ಮಡಿಕೇರಿ ಮಾ.6 NEWS DESK : ತಾಲ್ಲೂಕಿನ ಹೊದ್ದೂರು ಗ್ರಾಮದ ಶ್ರೀ ಭಗವತಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಶ್ರೀ ಭಗವತಿ ದೇವಸ್ಥಾನ ಪುನರ್ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಳಶೋತ್ಸವವು ಮಾ.7 ರಿಂದ 14 ರವರೆಗೆ ನಡೆಯಲಿದೆ.
ಮರಕಡ ಶ್ರೀ ಗುರ ಪರಾಶಕ್ತಿ ಮಠ ಪರಮ ಪೂಜ್ಯ ಶ್ರೀನರೇಂದ್ರನಾಥ ಯೋಗೇಶ್ವರೇಶ್ವರ ಮಹಾಸ್ವಾಮಿ ಅವರ ಪೂರ್ಣಾನುಗ್ರಹದೊಂದಿಗೆ ಶ್ರೀ ನಿತಿನ್ ನರೇಂದ್ರನಾಥ ಯೋಗೇಶ್ವರೇಶ್ವರ ಸ್ವಾಮಿ ಮತ್ತು ಮಾತೆ ಶಕುಂತಲಾ ಅಮ್ಮ ಅವರ ದಿವ್ಯ ನೇತೃತ್ವದಲ್ಲಿ ನೂತನವಾಗಿ ಜೀರ್ಣೋದ್ಧಾರಗೊಂಡಿರುವ ಶ್ರೀಭಗವತಿ ಕ್ಷೇತ್ರ ಹೊದ್ದೂರು ಇದರ ಪ್ರತಿಷ್ಠಾಪನೆ ಬ್ರಹ್ಮಕಳಶ ಮತ್ತು ವೈದಿಕ ಕಾರ್ಯಕ್ರಮಗಳು ಬ್ರಹ್ಮಶ್ರೀ ಕೆ.ಯು.ಪದ್ಮನಾಭ ತಂತ್ರಿಗಳು ಅರವತ್ತ್ ಮತ್ತು ದೇವಸ್ಥಾನದ ತಕ್ಕಮುಖ್ಯಸ್ತರ ಉಪಸ್ಥಿತಿಯಲ್ಲಿ ನಡೆಯಲಿದೆ ಎಂದು ದೇವಾಲಯದ ಹಾಗೂ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಚೌರೀರ.ಕೆ.ಮೇದಪ್ಪ ಹೇಳಿದರು.
ದೇವಾಲಯದ ಸಭಾಂಗಣದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಗ್ರಾಮದ ಶ್ರೀ ಭಗವತಿ ದೇವಾಲಯವು ಶಿಥಿಲಾವಸ್ಥೆಯಲ್ಲಿದುದರಿಂದ ಗ್ರಾಮಸ್ಥರು ಪುನರ್ ನಿರ್ಮಾಣಕ್ಕೆ ಮುಂದಾಗಿ ಇದೀಗ ಸುಂದರವಾದ ಶಿಲಾಮಯ ದೇವಾಲಯ ನಿರ್ಮಾಣಗೊಂಡಿದೆ. ಮಾ.13ರಂದು ಬೆಳಗ್ಗೆ ಎಂಟರಿಂದ ಹತ್ತು ಗಂಟೆ ಒಳಗೆ ಮೇಷಲಗ್ನ, ಶುಕ್ಲ ಪಕ್ಷ, ಚತುರ್ಥ ತಿಥಿ ಸುಮುಹೂರ್ತದಲ್ಲಿ ಪೀಠ ಪ್ರತಿಷ್ಠೆ, ಬಿಂಬ ಪ್ರತಿಷ್ಠೆ ,ನಾಗ ಪ್ರತಿಷ್ಠೆ, ಬ್ರಹ್ಮ ಕಳಶ ಪೂಜೆ ಮತ್ತಿತರ ವೈದಿಕ ಕಾರ್ಯಕ್ರಮಗಳು ಜರುಗಲಿವೆ ಎಂದ ಅವರು ಹೇಳಿದರು.
ದೇವಾಲಯದ ತಕ್ಕ ಮುಖ್ಯಸ್ಥರೂ,ಕಾರ್ಯದರ್ಶಿಯೂ ಆಗಿರುವ ನೆರವಂಡ ಸಂಜಯ್ ಪೂಣಚ್ಚ ಮಾತನಾಡಿ ಗ್ರಾಮದ ಪುರಾತನ ದೇವಾಲಯವಿದು. 2013 ರಲ್ಲಿ ಜೀರ್ಣೋಧ್ಧಾರ ಮಾಡುವಂತೆ ತೀರ್ಮಾನಿಸಲಾಯಿತು. 2018ರಲ್ಲಿ ಸ್ವರ್ಣ ಪ್ರಶ್ನೆ ಇಡಲಾಯಿತು 1.50 ಕೋಟಿ ರೂ.ವೆಚ್ಚದಲ್ಲಿ ಸುಂದರ ದೇವಾಲಯ ನಿರ್ಮಾಣಗೊಂಡಿದೆ ಇನ್ನೂ ಸುಮಾರು 30 ಲಕ್ಷ ರೂ.ಅಗತ್ಯವಿದೆ ಎಂದರು.
ಜೀರ್ಣೋದ್ಧಾರ ಸಮಿತಿ ಸದಸ್ಯ ಚೌರೀರ ಉದಯ ಮಾತನಾಡಿ, ಈ ಹಿಂದೆ ದೇವಾಲಯದ ಜೀರ್ಣೋದ್ಧಾರ ನಡೆದಿದ್ದರೂ ಶಾಸ್ತ್ರೋಕ್ತವಾಗಿ ಆಗಿರಲಿಲ್ಲ. ಮರಕಡ ಶ್ರೀ ಗುರ ಪರಾಶಕ್ತಿ ಮಠದ ಪರಮಪೂಜ್ಯ ನರೇಂದ್ರನಾಥ ಯೋಗೇಶ್ವರ ಮಹಾಸ್ವಾಮಿಯವರ ಪೂರ್ಣ ಅನುಗ್ರಹದೊಂದಿಗೆ ನಿತಿನ್ ನರೇಂದ್ರನಾಥ ಯೋಗೇಶ್ವರ ಸ್ವಾಮಿ ಮತ್ತು ಮಾತೆ ಶಕುಂತಲಾ ಅಮ್ಮನವರ ದಿವ್ಯ ಮಾರ್ಗದರ್ಶನದಲ್ಲಿ, ದೇವಿಯ ಅನುಗ್ರ, ದಾನಿಗಳ ನೆರವಿನಿಂದ ದೇವಾಲಯ ನಿರ್ಮಾಣಗೊಂಡಿದೆ. ಕೊರೋನ ಹಿನ್ನೆಲೆಯಲ್ಲಿ ನಿರ್ಮಾಣ ಕಾರ್ಯ ತಡವಾಗಿದೆ ಎಂದರು.
ಮಾ.7 ರಂದು ಕುತ್ತಿ ಪೂಜೆಯೊಂದಿಗೆ ಆರಂಭಗೊಳ್ಳಲಿರುವ ಕಳಶೋತ್ಸವ ಮಾ.8 ರಂದು ತಂತ್ರಿಯವರು ಆಗಮಿಸಿ, ವಾಸ್ತು ಕಳಶ ಪೂಜೆ, ವಾಸ್ತು ಬಲಿ ನೆರವೇರಿಸಲಿದ್ದಾರೆ. ಮಾ.9ರಂದು ಸಂಜೆ 5 ಗಂಟೆಯಿಂದ ಅಂಕುರ ಆರೋಹಣ, ವಿಗ್ರಹ ಪರಿಗ್ರಹ ದೀಪಾ ಆರಾಧನೆ ನಡೆಯಲಿದೆ.
ಮಾ.10 ರಂದು ಸಂಜೆ 6 ಗಂಟೆಯಿಂದ ದೀಪಾರಾಧನೆ, ಅಂಕುರ ಪೂಜೆ, ತ್ರಿಕಾಲ ಪೂಜೆ ನಡೆಯಲಿದೆ. ಮಾರ್ಚ್ 11 ರಂದು ಬೆಳಿಗ್ಗೆ ಗಣಪತಿ ಹೋಮ, ಸಂಜೆ ಅನುಜ್ಞಾ ಬಲಿ ಹಾಗೂ ಅನುಜ್ಞಾ ಪ್ರಾರ್ಥನೆ ಗ್ರಾಮಸ್ಥರಿಂದ ನೆರವೇರಲಿದೆ. ಮಾ.12ರಂದು ಸಂಜೆ 4 ಗಂಟೆಗೆ ಜಲೋದ್ಧಾರ ಬಿಂಬಶುದ್ಧಿ ಸೇರಿದಂತೆ ವಿವಿಧ ವೈದಿಕ ಕಾರ್ಯಕ್ರಮಗಳು ಜರುಗಲಿವೆ. ಮಾ.13ರಂದು ಬೆಳಗ್ಗೆ 8 ರಿಂದ 10 ಗಂಟೆ ಒಳಗೆ ಮೇಷಲಗ್ನ, ಶುಕ್ಲ ಪಕ್ಷ, ಚತುರ್ಥ ತಿಥಿ ಸುಮುಹೂರ್ತದಲ್ಲಿ ಪೀಠ ಪ್ರತಿಷ್ಠೆ, ಬಿಂಬ ಪ್ರತಿಷ್ಠೆ ,ನಾಗ ಪ್ರತಿಷ್ಠೆ, ಬ್ರಹ್ಮ ಕಳಶ ಪೂಜೆ ಮತ್ತಿತರ ವೈದಿಕ ಕಾರ್ಯಕ್ರಮಗಳು ಜರುಗಲಿವೆ.
ಮಾ.14ರಂದು ಸಂಜೆ ಮೂರು ಗಂಟೆಗೆ ದೇವರ ನೃತ್ಯಬಲಿ ಜರುಗಲಿದೆ. ನೂತನವಾಗಿ ಜೀರ್ಣೋದ್ಧಾರ ಗೊಂಡಿರುವ ಭಗವತಿ ಕ್ಷೇತ್ರದಲ್ಲಿ ಪ್ರತಿಷ್ಠಾಪನೆ, ಬ್ರಹ್ಮ ಕಳಶ ಮತ್ತು ವೈದಿಕ ಕಾರ್ಯಕ್ರಮಗಳು ಬ್ರಹ್ಮಶ್ರೀ ಕೆ.ಯು ಪದ್ಮನಾಭ ತಂತ್ರಿಗಳ ಹಾಗೂ ದೇವಸ್ಥಾನದ ತಕ್ಕ ಮುಖ್ಯಸ್ಥರ ಉಪಸ್ಥಿತಿಯಲ್ಲಿ ಜರುಗಲಿವೆ. ಪ್ರತಿ ದಿನ ವೈದಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಭಕ್ತರಿಗೆ ದೇವಾಲಯದ ಜೀರ್ಣೋದ್ಧಾರ ಸಮಿತಿ ವತಿಯಿಂದ ಅನ್ನ ಸಂತರ್ಪಣೆ ನಡೆಯಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸಮಿತಿ ಸದಸ್ಯರಾದ ನೆರವಂಡ ಚರ್ಮಣ, ಮಂಡೆಪಂಡ ರಮೇಶ್, ಮುಂಡೋಟಿರ ಸೋಮಯ್ಯ, ವಾಂಚೀರ ಅಜಯ್ , ಎ.ಪಿ.ಪೂಣಚ್ಚ ಉಪಸ್ಥಿತರಿದ್ದರು.
ವರದಿ : ದುಗ್ಗಳ ಸದಾನಂದ.








