ಮಡಿಕೇರಿ ಮಾ.7 NEWS DESK : ಅಪಾಯಕ್ಕೆ ಆಹ್ವಾನ ನೀಡುತ್ತಿದ್ದ ಮಡಿಕೇರಿ ನಗರದ ಚೈನ್ ಗೇಟ್ ಬಸ್ ತಂಗುದಾಣವನ್ನು ಇಂದು ಜೆಸಿಬಿ ಯಂತ್ರದ ಮೂಲಕ ತೆರವುಗೊಳಿಸಲಾಯಿತು. ಮೈಸೂರು ರಸ್ತೆ ಮತ್ತು ಗೌಡ ಸಮಾಜ ರಸ್ತೆಯಿಂದ ಬರುತ್ತಿದ್ದ ವಾಹನಗಳ ನಡುವೆ ಅಪಘಾತವಾಗಿ ಸಾವು, ನೋವುಗಳು ಸಂಭವಿಸುತ್ತಿತ್ತು. ಅಪಘಾತಕ್ಕೆ ಈ ಬಸ್ ತಂಗುದಾಣವೇ ಕಾರಣ ಎನ್ನುವ ಅಭಿಪ್ರಾಯ ಸಾರ್ವಜನಿಕ ವಲಯದಿಂದ ಕೇಳಿ ಬಂದಿತ್ತು.
ಇತ್ತೀಚೆಗೆ ಯುವಕನೋರ್ವ ಅಪಘಾತದಿಂದ ಮೃತಪಟ್ಟಿದ್ದು, ಅಪಘಾತಕ್ಕೆ ನಾನೇ ಕಾರಣ ಎಂದು ಮನನೊಂದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣವೂ ನಡೆದಿತ್ತು. ಈ ಹಿನ್ನೆಲೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರ ಸೂಚನೆ ಮೇರೆಗೆ ಬಸ್ ತಂಗುದಾಣವನ್ನು ತೆರವುಗೊಳಿಸಲಾಗಿದೆ. ಪರ್ಯಾಯವಾಗಿ ಬೇರೆಡೆ ಬಸ್ ತಂಗುದಾಣ ನಿರ್ಮಿಸಲು ನಗರಸಭೆ ನಿರ್ಧರಿಸಿದೆ.










