ಮಡಿಕೇರಿ ಮಾ.5 NEWS DESK : ಕೊಡಗು ಜಿಲ್ಲಾ ಪಂಚಾಯತ್ ಎನ್‍ಆರ್‍ಎಲ್‍ಎಂ ಸಂಜೀವಿನಿ ಯೋಜನೆಯ ವತಿಯಿಂದ ನಗರದ ಬಾಲ ಭವನದ ಆವರಣದಲ್ಲಿ ಮಾ.7 ರವರೆಗೆ ಜಿಲ್ಲೆಯ ಸ್ವ ಸಹಾಯ ಸಂಘಗಳ ಸದಸ್ಯರು ತಯಾರಿಸಿರುವ ವಸ್ತುಗಳ ಮಾರಾಟ ಮತ್ತು ವಸ್ತು ಪ್ರದರ್ಶನ ಮೇಳವನ್ನು ಮಡಿಕೇರಿ ವಿಧಾನ ಸಭಾಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು.
ಮಹಿಳೆಯರ ಸ್ವಾವಲಂಬಿ ಆರ್ಥಿಕ ಜೀವನ ಮಟ್ಟಕ್ಕೆ ಪೂರಕವಾದ ಮಾರುಕಟ್ಟೆ ವ್ಯವಸ್ಥೆ ಇದಾಗಿರುತ್ತದೆ ಎಂದು ತಿಳಿಸಿದರು.
ಮಹಿಳೆಯರ ಉತ್ಪನ್ನಗಳನ್ನು ಸ್ವಯಿಚ್ಛೆಯಿಂದ ರೂ.5,000 ಕ್ಕೂ ಮೇಲ್ಪಟ್ಟು ಖರೀದಿಸಿದರು ಹಾಗೂ ಮಹಿಳೆಯರ ಒಡನಾಡಿಯಾಗಿ ಸ್ವಸಹಾಯ ಸಂಘಗಳ ಅಭಿವೃದ್ಧಿಗೆ ಪೂರಕವಾಗಿ ಸಹಕರಿಸುವುದಾಗಿ ತಿಳಿಸಿದರು.
ಶಾಸಕರು ಸ್ವಸಹಾಯ ಸಂಘದ ಮಹಿಳೆಯರು ಉತ್ಪಾದಿಸಿದ ಉತ್ಪನ್ನಗಳನ್ನು ಖರೀದಿಸಿ ಮಹಿಳೆಯರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸಿಹಿ ವಿತರಿಸಿ ಸಂಭ್ರಮಿಸಿದರು.
ಮಡಿಕೇರಿ ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಝೀವಲ್ ಖಾನ್, ಸಹಾಯಕ ಯೋಜನಾ ಅಧಿಕಾರಿಗಳು ಜೀವನ್ ಕುಮಾರ್, ಎನ್‍ಆರ್‍ಎಲ್‍ಎಂ ಸಂಜೀವಿನಿ ಯೋಜನೆಯ ಜಿಲ್ಲಾ ಮತ್ತು ತಾಲ್ಲೂಕು ಸಿಬ್ಬಂದಿಗಳು ಹಾಗೂ ಸ್ವ ಸಹಾಯ ಸಂಘಗಳ ಸದಸ್ಯರು ಭಾಗವಹಿಸಿದ್ದರು.