ಮಡಿಕೇರಿ ಮಾ.6 NEWS DESK: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ ಭಾರತೀಯ ಜನತಾ ಪಾರ್ಟಿಯ ಮಡಿಕೇರಿ ನಗರ ಮಂಡಲ ಕೇಂದ್ರ ಸರ್ಕಾರದ ಪರ ಪ್ರಚಾರ ಕಾರ್ಯವನ್ನು ಬಿರುಸುಗೊಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಕಳೆದ 10 ವರ್ಷಗಳ ಕಾಲ ದೇಶಕ್ಕಾಗಿ ಮಾಡಿದ ಅಭಿವೃದ್ಧಿ ಕಾರ್ಯಗಳು ಮತ್ತು ಸಂಸದ ಪ್ರತಾಪ್ ಸಿಂಹ ಅವರ ಸಾಧನೆಯ ಕೈಪಿಡಿಯನ್ನು ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ವಿತರಿಸಿದರು. ಮಾಜಿ ಶಾಸಕ ಕೆ.ಜಿ.ಬೋಪಯ್ಯ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಉಮೇಶ್ ಸುಬ್ರಮಣಿ, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ನಗರಸಭೆಯ ಬಿಜೆಪಿ ಸದಸ್ಯರು ಪಾಲ್ಗೊಂಡಿದ್ದರು.











