ಮಡಿಕೇರಿ ಮಾ.7 NEWS DESK : ನದಿ ಮತ್ತು ನದಿ ಮೂಲಗಳಿಂದ ಪಂಪ್ ಸೆಟ್ ಬಳಸಿ ನೀರು ತೆಗೆಯುವುದನ್ನು ಕೊಡಗು ಜಿಲ್ಲಾಡಳಿತ ನಿಷೇಧಿಸಿದ್ದು, ಕಾಫಿ ಬೆಳೆಗಾರರು ಹಾಗೂ ಕಾರ್ಮಿಕರ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿಗಳು ತಮ್ಮ ಆದೇಶವನ್ನು ಪುನರ್ ಪರಿಶೀಲಿಸಬೇಕೆಂದು ಭಾರತೀಯ ಜನತಾ ಪಾರ್ಟಿಯ ವಿರಾಜಪೇಟೆ ಮಂಡಲ ಮನವಿ ಮಾಡಿದೆ.
ಗೋಣಿಕೊಪ್ಪದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿರಾಜಪೇಟೆ ಮಂಡಲದ ಅಧ್ಯಕ್ಷ ಮಾಚಿಮಂಡ ಸುವಿನ್ ಗಣಪತಿ, ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ, ಪ್ರಧಾನ ಕಾರ್ಯದರ್ಶಿಗಳಾದ ಮುದ್ಯಡ ಮಂಜು ಗಣಪತಿ ಹಾಗೂ ಕುಟ್ಟಂಡ ಅಜಿತ್, ಕೊಡಗಿನಲ್ಲಿ ಕಾಫಿ ಬೆಳೆಯನ್ನೇ ನಂಬಿಕೊಂಡು ಹೆಚ್ಚಿನ ಸಂಖ್ಯೆಯ ಬೆಳೆಗಾರರು ಹಾಗೂ 2ಲಕ್ಷಕ್ಕೂ ಅಧಿಕ ಕಾರ್ಮಿಕರು ಜೀವನ ಸಾಗಿಸುತ್ತಿದ್ದಾರೆ. ವರ್ಷಕ್ಕೆ ಒಂದು ಬಾರಿ ಕಾಫಿ ತೋಟಕ್ಕೆ ನೀರು ಹಾಕುವ ಸಮಯ ಇದಾಗಿದೆ. ಆದರೆ ಇದೀಗ ಜಿಲ್ಲಾಡಳಿತ ದಿಢೀರ್ ಆಗಿ ನದಿಮೂಲಗಳಿಂದ ನೀರು ತೆಗೆಯದಂತೆ ಆದೇಶ ಹೊರಡಿಸಿದ್ದು, ಬೆಳೆಗಾರರ ಆತಂಕಕ್ಕೆ ಕಾರಣವಾಗಿದೆ ಎಂದು ಗಮನ ಸೆಳೆದರು.
ಜಿಲ್ಲಾಧಿಕಾರಿಗಳು ಹೊರಡಿಸಿರುವ ಆದೇಶದಿಂದ ಬೆಳೆಗಾರರು ಪಂಪ್ ಸೆಟ್ ಬಳಸಿ ನೀರು ತೆಗೆಯುವಂತ್ತಿಲ್ಲ. ಕಾಫಿ ಗಿಡಗಳಿಗೆ ನೀರು ಹಾಕದಿದ್ದರೆ ಮುಂದಿನ ವರ್ಷ ಫಸಲು ಸಂಪೂರ್ಣವಾಗಿ ಕುಸಿಯುವ ಸಾಧ್ಯತೆ ಇದೆ. ಅತಿಹೆಚ್ಚು ತೆರಿಗೆ ತಂದು ಕೊಡುವ ವಾಣಿಜ್ಯ ಬೆಳೆ ಕಾಫಿಯಿಂದಾಗುವ ನಷ್ಟ ದೇಶದ ಆರ್ಥಿಕ ಕ್ಷೇತ್ರದ ಮೇಲೂ ಪರಿಣಾಮ ಬೀರಬಹುದು. ಕಾರ್ಮಿಕರು ಕೆಲಸ ಕಳೆದುಕೊಳ್ಳಬಹುದು. ಆದ್ದರಿಂದ ಜಿಲ್ಲಾಡಳಿತ ಆದೇಶವನ್ನು ಪುನರ್ ಪರಿಶೀಲಿಸಿ ಬೆಳೆಗಾರರು ಹಾಗೂ ಕಾರ್ಮಿಕರಿಗೆ ಎಲ್ಲೂ ತೊಂದರೆಯಾಗದ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ವಿಶಿಷ್ಟ ಭೌಗೋಳಿಕ ಹಿನ್ನೆಲೆ ಹೊಂದಿರುವ ಕೊಡಗಿನ ಪರಿಸರಕ್ಕೆ ಹಸಿರ ಕಾಫಿ ತೋಟಗಳು ತನ್ನದೇ ಆದ ಕೊಡುಗೆಯನ್ನು ನೀಡುತ್ತಿವೆ. ಅಂತರ್ಜಲ ಕಾಪಾಡಲು ಭತ್ತದ ಗದ್ದೆಗಳನ್ನು ಉಳಿಸಿಕೊಳ್ಳಬೇಕಾಗಿದೆ. ಭತ್ತ ಬೆಳೆಯುವ ರೈತರಿಗೆ ಸಹಾಯಧನ ನೀಡಿದರೆ ಗದ್ದೆಗಳು ಮತ್ತೆ ಭತ್ತದ ಕಣಜಗಳಾಗಿ ಮಾರ್ಪಡುತ್ತವೆ ಮತ್ತು ಅಂತರ್ಜಲ ಬತ್ತಿ ಹೋಗುವುದು ತಪ್ಪುತ್ತದೆ. ನೆರೆಯ ರಾಜ್ಯದಲ್ಲಿ ಭತ್ತದ ಬೆಳೆಗೆ ಸಹಾಯಧನ ಈಗಾಗಲೇ ನೀಡುತ್ತಿದ್ದು, ಇದೇ ಮಾದರಿಯಲ್ಲಿ ಕೊಡಗಿನ ಭತ್ತದ ಬೆಳೆಗಾರರಿಗೂ ಸಹಾಯಧನ ನೀಡಬೇಕು. ಗದ್ದೆಗಳಲ್ಲಿ ಭತ್ತದ ಕೃಷಿ ಮಾಡುವುದರಿಂದ ಭವಿಷ್ಯದಲ್ಲಿ ಅಂತರ್ಜಲದ ಮಟ್ಟವನ್ನು ಏರಿಕೆ ಮಾಡಿಕೊಳ್ಳಬಹುದೇ ಹೊರತು ವಾರ್ಷಿಕವಾಗಿ ಕಾಫಿ ತೋಟಗಳಿಗೆ ಹಾಕುವ ನೀರಿಗೆ ನಿರ್ಬಂಧ ಹೇರಿದರೆ ಯಾವುದೇ ಪ್ರಯೋಜನವಿಲ್ಲವೆಂದು ಅಭಿಪ್ರಾಯಪಟ್ಟರು.
ಕೊಡಗಿನ ಜೀವನದಿ ಕಾವೇರಿಯಿಂದ ರಾಜ್ಯದ ಅನೇಕ ಭಾಗಗಳಿಗೆ ನೀರು ಪೂರೈಕೆಯಾಗುತ್ತದೆ. ಕಾವೇರಿ ನದಿ ಹುಟ್ಟುವ ಕೊಡಗಿನಲ್ಲಿ ನೀರಿನ ಬಳಕೆಗೆ ಅಡ್ಡಿಪಡಿಸದೆ ಸರ್ಕಾರ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಭತ್ತ ಬೆಳೆಯುವ ರೈತರಿಗೆ ಸಹಾಯ ಧನ ನೀಡಬೇಕೆಂದು ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಅವರು ಕಲಾಪದಲ್ಲಿ ಕೋರಿಕೊಂಡಿದ್ದಾರೆ. ಈ ಬೇಡಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ರೈತಪರವಾಗಿ ಕ್ರಮ ಕೈಗೊಳ್ಳಬೇಕು ಎಂದು ರಾಕೇಶ್ ದೇವಯ್ಯ ಒತ್ತಾಯಿಸಿದರು.
Breaking News
- *ಭಾಗಮಂಡಲ : ಎಲ್ಲಾ ಜಾತಿ, ಧರ್ಮ, ಭಾಷೆಗಳಿರುವ ನಾಡಿನಲ್ಲಿ ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು. ಯಾವುದೇ ಕಾರಣಕ್ಕೂ ಧ್ವೇಷ ಮಾಡಬಾರದು : ಸಿಎಂ*
- *ರೂ.1.50 ಕೋಟಿ ಅನುದಾನ ಬಿಡುಗಡೆಗೆ ಸಿಎಂ ಗೆ ಮನವಿ ಸಲ್ಲಿಸಿದ ಮುದ್ದಂಡ ಹಾಕಿ ಉತ್ಸವ ಸಮಿತಿ*
- *ಅರ್ಚಕರ ಮೇಲೆ ಹಲ್ಲೆ : ಹೋರಾಟದ ಎಚ್ಚರಿಕೆ ನೀಡಿದ ವಿಶ್ವ ಹಿಂದು ಪರಿಷತ್ ಮಠ-ಮಂದಿರ್ ಘಟಕ*
- *ಫೆ.7 ರ ಪಾದಯಾತ್ರೆಗೆ ಸಿಎನ್ಸಿ ಬೆಂಬಲ*
- *ಕೊಡಗು : ಕಾರ್ಮಿಕರ ಸಾಮಾಜಿಕ ಭದ್ರತಾ ಕುರಿತು ಜನಜಾಗೃತಿ : ಆಟೋ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ*
- *ಜಿಲ್ಲೆಯ ಸಮಗ್ರ ಮಾಹಿತಿ ಹೊಂದಿರುವ ಅಧಿಕೃತ ವೆಬ್ಸೈಟ್ ಬಿಡುಗಡೆ*
- *ಕೊಡಗಿಗೆ ಸಚಿವ ಸ್ಥಾನ ನೀಡಲು ಒತ್ತಾಯ*
- *ಮರಗೋಡಿನಲ್ಲಿ ಗೌಡ ಕುಟುಂಬಗಳ ಟೆನ್ನಿಸ್ ಬಾಲ್ ಕ್ರಿಕೆಟ್*
- *ತಲಕಾವೇರಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ*
- *ವನ್ಯ ಜೀವಿ -ಮಾನವ ಸಂಘರ್ಷ ತಪ್ಪಿಸಲು ಎಲ್ಲಾ ಕ್ರಮ : ನಿವೇಶನ ಜಮೀನು ಇಲ್ಲದಿರುವವರಿಗೆ ಸರ್ಕಾರಿ ಭೂಮಿ : ಭಾಗಮಂಡಲದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ*