ನಾಪೋಕ್ಲು ಮಾ.6 NEWS DESK : ಪೇರೂರು ಗ್ರಾಮದ ಶ್ರೀ ಈಶ್ವರ ಇಗ್ಗುತ್ತಪ್ಪ ದೇವಾಲಯದಲ್ಲಿ ಮಾ.8ರಂದು ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ ನಡೆಯಲಿದೆ.
ಅಂದು ಮುಂಜಾನೆಯಿಂದಲೇ ದೇವಾಲಯದಲ್ಲಿ ತುಲಾಭಾರ, ಮಹಾಪೂಜೆ, ಅನ್ನದಾನ , ದೇವರ ನೃತ್ಯ ಬಲಿ ಪೂಜೆ ನಡೆಯಲಿದೆ.
¨ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಾಲಯದ ಆಡಳಿತ ಮಂಡಳಿ ಸದಸ್ಯರು ಹಾಗೂ ತಕ್ಕ ಮುಖ್ಯಸ್ಥರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ : ದುಗ್ಗಳ ಸದಾನಂದ.








