ಮಡಿಕೇರಿ ಮಾ.7 NEWS DESK : ವಿರಾಜಪೇಟೆಯ ಪುರಸಭೆಯ ಸದಸ್ಯೆ ಮನೆಯಪಂಡ ದೇಚಮ್ಮ ಕಾಳಪ್ಪ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ ಅವರ ಸಮ್ಮುಖದಲ್ಲಿ ಶಾಸಕರ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ವಿರಾಜಪೇಟೆ ಪುರಸಭೆಯ ಹಾಲಿ ಸದಸ್ಯರು ಮಾಜಿ ಪಟ್ಟಣ ಪಂಚಾಯಿತಿಯ ಅಧ್ಯಕ್ಷರು, ಹಾಲಿ ಪಟ್ಟಣ ಸಹಕಾರ ಬ್ಯಾಂಕ್ ನಿರ್ದೇಶಕರಾದ ಮನೆಯಪಂಡ ದೇಚಮ್ಮ ಕಾಳಪ್ಪ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಈ ಸಂದರ್ಭ ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜಾ ಉತ್ತಪ್ಪ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಜಿ ಪೂಣಚ್ಚ, ವಿರಾಜಪೇಟೆ ನಗರ ಕಾಂಗ್ರೆಸ್ ಅಧ್ಯಕ್ಷ ಮಾದಂಡ ತಿಮ್ಮಯ್ಯ, ಪುರಸಭಾ ಸದಸ್ಯ ರಾಜೇಶ್ ಪದ್ಮನಾಭ , ಎಸ್.ಹೆಚ್.ಮತಿನ್, ವಕೀಲ ನರೇಂದ್ರ ಕಾಮತ್, ಗಣೇಶ್ ಮೊದಲಿಯಾರ್ ಹಾಗೂ ಪಕ್ಷದ ಪ್ರಮುಖ ಮುಖಂಡರು ಕಾರ್ಯಕರ್ತರು ಹಾಜರಿದ್ದರು.








