ಮಡಿಕೇರಿ ಮಾ.5 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಅಲ್ಪಸಂಖ್ಯಾತರ ಓಲೈಕೆ ಬಿಟ್ಟರೆ ಬೇರೆ ಯಾವುದೇ ಅಜೆಂಡಾ ಇಲ್ಲ ಎಂದು ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದಾರೆ.
ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದೂ ಹಾಗೂ ದಲಿತ ವಿರೋಧಿ ನೀತಿಗಳನ್ನು ಅನುಸರಿಸುತ್ತಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಅಧೀರರನ್ನಾಗಿ ಮಾಡಿ ಗೆಲುವು ಸಾಧಿಸುವ ವ್ಯವಸ್ಥಿತ ಪ್ರಯತ್ನಗಳು ನಡೆಯುತ್ತಿದೆ. ಬಹಳ ಹಿಂದಿನಿಂದಲೂ ಕಾಂಗ್ರೆಸ್ ಹಿಂದೂಗಳನ್ನು ಟಾರ್ಗೆಟ್ ಮಾಡಿಕೊಂಡೇ ಬಂದಿದೆ ಎಂದು ಟೀಕಿಸಿದರು.
2023ರಲ್ಲಿ ವಿಧಾನಸಭೆ ಚುನಾವಣಾ ಪ್ರಚಾರದ ಸಂದರ್ಭ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತಾಲಿಬಾನ್ ಆಡಳಿತವಿರುತ್ತದೆ ಎಂದು ನಾನು ಹೇಳಿದ್ದೆ. ಆ ಮಾತು ಈಗ ಸಾಬೀತಾಗಿದ್ದು, ವಿಧಾನಸೌಧದ ಆವರಣದಲ್ಲೇ ಪಾಕಿಸ್ತಾನದ ಪರ ಘೋಷಣೆ ಕೂಗಲಾಗಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲೂ ಜನ ಮೈಮರೆತರೆ ವಿಧಾನಸೌಧವನ್ನು ಗುಂಬಾಜ್ ಆಗಿ ಪರಿವರ್ತಿಸಿ ಬಿಡುತ್ತಾರೆ ಎಂದು ಆರೋಪಿಸಿದರು.
ಎಫ್‍ಎಸ್‍ಎಲ್ ವರದಿ ನೀಡಲು ಎಷ್ಟು ಸಮಯ ಬೇಕು ಎಂದು ಪ್ರಶ್ನಿಸಿದ ಪ್ರತಾಪ್ ಸಿಂಹ, ಗೃಹಮಂತ್ರಿಗಳು ಮುಖ್ಯಮಂತ್ರಿಗಳನ್ನು ಓಲೈಸುವ ಪ್ರಯತ್ನ ಮಾಡುತ್ತಿದ್ದಾರೆ. ಸುಳ್ಳು ಅಭ್ಯಾಸ ಮಾಡಿಕೊಂಡಿದ್ದಾರೆ, ಪರಮೇಶ್ವರ್ ಅವರ ಬಗ್ಗೆ ನನಗೆ ಅಪಾರ ಗೌರವವಿದೆ. ಸಿದ್ದರಾಮಯ್ಯ ಅವರನ್ನು ಓಲೈಸಿ ಅವರಿಗೇನು ಸಿಗಲ್ಲ. ದಲಿತರ ಅಭಿವೃದ್ಧಿಗಾಗಿ ಮೀಸಲಿಟ್ಟ ಅನುದಾನವನ್ನೇ ಬೇರೆಡೆಗೆ ವರ್ಗಾಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಂಬಿಕೊಂಡು ಹೋದರೆ ಪರಮೇಶ್ವರ್ ಮಾತ್ರವಲ್ಲ ದಲಿತರು ಕೂಡ ಹಾಳಾಗಿ ಹೋಗುತ್ತಾರೆ. ಸಿದ್ದರಾಮಯ್ಯ ಅವರ ಹೃದಯದಲ್ಲಿ ದಲಿತರಿಗೆ ಯಾವ ಸ್ಥಾನವೂ ಇಲ್ಲ, ದಲಿತ ರಾಜಕಾರಣಿಗಳು ಸಿದ್ದರಾಮಯ್ಯ ಅವರ ರಾಜಕಾರಣಕ್ಕೆ ಬಲಿಯಾಗುತ್ತಿದ್ದಾರೆ. ಪರಿಶಿಷ್ಟರ 11 ಸಾವಿರ ಕೋಟಿ ಅನುದಾನದ ಬಗ್ಗೆ ಯಾರೂ ಧ್ವನಿ ಎತ್ತುತ್ತಿಲ್ಲ ಎಂದು ಟೀಕಿಸಿದರು.
ವಕ್ಫ್ ಆಸ್ತಿ ಮತ್ತು ಚರ್ಚ್ ಆಸ್ತಿಯಲ್ಲಿ ವಾಣಿಜ್ಯ ಉದ್ದೇಶದ ಕಟ್ಟಡಗಳಿವೆ, ಚರ್ಚ್‍ಗಳು ವಾಣಿಜ್ಯ ಆಸ್ಪತ್ರೆಗಳನ್ನು ನಿರ್ಮಿಸಿದ್ದಾರೆ, ಚರ್ಚ್ ಮತ್ತು ಮಸೀದಿಯ ವಾಣಿಜ್ಯ ಕಟ್ಟಡಗಳಿಗೆ ಯಾಕೆ ತೆರಿಗೆ ಹಾಕುತ್ತಿಲ್ಲ. ದೇವಾಲಯಗಳಿಗೆ ಮಾತ್ರ ಯಾರಿಗೆ ತೆರಿಗೆ ಎಂದು ಪ್ರಶ್ನಿಸಿದ ಪ್ರತಾಪ್ ಸಿಂಹ, ಅಲ್ಪಸಂಖ್ಯಾತರ ಓಲೈಕೆಗಾಗಿ ಹಿಂದೂಗಳನ್ನು ತುಳಿಯಲಾಗುತ್ತಿದೆ ಎಂದು ಆರೋಪಿಸಿದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*