ಮಡಿಕೇರಿ ಮಾ.6 NEWS DESK : ಕೊಡವ ಮಹಿಳೆಯರ ಸಾಂವಿಧಾನಿಕ ಸಬಲೀಕರಣಕ್ಕಾಗಿ ಒತ್ತಾಯಿಸಿ ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆಯ ದಿನವಾದ ಮಾ.8 ರಂದು ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಧರಣಿ ಸತ್ಯಾಗ್ರಹ ನಡೆಸಲು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ನಿರ್ಧರಿಸಿದೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು, “ಮಹಿಳೆಯರ ಸಬಲೀಕರಣಕ್ಕಾಗಿ ಸಂಪೂರ್ಣ ವೆಚ್ಚ ಭರಿಸಬೇಕು ಮತ್ತು ಅದರ ಪ್ರಗತಿಯನ್ನು ವೇಗಗೊಳಿಸಬೇಕು” ಎಂಬುವುದು 2024 ರ ಮಹಿಳಾ ದಿನಾಚರಣೆಯ ವಿಶ್ವಸಂಸ್ಥೆಯ ಘೋಷವಾಕ್ಯವಾಗಿದ್ದು, ಕೊಡವ ಮಹಿಳೆಯರ ಸಬಲೀಕರಣಕ್ಕಾಗಿ ಸಿಎನ್‍ಸಿ ಹಕ್ಕು ಮಂಡಿಸಲಿದೆ ಎಂದು ತಿಳಿಸಿದ್ದಾರೆ.
ಆದಿಮಸಂಜಾತ ಅತ್ಯಂತ ಸೂಕ್ಷ್ಮ ಬುಡಕಟ್ಟು ಕೊಡವ ಜನಾಂಗದಲ್ಲಿರುವ ಮಹಿಳೆಯರ ಹಕ್ಕುಗಳನ್ನು ಪ್ರತಿಪಾದಿಸುವ ಮೂಲಕ ಆಡಳಿತ ವ್ಯವಸ್ಥೆಯ ಗಮನ ಸೆಳೆಯಲು ಮಹಿಳಾ ದಿನಾಚರಣೆಯಂದು ಶಾಂತಿಯುತ ಧರಣಿ ನಡೆಸಲಾಗುವುದು. ಕೊಡವ ಭೂಮಿಯಲ್ಲಿ ಕೊಡವ ಮಹಿಳೆಯರ ಐತಿಹಾಸಿಕ ನಿರಂತರತೆ, ನೆಲ, ಭಾಷೆ, ಸಾಂಸ್ಕೃತಿಕ ಪರಂಪರೆ, ಆರ್ಥಿಕ ಮತ್ತು ರಾಜಕೀಯ ಸ್ವಾತಂತ್ರ್ಯಕ್ಕಾಗಿ “ಕೊಡವ ಲ್ಯಾಂಡ್” ಭೂ-ರಾಜಕೀಯ ಸ್ವಾಯತ್ತತೆ ನೀಡಬೇಕು. ಕೊಡವ ಬುಡಕಟ್ಟು ಜನಾಂಗಕ್ಕೆ ಸಂವಿಧಾನದ ಅನುಚ್ಛೇದ 244 ಆರ್/ಡಬ್ಲ್ಯೂ 6ನೇ ಮತ್ತು 8ನೇ ಶೆಡ್ಯೂಲ್ ಅಡಿಯಲ್ಲಿ ಕೊಡವ ಲ್ಯಾಂಡ್ ನ್ನು ಕಲ್ಪಿಸಬೇಕು. ಆ ಮೂಲಕ ಕೊಡವ ಮಹಿಳೆಯರ ಸಬಲೀಕರಣಕ್ಕೆ ಅವಕಾಶ ನೀಡಬೇಕೆಂದು ಧರಣಿ ಸಂದರ್ಭ ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸುವುದಾಗಿ ನಾಚಪ್ಪ ಹೇಳಿದ್ದಾರೆ.
Breaking News
- *ಚೆನ್ನಯ್ಯನಕೋಟೆ ಶಾಲೆಯಲ್ಲಿ ವಾರ್ಷಿಕೋತ್ಸವ ಸಂಭ್ರಮ : ಗಮನಸೆಳೆದ ವಿದ್ಯಾರ್ಥಿಗಳ ನೃತ್ಯೋತ್ಸವ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*
- *ಕೂಡಿಗೆ ಡಯಟ್ ಗೆ ಹಿರಿಯ ಉಪನ್ಯಾಸಕಿಯಾಗಿ ಮುಂಬಡ್ತಿ ಹೊಂದಿದ ಬಿ.ಎನ್.ಪುಷ್ಪ*
- *ಇತಿಹಾಸ ಪ್ರಸಿದ್ಧ ಪಾಲಿಬೆಟ್ಟ ಉರೂಸ್ ಗೆ ಚಾಲನೆ*
- *ಮೇಕೇರಿ ಪ್ರೀಮಿಯರ್ ಲೀಗ್ ಸೀಸನ್-5 : ಕ್ರೀಡೆಯಿಂದ ದೈಹಿಕ, ಮಾನಸಿಕ ಸಧೃಡತೆ ಸಾಧ್ಯ : ಶಾಸಕ ಎ.ಎಸ್.ಪೊನ್ನಣ್ಣ*
- *ಭಾಗಮಂಡಲ : ಎಲ್ಲಾ ಜಾತಿ, ಧರ್ಮ, ಭಾಷೆಗಳಿರುವ ನಾಡಿನಲ್ಲಿ ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು. ಯಾವುದೇ ಕಾರಣಕ್ಕೂ ಧ್ವೇಷ ಮಾಡಬಾರದು : ಸಿಎಂ*
- *ರೂ.1.50 ಕೋಟಿ ಅನುದಾನ ಬಿಡುಗಡೆಗೆ ಸಿಎಂ ಗೆ ಮನವಿ ಸಲ್ಲಿಸಿದ ಮುದ್ದಂಡ ಹಾಕಿ ಉತ್ಸವ ಸಮಿತಿ*
- *ಅರ್ಚಕರ ಮೇಲೆ ಹಲ್ಲೆ : ಹೋರಾಟದ ಎಚ್ಚರಿಕೆ ನೀಡಿದ ವಿಶ್ವ ಹಿಂದು ಪರಿಷತ್ ಮಠ-ಮಂದಿರ್ ಘಟಕ*
- *ಫೆ.7 ರ ಪಾದಯಾತ್ರೆಗೆ ಸಿಎನ್‍ಸಿ ಬೆಂಬಲ*
- *ಕೊಡಗು : ಕಾರ್ಮಿಕರ ಸಾಮಾಜಿಕ ಭದ್ರತಾ ಕುರಿತು ಜನಜಾಗೃತಿ : ಆಟೋ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ*
- *ಜಿಲ್ಲೆಯ ಸಮಗ್ರ ಮಾಹಿತಿ ಹೊಂದಿರುವ ಅಧಿಕೃತ ವೆಬ್ಸೈಟ್ ಬಿಡುಗಡೆ*