ಮಡಿಕೇರಿ ಮಾ.6 NEWS DESK : ಮಡಿಕೇರಿ ನಗರದ ದಾಸವಾಳ ಬಡಾವಣೆಯಲ್ಲಿರುವ ಶ್ರೀವೀರಭದ್ರ ಮುನೇಶ್ವರ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ಮಹಾಶಿವರಾತ್ರಿ ಮಹೋತ್ಸವವು ಮಾ.8 ರಂದು ನಡೆಯಲಿದೆ.
ಅಂದು ಬೆಳಿಗ್ಗೆ 7 ಗಂಟೆಗೆ ಮಹಾಗಣಪತಿ ಹೋಮ ನಡೆಯಲಿದ್ದು, 9 ಗಂಟೆಗೆ ವೀರಭದ್ರ ಉತ್ಸವ ಮೂರ್ತಿಯ ಮೆರವಣಿಗೆ ನಗರದ ಗಣಪತಿ ಬೀದಿಯಿಂದ ಬನ್ನಿಮಂಟಪ, ಮಹದೇವಪೇಟೆ, ಖಾಸಗಿ ಬಸ್ ನಿಲ್ದಾಣ ವೃತ್ತದಿಂದ ಜೂನಿಯರ್ ಕಾಲೇಜು ರಸ್ತೆ ಮಾರ್ಗವಾಗಿ ದೇವಾಲಯಕ್ಕೆ ಸಾಗಲಿದೆ.
ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ ನಡೆಯಲಿದ್ದು, ಮಧ್ಯಾಹ್ನ 1 ಗಂಟೆಗೆ ಭಕ್ತಾಧಿಗಳಿಗೆ ಅನ್ನಸಂತರ್ಪಣೆಯಾಗಲಿದೆ. ಸಂಜೆ 6 ರಿಂದ ಮರುದಿನ ಬೆಳಿಗ್ಗೆ 5 ಗಂಟೆಯವರೆಗೆ ಜಾಮಪೂಜೆ ಜರುಗಲಿದೆ.
ಸಂಜೆ 7 ಗಂಟೆಗೆ ಮಹಾ ಮೃತ್ಯುಂಜಯ ಹೋಮ ಹಾಗೂ ದೀಪಾರಾಧನೆ ನಡೆಯಲಿದ್ದು, ಜಾಗರಣೆ ಪ್ರಯುಕ್ತ ರಾತ್ರಿ 10 ಗಂಟೆಯಿಂದ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಸದಸ್ಯರು ಮನವಿ ಮಾಡಿದ್ದಾರೆ.










