ಮಡಿಕೇರಿ ಮಾ.5 NEWS DESK : ಮಂಗಳೂರು ವಿಶ್ವವಿದ್ಯಾನಿಲಯದ ಹಣಕಾಸು ಅಶಿಸ್ತಿನ ವಿರುದ್ಧ ರಾಜ್ಯಪಾಲರಿಗೆ ದೂರು ನೀಡುವುದಾಗಿ ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.
ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನ ಅತಿಥಿ ಉಪನ್ಯಾಸಕರು 5 ತಿಂಗಳ ವೇತನ ಪಾವತಿಗಾಗಿ ಒತ್ತಾಯಿಸಿ ನಡೆಸುತ್ತಿರುವ ಧರಣಿ ಸತ್ಯಾಗ್ರಹದ ಸ್ಥಳಕ್ಕೆ ಭೇಟಿ ನೀಡಿದ ಅವರು ಬೇಡಿಕೆಗಳನ್ನು ಆಲಿಸಿದರು. ಪ್ರತಿಭಟನಾಕಾರರ ಮನವಿ ಸ್ವೀಕರಿಸಿ ಮಾತನಾಡಿದ ಸಂಸದರು ಮಂಗಳೂರು ವಿ.ವಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ತನಿಖೆ ನಡೆಸುವಂತೆ ರಾಜ್ಯಪಾಲರಿಗೆ ದೂರು ಸಲ್ಲಿಸಲಾಗುವುದು ಮತ್ತು ಅತಿಥಿ ಉಪನ್ಯಾಸಕರ ಬೇಡಿಕೆಗಳಿಗೆ ನ್ಯಾಯ ದೊರಕಿಸಿ ಕೊಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭ ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಡಾ.ರಾಘವ, ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಬಿಜೆಪಿ ಪ್ರಮುಖರಾದ ಬಿ.ಕೆ.ಅರುಣ್ ಕುಮಾರ್, ಬಿ.ಕೆ. ಜಗದೀಶ್, ಮಹೇಶ್ ಜೈನಿ, ಕವನ್ ಹಾಗೂ ಅತಿಥಿ ಉಪನ್ಯಾಸಕರು ಹಾಜರಿದ್ದರು.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*