ವಿರಾಜಪೇಟೆ ಮಾ.6 NEWS DESK : ಮೈಸೂರು ವಿಶ್ವವಿದ್ಯಾಲಯದ ಎಂ.ಪಿ.ಎಡ್ ವಿಭಾಗದಲ್ಲಿ ಚಿನ್ನದ ಪದಕವನ್ನು ಪಡೆದು ಸಾಧನೆ ಮಾಡಿದ ವಿರಾಜಪೇಟೆ ಸಂತ ಅನ್ನಮ್ಮ ಪ್ರೌಢ ಶಾಲೆಯ ದೈಹಿಕ ಶಿಕ್ಷಕ ವಿ.ಆರ್.ಶಬರೀಶ್ ಅವರನ್ನು ಸಂತ ಅನ್ನಮ್ಮ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು.
ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಫಾ. ಐಸಾಕ್ ರತ್ನಾಕರ್ ಅವರು ವಿ.ಆರ್.ಶಬರೀಶ್ ಅವರನ್ನು ಸನ್ಮಾನಿಸಿ, ಗೌರವಿಸಿದರು.
ಬಳಿಕ ಮಾತನಾಡಿದ ಅವರು ನಮ್ಮ ವಿದ್ಯಾಸಂಸ್ಥೆಯ ಪ್ರೌಢ ಶಾಲಾ ದೈಹಿಕ ಶಿಕ್ಷಕ ಶಬರೀಶ್ ಶೈಕ್ಷಣಿಕವಾಗಿ ಈ ಸಾಧನೆ ಮಾಡಿರುವುದು ಹೆಮ್ಮೆಯ ವಿಚಾರವಾಗಿದ್ದು, ಅವರ ಕ್ರಿಯಾಶೀಲತೆ, ಶಿಸ್ತು, ಮತ್ತು ಕಾರ್ಯ ವೈಖರಿ ವಿದ್ಯಾರ್ಥಿಗಳಿಗೆ ಮಾದರಿಯಾಗಿದೆ. ಈ ಹಿಂದೆಯೂ ಅವರು ಪದವಿ ಹಂತದಲ್ಲಿ ಚಿನ್ನದ ಪದಕವನ್ನು ಪಡೆದಿದ್ದು, ವಿದ್ಯಾಸಂಸ್ಥೆಗೆ ಹೆಮ್ಮೆಯಾಗಿದೆ ಎಂದರು.
ಈ ಸಂದರ್ಭದಲ್ಲಿ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಬೆನ್ನಿ ಜೋಸೆಫ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಸಿಸ್ಟರ್ ರೋಸಿ, ಸಿಸ್ಟರ್ ಐಡಾ ಉಪಸ್ಥಿತರಿದ್ದರು.









