ಸಿದ್ದಾಪುರ ಮಾ.6 NEWS DESK : ನಲ್ವತ್ತೇಕರೆ ಶ್ರೀ ವಿನಾಯಕ ಸೇವಾ ಸಮಿತಿ ಹಾಗೂ ಶ್ರೀ ವಿನಾಯಕ ಮಿತ್ರ ಮಂಡಳಿ ವತಿಯಿಂದ ಸುಳ್ಯ ಕೆವಿಜಿ ವೈದ್ಯಕೀಯ ಮಹಾ ವಿದ್ಯಾಲಯ ಮತ್ತು ಆಸ್ಪತ್ರೆಯ ಸಹಯೋಗದೊಂದಿಗೆ ಮಾ.10ರಂದು ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣೆ, ಮಾಹಿತಿ ಕಾರ್ಯಾಗಾರ, ಉಚಿತ ಔಷಧಿ ವಿತರಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ ಎಂದು ಶ್ರೀ ವಿನಾಯಕ ಸೇವಾ ಸಮಿತಿ ಕಾರ್ಯದರ್ಶಿ ಎಚ್.ಬಿ. ಅಕ್ಷಯ್ ತಿಳಿಸಿದ್ದಾರೆ.
ಸುದ್ದಿಗೋಷ್ಠಯಲ್ಲಿ ಮಾತನಾಡಿದ ಅವರು, ನೆಲ್ಯಹುದಿಕೇರಿ ಶಾದಿ ಮಹಲ್ ಸಭಾಂಗಣದಲ್ಲಿ ಶಿಬಿರ ಆಯೋಜಿಸಿದ್ದು, ಶಿಬಿರದಲ್ಲಿ ಶಸ್ತ್ರ ಚಿಕಿತ್ಸಾ ವಿಭಾಗ, ಮಕ್ಕಳ ರೋಗ, ಇಎನ್ ಟಿ, ನೇತ್ರ ಚಿಕಿತ್ಸೆ, ಚರ್ಮ ಮತ್ತು ಲೈಂಗಿಕ ರೋಗ, ಎಲುಬು ಮತ್ತು ಕೀಲು ರೋಗ, ದಂತ ಚಿಕಿತ್ಸೆ, ಶ್ವಾಸಕೋಶ ಹಾಗೂ ತುರ್ತು ಚಿಕಿತ್ಸೆ ವಿಭಾಗ ಸೇರಿದಂತೆ ನುರಿತ 15 ವೈಧ್ಯರುಗಳು ಆರೋಗ್ಯ ತಪಾಸಣೆ ಮಾಡಿ, ಔಷಧಿಗಳನ್ನು ಉಚಿತವಾಗಿ ನೀಡಲಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಯಲ್ಲಿ ಶ್ರೀ ವಿನಾಯಕ ಸೇವಾ ಸಮಿತಿ ಅಧ್ಯಕ್ಷ ಟಿ.ಆರ್.ಮಣಿ, ಸದಸ್ಯರಾದ ಟಿ.ಕೆ.ಮನೋಜ್, ಕೆ.ವಿ.ಪ್ರಭಾಕರ್ ಮತ್ತು ಎ.ಬಿ.ಸತೀಶ್ ಇದ್ದರು.