ಮಡಿಕೇರಿ ಮಾ.6 NEWS DESK : ಭಯೋತ್ಪಾದಕ ಕೃತ್ಯಗಳು ಖಂಡಿಸಿ ಭಯೋತ್ಪಾದನಾ ವಿರೋಧಿ ಹೋರಾಟ ಸಮಿತಿಯ ಕೊಡಗು ಜಿಲ್ಲಾ ಘಟಕ ನಗರದಲ್ಲಿ ಪ್ರತಿಭಟನೆ ನಡೆಸಿತು.
ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಸಮಿತಿಯ ಪ್ರಮುಖರು ಹಾಗೂ ಕಾರ್ಯಕರ್ತರು ಮಾನವ ಸರಪಳಿ ರಚಿಸಿ, ಭಯೋತ್ಪಾದಕ ಕೃತ್ಯಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ರಾಜ್ಯದಲ್ಲಿ ಮತ್ತೆ ಭಯೋತ್ಪಾದನಾ ಚಟುವಟಿಕೆ ಚಿಗುರೊಡೆಯುತ್ತಿದೆ ಎಂದು ಆರೋಪಿಸಿದ ಪ್ರಮುಖರು ರಾಜ್ಯದ ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆಯನ್ನು ಕೂಗಿರುವ ರಾಷ್ಟ್ರದ್ರೋಹಿಗಳನ್ನು ಬಂಧಿಸಬೇಕು, “ರಾಮೇಶ್ವರಂ ಕೆಫೆ” ಯಲ್ಲಿ ನಡೆದ ಬಾಂಬ್ ಸ್ಫೋಟದ ಆರೋಪಿಯನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.
ಮಾಜಿ ಶಾಸಕರಾದ ಕೆ.ಜಿ.ಬೋಪಯ್ಯ, ಅಪ್ಪಚ್ಚು ರಂಜನ್, ಹಿಂದೂ ಸಂಘಟನೆಗಳ ಪ್ರಮುಖರು ಹಾಗೂ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.









