ಮಡಿಕೇರಿ ಮಾ.5 NEWS DESK : ಲೈನ್‌ಮನೆಗಳಲ್ಲಿ ವಾಸಿಸುತ್ತಿರುವ ಆದಿವಾಸಿ ಕುಟುಂಬಗಳಿಗೆ ನಿವೇಶನ ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಲ್ ಇಂಡಿಯಾ ದಲಿತ ರೈಟ್ಸ್ ಮೂವ್‌ಮೆಂಟ್ ವತಿಯಿಂದ ಪೊನ್ನಂಪೇಟೆಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಪೊನ್ನಂಪೇಟೆ ಬಸ್ ನಿಲ್ದಾಣದಿಂದ ತಾಲೂಕು ಪಂಚಾಯಿತಿ ಕಚೇರಿವರೆಗೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ನೂರಾರು ಮಂದಿ ಪಾಲ್ಗೊಂಡು ನಿವೇಶನಕ್ಕಾಗಿ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು. ಸುಡು ಬಿಸಿಲಿನಲ್ಲಿ ಪುಟ್ಟ ಮಕ್ಕಳನ್ನು ಎತ್ತಿಕೊಂಡ ಮಹಿಳೆಯರು ಮೆರವಣಿಗೆಯಲ್ಲಿ ಪಾಲ್ಗೊಂಡು ನಿವೇಶನ ನೀಡುವಂತೆ ಒತ್ತಾಯಿಸಿದರು. ಬಳಿಕ ತಾಲೂಕು ಪಂಚಾಯ್ತಿ ಕಚೇರಿ ಎದುರು ಸಮಾವೇಶಗೊಂಡ ಪ್ರತಿಭಟನಾಕಾರರು, ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಲೈನ್‌ಮನೆಗಳಲ್ಲಿ ವಾಸಿಸುತ್ತಿರುವ ಆದಿವಾಸಿ ಕುಟುಂಬಗಳಿಗೆ 2 ತಿಂಗಳ ಒಳಗೆ ನಿವೇಶನ ನೀಡಬೇಕು. ಉಳ್ಳವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವ ಭೂಮಿಯನ್ನು ಸರಕಾರ ವಶಕ್ಕೆ ತೆಗೆದುಕೊಳ್ಳಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಈ ಸಂದರ್ಭ ಆಲ್ ಇಂಡಿಯಾ ದಲಿತ ರೈಟ್ಸ್ ಮೂವ್‌ಮೆಂಟ್‌ನ ರಾಜ್ಯ ಸಂಚಾಲಕ ಹಾಗೂ ಕೊಡಗು ಜಿಲ್ಲಾಧ್ಯಕ್ಷ ರಮೇಶ್ ಮಾಯಮುಡಿ ಮಾತನಾಡಿ, ಜಿಲ್ಲೆಯ ಜನಸಂಖ್ಯೆ ಆಧಾರಿತವಾಗಿ ಶೇ.41ರಷ್ಟು ದಲಿತ ಸಮುದಾಯವಿದ್ದು, ಇದರಲ್ಲಿ ಶೇ.21 ರಷ್ಟು ಆದಿವಾಸಿಗಳಿದ್ದಾರೆ. ಸುಮಾರು 4,500 ಕುಟುಂಬಗಳು ನಿವೇಶನ ರಹಿತವಾಗಿದ್ದು, ಲೈನ್‌ಮನೆಗಳಲ್ಲಿ ವಾಸಿಸುತ್ತಿದ್ದಾರೆ. ಲೈನ್‌ಮನೆಗಳಲ್ಲಿ ವಾಸಿಸುತ್ತಿರುವ ಆದಿವಾಸಿ ಕುಟುಂಬಗಳಿಗೆ ನಿವೇಶನ ನೀಡುವಂತೆ ಕಳೆದ 18 ವರ್ಷಗಳಿಂದ ಸಂಘಟನೆ ವತಿಯಿಂದ ಹೋರಾಟ ನಡೆಸುತ್ತಾ ಬಂದಿದ್ದರೂ ಸಂಬಂಧಿಸಿದವರು ನಿರ್ಲಕ್ಷ್ಯ ಧೋರಣೆ ತಳೆದಿದ್ದಾರೆ ಎಂದು ಅರೋಪಿಸಿದರು.
ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೋಣಿಯಂಡ ಅಪ್ಪಣ್ಣ ಅವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು. ಸಂಘಟನೆಯ ಪ್ರಮುಖರಾದ ಜೆ.ಜಿ.ತಿಮ್ಮ, ಜೆ.ಎಂ.ಅಶ್ವಥ್, ಪಿ.ರಾಣಿ, ಪಿ.ಎ.ಗೌರಿ, ಪಿ.ಸೀತೆ, ಪಿ.ಮಲ್ಲಿಗೆ, ಜೆ.ಶಾಂತಿ, ಸೇರಿದಂತೆ ಮತ್ತಿತ್ತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*