ಮಡಿಕೇರಿ ಮಾ.8 NEWS DESK : ಕೊಡಗು ಜಿಲ್ಲೆಯಾದ್ಯಂತ ಮಹಾ ಶಿವರಾತ್ರಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಗುತ್ತಿದೆ. ಎಲ್ಲಾ ದೇವಾಲಯಗಳಲ್ಲಿ ಶಿವ ಆರಾಧನೆ ಶ್ರದ್ಧಾಭಕ್ತಿಯಿಂದ ನಡೆಯುತ್ತಿದೆ.
ಮಡಿಕೇರಿ ನಗರದ ಶ್ರೀಓಂಕಾರೇಶ್ವರ ದೇವಾಲಯ ಹಾಗೂ ಭಾಗಮಂಡಲದ ಶ್ರೀಭಗಂಡೇಶ್ವರ ದೇವಾಲಯದಲ್ಲಿ ಹೋಮ ಹವನಾದಿ, ಅಭಿಷೇಕ, ಮಂತ್ರ ಪಠಣ, ಅಲಂಕಾರ ಪೂಜೆ, ಮಹಾಪೂಜೆ ಸೇರಿದಂತೆ ವಿಶೇಷ ಧಾರ್ಮಿಕ ಕೈಂಕರ್ಯಗಳೊAದಿಗೆ ಶಿವನನ್ನು ಪೂಜಿಸಲಾಗುತ್ತಿದೆ. ಭಕ್ತರು ಉಪವಾಸ ವ್ರತದೊಂದಿಗೆ ಶಿವ ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ವಿವಿಧ ದೇವಾಲಯಗಳಲ್ಲಿ ಜಾಗರಣೆ ಪ್ರಯುಕ್ತ ಭಜನೆ ಮತ್ತು ಭಕ್ತಿ ಪ್ರಧಾನ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.











