್ಲಿರುವ ಶ್ರೀ ಮಹಾದೇವ ಕೋಟ ದೇವಾಲಯದಲ್ಲಿ ಪ್ರತೀ ವರ್ಷ ದಂತೆ ಈ ಬಾರಿಯೂ ಸಂಪ್ರದಾಯಿಕವಾಗಿ ಮಹಾಶಿವರಾತ್ರಿ ವಿಶೇಷ ಪೂಜೆಯು ಮಾ.8 ರಂದು ಜರುಗಲಿದೆ.
ಬೆಳಗ್ಗೆ 9 ಗಂಟೆಯಿಂದ 11 ಗಂಟೆಯವರೆಗೆ ರುದ್ರಾಭಿಷೇಕ ಸೇರಿದಂತೆ ವಿವಿಧ ಪೂಜಾ ಕಾರ್ಯಕ್ರಮ ಜರುಗಲಿದ್ದು, ಮಧ್ಯಾಹ್ನ 12 ಗಂಟೆಗೆ ಮಹಾ ಮಂಗಳಾರತಿ, ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನಡೆಯಲಿದೆ.
ಆದ್ದರಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಆಡಳಿತ ಮಂಡಳಿ ಅಧ್ಯಕ್ಷ ಬಿದ್ದಾಟoಡ ಮುತ್ತಣ್ಣ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.
ವರದಿ : ದುಗ್ಗಳ ಸದಾನಂದ.




































