ಮಡಿಕೇರಿ ಮಾ.7 NEWS DESK : ಬಿರುನಾಣಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಂತೆ ನಡೆಯಿತು.
ಮಕ್ಕಳ ಸಂತೆಯನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ನೇತ್ರಾವತಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿ ವ್ಯಾಪಾರ, ವಹಿವಾಟು ಜ್ಞಾನ ಮೂಡಿಸಲು ಸಹಕಾರಿಯಾಗಿದೆ ಎಂದರು.
ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ತರಕಾರಿಗಳು, ಹಣ್ಣು ಹಂಪಲುಗಳನ್ನು ಸಂಭ್ರಮದಿಂದ ಮಾರಾಟ ಮಾಡಿದರು.
ಕಾರ್ಯಕ್ರಮದ ಮೂಲಕ ಗಣಿತದ ಮೂಲ ಕ್ರಿಯೆ ಹಾಗೂ ಲಾಭ ನಷ್ಟಗಳ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಲಾಯಿತು.
ಈ ಸಂದರ್ಭ ಮುಖ್ಯ ಶಿಕ್ಷಕ ರು ಸಹಶಿಕ್ಷಕರು ಭಾಗವಹಿಸಿದ್ದರು.








