Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *45 ನೇ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲೆಯ ಕ್ರೀಡಾಪಟುಗಳ ಸಾಧನೆ*
  • *ಗ್ರಾಮೀಣ ಪ್ರತಿಭೆಗಳಿಗೆ ಕೆಇಎ ನೀಡಲಿದೆ ‘ನೀಟ್’ ಬಲ: ಸರ್ಕಾರಿ ಕಾಲೇಜುಗಳಲ್ಲೇ ಉಚಿತ ತರಬೇತಿ; ಸಚಿವರಿಂದ ಮಹತ್ವದ ಘೋಷಣೆ!*
  • *ಅಧಿವೇಶನದಲ್ಲಿ ಡಿಸಿಎಂ ಜೊತೆ ಶಾಸಕ ಎ.ಎಸ್.ಪೊನ್ನಣ್ಣ ಸಮಾಲೋಚನೆ*
  • *ರಾಜ್ಯದಲ್ಲಿ ಬದಲಾದ ಹವಾಮಾನ: ಹಲವೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ; ಬೀದರ್‌ನಲ್ಲಿ ಸಿಡಿಲಿಗೆ ರೈತ ಬಲಿ!*
  • *ಆದಿವಾಸಿಗಳ ಹಕ್ಕಿಗಾಗಿ ಆಗ್ರಹಿಸಿ ಪ್ರತಿಭಟನೆ : ಲೈನ್ ಮನೆಗಳಿಂದ ಮುಕ್ತಗೊಳಿಸಲು ಒತ್ತಾಯ*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆಗಳು*
  • *ಪಾಕ್-ಅಫ್ಘಾನ್ ಯುದ್ಧ ಭೀಕರ: ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನ ವಾಯುದಾಳಿ; 400 ಮಂದಿ ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ!*
  • *ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*
  • *ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*
  • *ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗಾಳಿಬೀಡು ಗ್ರಾ.ಪಂ ನೂತನ ಕಟ್ಟಡ ಉದ್ಘಾಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗಾಳಿಬೀಡು ಗ್ರಾ.ಪಂ ನೂತನ ಕಟ್ಟಡ ಉದ್ಘಾಟನೆ*

ಮಾರ್ಚ್ 5, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.5 NEWS DESK : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಸೇರಿದಂತೆ ವಿವಿಧ ಯೋಜನೆಯಡಿ 47 ಲಕ್ಷ ರೂ.ವೆಚ್ಚದಲ್ಲಿ ಗಾಳಿಬೀಡು ಗ್ರಾಮ ಪಂಚಾಯಿತಿಯಲ್ಲಿ ನೂತನವಾಗಿ ನಿರ್ಮಿಸಿರುವ ಕಟ್ಟಡವನ್ನು ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಕೇಂದ್ರ ಸರ್ಕಾರದಿಂದ ಪ್ರತೀ ಗ್ರಾಮ ಪಂಚಾಯಿತಿಗೆ 38 ಲಕ್ಷ ರೂ.ನಷ್ಟು ನೇರವಾಗಿ ಅನುದಾನ ಬಿಡುಗಡೆಯಾಗುತ್ತಿದ್ದು, ಗ್ರಾ.ಪಂ.ಗಳು ಆರ್ಥಿಕವಾಗಿ ಸಬಲತೆ ಹೊಂದುವುದರ ಜೊತೆಗೆ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಹೇಳಿದರು.
ಕೇಂದ್ರದಿಂದ 14-15ನೇ ಹಣಕಾಸು ಆಯೋಗದಿಂದ ಪಂಚಾಯತ್ ಸೇವಾ ಕೇಂದ್ರದಡಿ ಗ್ರಾ.ಪಂ.ಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಕುಡಿಯುವ ನೀರು, ವಿದ್ಯುತ್ ಸಂಪರ್ಕ, ಗ್ರಾಮೀಣ ರಸ್ತೆ, ಚರಂಡಿ ಮತ್ತಿತರ ಮೂಲ ಸೌಲಭ್ಯಕ್ಕೆ ಒತ್ತು ನೀಡಲಾಗಿದೆ ಎಂದರು.
ಗಾಳಿಬೀಡು ಗ್ರಾ.ಪಂ.ಸೇರಿದಂತೆ ಕೊಡಗು ಜಿಲ್ಲೆಯ 60ಕ್ಕೂ ಹೆಚ್ಚು ಕಡೆಗಳಲ್ಲಿ ಮೊಬೈಲ್ ಟವರ್‍ಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಪ್ರತಾಪ್ ಸಿಂಹ ಮಾಹಿತಿ ನೀಡಿದರು.
ಗ್ರಾ.ಪಂ.ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಂದಿನ ದಿನಗಳಲ್ಲಿ ಸಂಸದರ ನಿಧಿಯಿಂದ ಹೆಚ್ಚಿನ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಪ್ರತಾಪ್ ಸಿಂಹ ಅವರು ನುಡಿದರು.
ಮೈಸೂರು-ಬೆಂಗಳೂರು ಹೆದ್ದಾರಿ ನಿರ್ಮಾಣ ಮಾಡಲಾಗಿದೆ. ಶ್ರಿರಂಗಪಟ್ಟಣ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಸಂಪಾಜೆ-ಮಾಣಿ ರಸ್ತೆ ಅಭಿವೃದ್ಧಿ ಹಾಗೂ ಕರಿಕೆ-ಭಾಗಮಂಡಲ ರಸ್ತೆ ಅಭಿವೃದ್ಧಿಗೆ ಕ್ರಮವಹಿಸಲಾಗುವುದು. ಅಮೃತ ಯೋಜನೆಯಡಿ 146 ಕೋಟಿ ರೂ. ಬಿಡುಗಡೆಯಾಗಿದ್ದು, ಟೆಂಡರ್ ಪ್ರಕ್ರಿಯೆ ಹಂತದಲ್ಲಿದೆ ಎಂದು ಪ್ರತಾಪ್ ಸಿಂಹ ಅವರು ತಿಳಿಸಿದರು.
ನಲ್ಲಿ ನೀರು ಸಂಪರ್ಕ, ಅಡುಗೆ ಅನಿಲ ಒದಗಿಸುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು, ಪೈಪ್ ಮೂಲಕ ಅಡುಗೆ ಅನಿಲ ಪೂರೈಸಲಾಗುವುದು ಎಂದರು. ಕೊಡಗು ಜಿಲ್ಲೆಗೆ ಹೆಚ್ಚಿನ ಗಮನಹರಿಸಲಾಗುವುದು, 15 ನೇ ಹಣಕಾಸು ಯೋಜನೆಯಡಿ ಕೊಡಗು ಜಿಲ್ಲೆಗೆ ಹೆಚ್ಚಿನ ಅನುದಾನ ಒದಗಿಸಲಾಗುವುದು ಎಂದರು.
ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಮಾತನಾಡಿ, ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಒಂದು ಸಾವಿರ ಮನೆ ನಿರ್ಮಾಣಕ್ಕೆ ವಸತಿ ಸಚಿವ ಜಮೀರ್ ಅಹ್ಮದ್ ಅವರು ಅನುಮೋದನೆ ನೀಡಿದ್ದು, ವಸತಿ ಇಲ್ಲದ, ನಿವೇಶನ ಇರುವವರ ಗ್ರಾ.ಪಂ. ಮೂಲಕ ಪಟ್ಟಿ ಒದಗಿಸುವಂತೆ ಗ್ರಾ.ಪಂಗಳಿಗೆ ತಿಳಿಸಿದರು.
ಮಡಿಕೇರಿ ನಗರಕ್ಕೆ ನೀರು ಪೂರೈಕೆಯಾಗುವ ಕೂಟುಹೊಳೆ, ಕುಂಡಾಮೇಸ್ತ್ರಿ ಕುಡಿಯುವ ನೀರು ಯೋಜನೆ ಸಂಬಂಧಿಸಿದಂತೆ ಪಂಚಾಯತ್ ರಾಜ್ ಇಲಾಖೆಯಿಂದ 300 ಕೋಟಿ ರೂ. ಬಿಡುಗಡೆಗೆ ಒಪ್ಪಿಗೆ ನೀಡಿದ್ದು, ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಗಮನಹರಿಸುವಂತೆ ಶಾಸಕರು ತಿಳಿಸಿದರು.
ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರು ಪೂರೈಸಬೇಕು. ಗ್ರಾಮ ಪಂಚಾಯಿತಿಗೆ ಸಾರ್ವಜನಿಕರು ಭೇಟಿ ನೀಡಿದ ಸಂದರ್ಭದಲ್ಲಿ ಸ್ಪಂದಿಸಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಗಮನಹರಿಸಬೇಕು. 47 ಲಕ್ಷ ರೂ. ವೆಚ್ಚದಲ್ಲಿ ಗ್ರಾ.ಪಂ.ಕಟ್ಟಡವನ್ನು ನಿರ್ಮಿಸಲಾಗಿದ್ದು, ಉತ್ತಮವಾಗಿದೆ ಎಂದು ತಿಳಿಸಿದರು.
ಗ್ರಾ.ಪಂ.ಸದಸ್ಯ ಸುಭಾಷ್ ಸೋಮಯ್ಯ ಗ್ರಾ.ಪಂ.ಅಭಿವೃದ್ಧಿ ಸಂಬಂಧಿಸಿದಂತೆ ಮಾತನಾಡಿ, ಡಿಜಿಟಲ್ ಗ್ರಂಥಾಲಯ, ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಕೊಠಡಿ, ಸಭಾ ಕೊಠಡಿ, ಸಭೆ ಸಮಾರಂಭ ನೆರವೇರಿಸಲು ಸಭಾಂಗಣ ಹೀಗೆ ಹಲವು ಸೌಲಭ್ಯಗಳನ್ನು ಒಳಗೊಂಡ ಸುಸಜ್ಜಿತ ಗ್ರಾ.ಪಂ.ಭವನ ನಿರ್ಮಾಣ ಆಗಿದೆ ಎಂದರು.
ಗ್ರಾ.ಪಂ. ಅಧ್ಯಕ್ಷರಾದ ಉಷಾ, ತಾ.ಪಂ.ಇಒ ಶೇಖರ್ ಅವರು ಮಾತನಾಡಿದರು. ಗ್ರಾ.ಪಂ. ಉಪಾಧ್ಯಕ್ಷರಾದ ಪೆಮ್ಮಯ್ಯ ಪಿಡಿಒ ಶಶಿಕಿರಣ, ಗ್ರಾಪಂ ಸದಸ್ಯರು ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*45 ನೇ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲೆಯ ಕ್ರೀಡಾಪಟುಗಳ ಸಾಧನೆ*

ಮಾರ್ಚ್ 17, 2026

*ಗ್ರಾಮೀಣ ಪ್ರತಿಭೆಗಳಿಗೆ ಕೆಇಎ ನೀಡಲಿದೆ ‘ನೀಟ್’ ಬಲ: ಸರ್ಕಾರಿ ಕಾಲೇಜುಗಳಲ್ಲೇ ಉಚಿತ ತರಬೇತಿ; ಸಚಿವರಿಂದ ಮಹತ್ವದ ಘೋಷಣೆ!*

ಮಾರ್ಚ್ 17, 2026

*ಅಧಿವೇಶನದಲ್ಲಿ ಡಿಸಿಎಂ ಜೊತೆ ಶಾಸಕ ಎ.ಎಸ್.ಪೊನ್ನಣ್ಣ ಸಮಾಲೋಚನೆ*

ಮಾರ್ಚ್ 17, 2026

*ಗ್ರಾಮೀಣ ಪ್ರತಿಭೆಗಳಿಗೆ ಕೆಇಎ ನೀಡಲಿದೆ ‘ನೀಟ್’ ಬಲ: ಸರ್ಕಾರಿ ಕಾಲೇಜುಗಳಲ್ಲೇ ಉಚಿತ ತರಬೇತಿ; ಸಚಿವರಿಂದ ಮಹತ್ವದ ಘೋಷಣೆ!*

ಮಾರ್ಚ್ 17, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 17, 2026: ನಗರ ಪ್ರದೇಶದ ಶ್ರೀಮಂತ ವಿದ್ಯಾರ್ಥಿಗಳಂತೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕೋಚಿಂಗ್ ಪಡೆಯಲು ಸಾಧ್ಯವಾಗದ…

*ಅಧಿವೇಶನದಲ್ಲಿ ಡಿಸಿಎಂ ಜೊತೆ ಶಾಸಕ ಎ.ಎಸ್.ಪೊನ್ನಣ್ಣ ಸಮಾಲೋಚನೆ*

ಮಾರ್ಚ್ 17, 2026

*ರಾಜ್ಯದಲ್ಲಿ ಬದಲಾದ ಹವಾಮಾನ: ಹಲವೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ; ಬೀದರ್‌ನಲ್ಲಿ ಸಿಡಿಲಿಗೆ ರೈತ ಬಲಿ!*

ಮಾರ್ಚ್ 17, 2026

*ಆದಿವಾಸಿಗಳ ಹಕ್ಕಿಗಾಗಿ ಆಗ್ರಹಿಸಿ ಪ್ರತಿಭಟನೆ : ಲೈನ್ ಮನೆಗಳಿಂದ ಮುಕ್ತಗೊಳಿಸಲು ಒತ್ತಾಯ*

ಮಾರ್ಚ್ 17, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆಗಳು*

ಮಾರ್ಚ್ 17, 2026

*ಪಾಕ್-ಅಫ್ಘಾನ್ ಯುದ್ಧ ಭೀಕರ: ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನ ವಾಯುದಾಳಿ; 400 ಮಂದಿ ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ!*

ಮಾರ್ಚ್ 17, 2026

*ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*

ಮಾರ್ಚ್ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.