ಮಡಿಕೇರಿ ಮಾ.7 NEWS DESK : ನಗರದ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಮಾರ್ಚ್, 08 ರಂದು ಬೆಳಗ್ಗೆ 9.30 ಗಂಟೆಯಿಂದ 12 ಗಂಟೆವರೆಗೆ ಸಾರ್ವಜನಿಕ ಭಕ್ತಾಧಿಗಳಿಗೆ ವಿಶೇಷ ಸೇವೆ ರುದ್ರಹೋಮ ಮತ್ತು ಏಕಾದಶ ರುದ್ರಾಭಿಷೇಕ ಹಾಗೂ ಅಲಂಕಾರ ಪೂಜೆ ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಮಹಾಪೂಜೆ, ನಂತರ ವಿವಿಧ ಪೂಜೆ, ಅರ್ಚನೆಗಳು ನಡೆಯಲಿದೆ.
ಈ ದಿನದಂದು ದೇವಾಲಯವು ರಾತ್ರಿಪೂರ್ತಿ ತೆರೆದಿರುತ್ತದೆ. ಭಕ್ತಾದಿಗಳು ದೇವಾಲಯದಲ್ಲಿ ನಡೆಯುವ ಪೂಜೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಬಾಜನರಾಗುವಂತೆ ಕೋರಿದೆ. ಹೆಚ್ಚಿನ ಮಾಹಿತಿಗೆ ದೂ.ಸಂ. 9902290302, 9845821566 ನ್ನು ಸಂಪರ್ಕಿಸಬಹುದು ಎಂದು ಶ್ರೀ ಓಂಕಾರೇಶ್ವರ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.







